• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾರಾಗಲಿದ್ದಾರೆ ಬಿಬಿಎಂಪಿಯ ನೂತನ ಮೇಯರ್?

By Gururaj
|

ಬೆಂಗಳೂರು, ಆಗಸ್ಟ್ 28 : ಸೆಪ್ಟೆಂಬರ್ ತಿಂಗಳಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಬಾರಿ ಮೇಯರ್ ಸ್ಥಾನ ಮಹಿಳೆಗೆ ಮೀಸಲಾಗಿದ್ದು, ಯಾರು ಬೆಂಗಳೂರಿನ ಪ್ರಥಮ ಪ್ರಜೆಯಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಹಾಲಿ ಮೇಯರ್ ಸಂಪತ್ ರಾಜ್ ಮತ್ತು ಉಪ ಮೇಯರ್ ಪದ್ಮಾವತಿ ನರಸಿಂಹಮೂರ್ತಿ ಅವರ ಅವಧಿ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಳ್ಳಲಿದೆ. ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗದ ಮಹಿಳೆ ಮತ್ತು ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಬಿಬಿಎಂಪಿ ಮೇಯರ್ ಹುದ್ದೆ ಲಿಂಗಾಯತರಿಗೆ, ರಾಹುಲ್‌ ಗಾಂಧಿಗೆ ಪತ್ರ!

ಬಿಬಿಎಂಪಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಮತ್ತು ಪಕ್ಷೇತರರು ಸೇರಿ 198 ಸದಸ್ಯರಿದ್ದಾರೆ. ಬೆಂಗಳೂರಿನ ನಿವಾಸಿಗಳಾದ ಸಂಸದರು, ಶಾಸಕರು, ರಾಜ್ಯಸಭಾ ಸದಸ್ಯರು ಬಿಬಿಎಂಪಿ ಮೇಯರ್ ಆಯ್ಕೆಯಲ್ಲಿ ಮತದಾನ ಮಾಡಲಿದ್ದಾರೆ. ಮೇಯರ್ ಆಯ್ಕೆಗೆ ಬೇಕಾದ ಮ್ಯಾಜಿಕ್ ನಂಬರ್ 134.

ಬ್ರಿಟಿಷರ ಕಾಲದ ಗೌನನ್ನು ಮೇಯರ್ ಕಳಚುವುದು ಯಾವಾಗ?

ನಾಲ್ಕಕ್ಕೂ ಹೆಚ್ಚು ಕಾರ್ಪೊರೇಟರ್‌ಗಳು ಮೇಯರ್ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ವ್ಯಾಪ್ತಿಯ ಕಾರ್ಪೊರೇಟರ್‌ಗಳನ್ನು ಮೇಯರ್ ಮಾಡಲು ಶಾಸಕರು ಸಹ ಲಾಬಿ ಮಾಡುತ್ತಿದ್ದಾರೆ. ಯಾರು ಮೇಯರ್ ಆಗಲಿದ್ದಾರೆ? ಕಾದು ನೋಡಬೇಕು.

ಗಂಗಾಂಬಿಕಾ ಮಲ್ಲಿಕಾರ್ಜುನ್

ಗಂಗಾಂಬಿಕಾ ಮಲ್ಲಿಕಾರ್ಜುನ್

ಜಯನಗರ ವಾರ್ಡ್‌ (153) ಕಾರ್ಪೊರೇಟರ್ ಗಂಗಾಂಬಿಕಾ ಮಲ್ಲಿಕಾರ್ಜುನ್ ಅವರ ಹೆಸರು ಮೇಯರ್ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿದೆ. 2 ನೇ ಬಾರಿಗೆ ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ಗಂಗಾಬಿಕಾ ಮಲ್ಲಿಕಾರ್ಜುನ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ.

ಸೌಮ್ಯಾ ಶಿವಕುಮಾರ್

ಸೌಮ್ಯಾ ಶಿವಕುಮಾರ್

ಶಾಂತಿನಗರ ವಾರ್ಡ್‌ ಕಾರ್ಪೊರೇಟರ್ ಸೌಮ್ಯಾ ಶಿವಕುಮಾರ್ ಅವರ ಹೆಸರು ಸಹ ಮೇಯರ್ ಹುದ್ದೆಗೆ ಕೇಳಿಬರುತ್ತಿದೆ. ಶಾಂತಿನಗರ ಕ್ಷೇತ್ರದ ಶಾಸಕ ಎನ್‌.ಎ.ಹ್ಯಾರೀಸ್ ಅವರು ತಮ್ಮ ಕ್ಷೇತ್ರದ ಕಾರ್ಪೊರೇಟರ್‌ ಅನ್ನು ಮೇಯರ್ ಮಾಡಲು ಬಯಸಿದ್ದಾರೆ.

ಲಾವಣ್ಯ ಜಿ.ರೆಡ್ಡಿ

ಲಾವಣ್ಯ ಜಿ.ರೆಡ್ಡಿ

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಲಿಂಗರಾಜಪುರ ವಾರ್ಡ್‌ ಕಾರ್ಪೊರೇಟರ್ ಲಾವಣ್ಯ ಜಿ.ರೆಡ್ಡಿ ಅವರ ಹೆಸರು ಸಹ ಮೇಯರ್ ಹುದ್ದೆಗೆ ಕೇಳಿಬರುತ್ತಿದೆ. ಸಚಿವರಾದ ಕೆ.ಜೆ.ಜಾರ್ಜ್ ಅವರು ಲಾವಣ್ಯ ಅವರನ್ನು ಬೆಂಬಲಿಸುವ ಸಾಧ್ಯತೆ ಇದೆ.

ನೇತ್ರಾ ನಾರಾಯಣ್

ನೇತ್ರಾ ನಾರಾಯಣ್

ಕಾವಲ್ ಭೈರಸಂದ್ರ ವಾರ್ಡ್ ಕಾರ್ಪೊರೇಟರ್ ನೇತ್ರಾ ನಾರಾಯಣ್, ವೃಷಭಾವತಿ ವಾರ್ಡ್‌ನ ಎಸ್‌.ಪಿ.ಹೇಮಲತಾ ಅವರ ಹೆಸರು ಸಹ ಮೇಯರ್ ಹುದ್ದೆಗೆ ಕೇಳಿಬರುತ್ತಿದೆ. ಯಾರು ಮೇಯರ್ ಆಗಲಿದ್ದಾರೆ? ಎಂದು ಕಾದು ನೋಡಬೇಕು.

ರಾಹುಲ್ ಗಾಂಧಿಗೆ ಪತ್ರ

ರಾಹುಲ್ ಗಾಂಧಿಗೆ ಪತ್ರ

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರಿಗೆ ಮೇಯರ್ ಸ್ಥಾನವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಜಯನಗರ ವಾರ್ಡ್‌ ಕಾರ್ಪೊರೇಟರ್ ಗಂಗಾಂಬಿಕಾ ಮಲ್ಲಿಕಾರ್ಜುನ್ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅವರು ಈ ಬಾರಿ ಮೇಯರ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

English summary
The term of the current Bruhat Bengaluru Mahanagara Palike (BBMP) Mayor R.Sampath Raj coming to an end in September 2018. Many corporators in the race for the post of mayor. Mayor posr reserved for General Category (Woman) and Deputy Mayor is in the General Category.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X