ಬೆಂಗಳೂರಿನಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಕೆ?
ಬೆಂಗಳೂರು, ಜುಲೈ 17: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೊಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಯುವ ಸುಳಿವು ಸಿಕ್ಕಿದೆ. ನಗರದಲ್ಲಿ ಕೊರೊನಾ ವೈರಸ್ ಚೈನ್ ಬ್ರೇಕ್ ಮಾಡಲು ಒಂದು ವಾರ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
Recommended Video
ಆದರೆ, ಈ ಅವಧಿಯನ್ನು ಮತ್ತೊಂದು ವಾರಕ್ಕೆ ಮುಂದುವರಿಸಬೇಕು ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಮತ್ತು ತಂಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ ಎಂಬ ವಿಚಾರ ತಿಳಿದು ಬಂದಿದೆ.
It will be better if we get more time to tackle #COVID19 cases, we wish for the extension lockdown of lockdown for one more week. We have given the proposal to government: M Goutham Kumar, Bruhat Bengaluru Mahanagar Palike (BBMP) Mayor (file pic) pic.twitter.com/pHw1OZ9FC0
— ANI (@ANI) July 17, 2020
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ಗೌತಮ್ ಕುಮಾರ್ ''ಕೊವಿಡ್ ವಿರುದ್ಧ ಹೋರಾಡಲು ನಮಗೆ ಇನ್ನು ಸ್ವಲ್ಪ ಸಮಯ ಸಿಕ್ಕರೆ ಸೂಕ್ತ, ಹಾಗಾಗಿ ಇನ್ನೊಂದು ವಾರಗಳ ಲಾಕ್‌ಡೌನ್ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ'' ಎಂದಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೇಸ್‌ಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 2 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾಗಿತ್ತು. ಮುಂದಿನ ದಿನದಲ್ಲಿ ಇದರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿನ್ನೆಲೆ ಇಂದು ಸಿಎಂ ಯಡಿಯೂರಪ್ಪ ಅವರ ಜೊತೆ ಬೆಂಗಳೂರು ಎಂಟು ವಲಯಗಳ ಉಸ್ತುವಾರಿ ಸಚಿವರು, ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಂದಿನ ಹಂತದ ಯೋಜನೆಗಳ ಬಗ್ಗೆ ನಿರ್ಧಾರವಾಗಲಿದೆ. ಲಾಕ್‌ಡೌನ್ ವಿಸ್ತರಣೆ ಕುರಿತು ಸಹ ಈ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.
ಅಂದ್ಹಾಗೆ, ಜುಲೈ 14ರ ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ಒಂದು ವಾರಗಳ ಲಾಕ್‌ಡೌನ್ ಜುಲೈ 22ರ ಬೆಳಗ್ಗೆ 6 ಗಂಟೆಯ ಮುಕ್ತಾಯವಾಗಲಿದೆ.












Click it and Unblock the Notifications