ದೇವೇಗೌಡ ಭೇಟಿಯಾದ ಮೇಯರ್ ಮಂಜುನಾಥ್ ರೆಡ್ಡಿ!
ಬೆಂಗಳೂರು, ಆಗಸ್ಟ್ 23 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಸುವ ಕುರಿತು ಚರ್ಚೆ ನಡೆಯುತ್ತಿದೆ. ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಸೆಪ್ಟೆಂಬರ್ 19ರಂದು ಚುನಾವಣೆ ನಡೆಯಲಿದೆ.
ಮಂಗಳವಾರ ಬಿಬಿಎಂಪಿ ಮೇಯರ್ ಬಿ.ಎನ್.ಮಂಜುನಾಥ್ ರೆಡ್ಡಿ ಮತ್ತು ಆಡಳಿತ ಪಕ್ಷದ ನಾಯಕ, ದತ್ತಾತ್ರೇಯ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಆರ್.ಎಸ್. ಸತ್ಯನಾರಾಯಣ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದರು.[ಮೇಯರ್ ಚುನಾವಣೆ : ಜೆಡಿಎಸ್ ಬೆಂಬಲ ಯಾರಿಗೆ?]

ಸೆಪ್ಟೆಂಬರ್ 19ರಂದು ನಡೆಯಲಿರುವ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು. ಈ ಅವಧಿಯಲ್ಲಿಯೂ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುಂದುವರೆಯುವ ಸಾಧ್ಯತೆ ಇದೆ.[JDSಗೆ ಸೆಡ್ಡು ಹೊಡೆಯಲಿದ್ದಾರೆ ಭಿನ್ನಮತೀಯರು]
ಸದ್ಯ, ಮೇಯರ್ ಆಗಿರುವ ಬಿ.ಎನ್.ಮಂಜುನಾಥ್ ರೆಡ್ಡಿ ಮತ್ತು ಉಪ ಮೇಯರ್ ಎಸ್.ಪಿ.ಹೇಮಲತಾ ಅವರ ಅಧಿಕಾರಾವಧಿ ಸೆಪ್ಟೆಂಬರ್ 14ರಂದು ಕೊನೆಗೊಳ್ಳಲಿದೆ. ಸೆ.19ರಂದು ಚುನಾವಣೆ ನಡೆಯಲಿದ್ದು, ಮೇಯರ್ ಪಟ್ಟ ಹಿಂದುಳಿದ ವರ್ಗ (ಬಿ) ಮಹಿಳೆ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.[ಬಿಬಿಎಂಪಿಯಲ್ಲಿ ಮೈತ್ರಿ ಮುರಿಯುವ ಮಾತನಾಡಿದ ಕುಮಾರಸ್ವಾಮಿ!]
ಮೈತ್ರಿ ಮುಂದುವರೆಯುತ್ತಾ? : ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಬಾಂಧವ್ಯ ಈಗ ಸರಿಯಾಗಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಆರು ತಿಂಗಳ ಹಿಂದೆಯೇ ಮೈತ್ರಿ ಮುರಿಯುವ ಮಾತನಾಡಿದ್ದರು. ಸರಿಯಾಗಿ ಆಡಳಿತ ನಡೆಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಟೀಕಿಸಿದ್ದರು.
ಹಿಂದೆ ಮೈತ್ರಿ ವಿಚಾರದಲ್ಲಿ ಪ್ರಮುಖ ಪಾತ್ರವಹಿಸಿದ್ದ ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಅವರು, 'ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದಂತೆ ಕೇಳುತ್ತೇವೆ. ದೇವೇಗೌಡರ ಜೊತೆ ಮಾತನಾಡುವ ಹೊಣೆಯನ್ನು ಅವರಿಗೆ ನೀಡುತ್ತೇವೆ' ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications