ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜ್ಞಾನ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ನೆಹರು ತಾರಾಲಯ

|
Google Oneindia Kannada News

ಬೆಂಗಳೂರು, ಫೆಬ್ರವರಿ 20: ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಯೋಜನೆ ಅಡಿ ನಗರದ ಜವಹಾರ್ ಲಾಲ್ ನೆಹರು ತಾರಾಲಯವನ್ನು 20 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯ ಸಭಾಂಗಣವನ್ನು ನಿರ್ಮಿಸಲು ಗುರುವಾರ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದರು.

600 ಜನರು ಕುಳಿತುಕೊಳ್ಳುವ ಸಾಮರ್ಥ್ಯ ಮತ್ತು ಒಟ್ಟು 40,350 ಚದರ ಅಡಿ ವಿಸ್ತೀರ್ಣದ ಆಧುನಿಕ, ಸುಸಜ್ಜಿತ ಕಟ್ಟಡವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಕಟ್ಟಡದಲ್ಲಿ 4 ಉಪನ್ಯಾಸ ಸಭಾಂಗಣಗಳು, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ, ಅತಿಥಿ ಗಣ್ಯರುಗಳಿಗೆ ಕಾಯುವ ಕೋಣೆ, ನೆಲಮಹಡಿಯಲ್ಲಿ ಪಾರ್ಕಿಂಗ್ ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ನೂತನ ಕಟ್ಟಡದಲ್ಲಿ ಸಂಗೀತ, ನಾಟಕ, ಸೆಮಿನಾರ್‌ಗಳು ಸೇರಿದಂತೆ ಇನ್ನಿತರ ಪ್ರದರ್ಶನಕ್ಕಾಗಿ ಸಭಾಂಗಣಗಳನ್ನು ಬಳಸಬಹುದಾಗಿರುತ್ತದೆ. ಇದರಿಂದಾಗಿ ನಗರದಲ್ಲಿ ಉನ್ನತ ಮಟ್ಟದ ಸೌಲಭ್ಯಗಳುಳ್ಳ ವೈಜ್ಞಾನಿಕ ಕಟ್ಟಡ ನಿರ್ಮಾಣವಾಗಲಿದೆ.

ಪುಟ್‌ಪಾತ್ ಒತ್ತುವರಿದಾರರಿಗೆ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಮೇಯರ್ಪುಟ್‌ಪಾತ್ ಒತ್ತುವರಿದಾರರಿಗೆ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಮೇಯರ್

ನಂತರ ಸಾರ್ವಜನಿಕ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಕುರಿತು ಮಾಹಿತಿ ಪೋಸ್ಟರ್ ಗಳನ್ನು ಇಂದು ಬಿಡುಗಡೆ ಮಾಡಲಾಯಿತು. ಬೆಂಗಳೂರು ನಾಗರೀಕರು EaseofLiving2019 ಸಮೀಕ್ಷೆಯಲ್ಲಿ ಭಾಗವಹಿಸಿ ನಮ್ಮ ಬೆಂಗಳೂರು ಉತ್ತಮ ಶ್ರೇಣಿ ಪಡೆಯಲು ಕೋರಿದರು.

BBMP Officers Inspection Jawaharlal Nehru Planetarium Bangalore

ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜವಹಾರ್ ಲಾಲ್ ನೆಹರು ತಾರಾಲಯದಲ್ಲಿ ವಿನೂತನ ಮಾದರಿಯಲ್ಲಿ ಸಭಾಂಗಣ ನಿರ್ಮಿಸುವ ಸಂಬಂಧ ಇಂದು ಸ್ಥಳ ತಪಾಸಣೆ ನಡೆಸಲಾಯಿತು. ಈ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಮುಖ್ಯ ಅಭಿಯಂತರ ಶ್ರೀನಿವಾಸ್, ವಾಸ್ತುಶಿಲ್ಪಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

English summary
BBMP Officers Inspection Jawaharlal Nehru Planetarium Bangalore. For Constucted New Building.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X