ಬೆಂಗಳೂರಿನ ವೃಷಭಾವತಿ ನದಿ ಉಳಿಸಲು ಬಿಬಿಎಂಪಿ ಮಾಸ್ಟರ್ ಪ್ಲಾನ್!
Vrishabhavati Valley: ಬೆಂಗಳೂರಿನ ಜೀವನದಿಯಾಗಿದ್ದ ನದಿಯೊಂದನ್ನು ಸರಿಪಡಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ. ಒಂದು ಕಾಲದಲ್ಲಿ ಬೆಂಗಳೂರಿನ ಜೀವನಾಡಿಯಾಗಿದ್ದ ಈ ನದಿ ಕಳೆದ ಹಲವು ದಶಕಗಳಿಂದ ಕೊಳಚೆ ನೀರು ಸೇರಿ ಹಾಳಾಗಿದೆ. ಇದೀಗ ಈ ನದಿಯನ್ನು ಉಳಿಸುವುದಕ್ಕೆ ಪ್ಲಾನ್ ಮಾಡಿದೆ. ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರುವುದನ್ನು ನಿಯಂತ್ರಣ ಮಾಡುವುದಕ್ಕೆ ಸಮಗ್ರ ಯೋಜನೆ ರೂಪಿಸುತ್ತಿರುವುದಾಗಿ ಬಿಬಿಎಂಪಿ ಹೇಳಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದಾರೆ. ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರಿ ಕಲುಷಿತ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಸಮಗ್ರ ಯೋಜನೆ ರೂಪಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಲಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವೃಷಭಾವತಿ ವ್ಯಾಲಿ ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಸಭೆಯ ಸಹ ನಡೆದಲಾಗಿದೆ. ಈ ಸಂಬಂಧ ಮಾತನಾಡಿರುವ ತುಷಾರ್ ಗಿರಿನಾಥ್ ಅವರು, ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಸೇರಿ ಕಲುಷಿತ ಆಗುತ್ತಿದೆ. ಇದನ್ನು ತಡೆಯುವ ಸಲುವಾಗಿ ಪಾಲಿಕೆ, ಜಲಮಂಡಳಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸುವುದಕ್ಕೆ ಸೂಚಿಸಲಾಗಿದೆ.

ವೃಷಭಾವತಿ ವ್ಯಾಲಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎನ್ನುವುದನ್ನು ಮೊದಲು ಪರಿಶೀಲನೆ ಮಾಡಿ. ಇದಾದ ಮೇಲೆ ಎಲ್ಲೆಲ್ಲಿ ಕೊಳಚೆ ನೀರು ಸೇರುತ್ತಿದೆ ಎನ್ನುವುದನ್ನು ಪಟ್ಟಿ ಮಾಡಬೇಕು. ಅಲ್ಲದೆ ನದಿ ಪಕ್ಕದಲ್ಲಿ ಎಷ್ಟು ಅಪಾರ್ಟ್ಮೆಂಟ್‌ಗಳು ಬರಲಿವೆ. ಖಾಸಗಿ ಅಪಾರ್ಟ್ಮೆಂಟ್‌ಗಳಿಂದ ನೇರವಾಗಿ ಬರುತ್ತಿದೆ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಇದರೊಂದಿಗೆ ಜೊತೆಗೆ ಅಪಾರ್ಟ್ಮೆಂಟ್‌ಗಳಲ್ಲಿ ಅಳವಡಿಸಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ಸರಿಯಾಗಿ ಕೆಲಸ ಮಾಡುತ್ತಿದೆಯೇ ಎನ್ನುವುದನ್ನು ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ.
ಇನ್ನು ಜಲಮಂಡಳಿ ವತಿಯಿಂದ ಎಷ್ಟು ಎಸ್‌ಟಿಪಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಎಸ್.ಟಿಪಿಗಳನ್ನು ನಿರ್ಮಾಣ ಮಾಡಲು ಯಾವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎನ್ನುವುದರ ವಿವರವಾದ ಮಾಹಿತಿ ನೀಡಬೇಕು. ಅಲ್ಲದೆ ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್‌ಗಳ ಮೂಲಕ ಎಸ್.ಟಿ.ಪಿಗೆ ಹೋಗುವ ವ್ಯವಸ್ಥೆ ಮಾಡಬೇಕು ಎಂದೂ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ 28.08 ಕಿ.ಮೀ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿಯ ವ್ಯಾಪ್ತಿ ಇದೆ. ವಿ-100 ವ್ಯಾಲಿ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಇದ್ದರೆ. ವಿ-200 ವ್ಯಾಲಿ ಗೊರಗುಂಟೆ ಪಾಳ್ಯ - ಪೀಣ್ಯ ಮೆಟ್ರೊ ನಿಲ್ದಾಣದಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದೆ.
ಒತ್ತುವರಿ ತೆರವು ಸಂಬಂಧ ಕ್ರಮವಹಿಸಿ: ವೃಷಭಾವತಿ ವ್ಯಾಲಿಗೆ ಸಂಪರ್ಕ ಕಲ್ಪಿಸುವ 42 ಕೆರೆಗಳು ಬರಲಿದೆ. ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳ ಪೈಕಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಸ ಹಾಕದಂತೆ ಫೆನ್ಸಿಂಗ್ ಅಳವಡಿಸಿಕೊಳ್ಳಿ: ಇನ್ನು ವೃಷಭಾವತಿ ವ್ಯಾಲಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿರುವ ಕಡೆ ಫೆನ್ಸಿಂಗ್ ಅಳವಡಿಸುವ ಕೆಲಸ ಮಾಡಬೇಕು. ಇನ್ನು ಜೆಸಿಬಿಗಳನ್ನು ಇಟ್ಟು ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ವೃಷಭಾವತಿ ವ್ಯಾಲಿಯಲ್ಲಿ ಸಂಪೂರ್ಣವಾಗಿ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.












Click it and Unblock the Notifications