ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಲಹಳ್ಳಿಯಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ಕಾಮಗಾರಿ ಶೀಘ್ರ ಪೂರ್ಣ

|
Google Oneindia Kannada News

ಬೆಂಗಳೂರು, ಜೂನ್ 13: ವಿಪರೀತ ಟ್ರಾಫಿಕ್ ಜಾಮ್ ಉಂಟಾಗುತ್ತಿರುವ ಕಾರಣ ಕುಂದಲಹಳ್ಳಿಯಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸುವ ಮಾಡಲಾಗುತ್ತದೆ.

ಕುಂದಲಹಳ್ಳಿ ಜಂಕ್ಷನ್ ಬಳಿ 108.5 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಶೀಘ್ರ ಮುಗಿಸುವಂತೆ ಮೇಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕುಂದಲಹಳ್ಳಿ ಜಂಕ್ಷನ್‌ನಲ್ಲಿ ಕೈಗೊಂಡಿರುವ ಕೆಳ ಸೇತುವೆ ನಿರ್ಮಾಣ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು, ವಾಹನ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಕಾಮಗಾರಿ ವೇಗವಾಗಿ ನಡೆಯುವ ಅಗತ್ಯವಿದೆ.

ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಯಡಿ 17.5 ಕಿ.ಮೀ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರೊಂದಿಗೆ ಪಾದಚಾರಿ ಮಾರ್ಗ, ಚರಂಡಿಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತದೆ.

BBMP Mayor instructed to expedite the signal free corridor

ಇಂದಿರಾನಗರ 80 ಅಡಿ ರಸ್ತೆಯನ್ನು ಟೆಂಡರ್‌ಸ್ಯೂರ್ ಯೋಜನೆಯಡಿ ಅಭೊವೃದ್ಧಿಪಡಿಸಲಾಗುತ್ತಿದೆ.ಯಾವುದೇ ಮರಗಳನ್ನು ತೆರವುಗೊಳಿಸುತ್ತಿಲ್ಲ ಎನ್ನುವುದನ್ನು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಲಾಯಿತು.

ಮಳೆಗಾಲದ ತರ್ತು ನಿರ್ವಹಣೆಗೆ ಬಿಬಿಎಂಪಿಯ ಬೃಹತ್ ರಸ್ತೆಗಳ ಕಾಮಗಾರಿ ವಿಭಾಗದಿಂದ 24 ತಂಡಗಳನ್ನು ರಚಿಸಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಯಲಹಂಕ ಉಪನಗರ ಡೈರಿ ವೃತ್ತ ಬಳಿ ಮಳೆಗಾಲದ ತುರ್ತು ನಿರ್ವಹಣಾ ತಂಡ ಕೈಗೊಂಡಿರುವ ಕಾಮಗಾರಿ ಹಾಗೂ ಫ್ಲೈಓವರ್ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.

English summary
BBMP mayor took inspection of signal free corridor project and instructed to expedite the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X