ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಕೇಂದ್ರ ಕಚೇರಿಗೂ ಕೊರೊನಾ ವೈರಸ್ ಕಾಟ!

|
Google Oneindia Kannada News

ಬೆಂಗಳೂರು, ಜೂನ್.01: ನೊವೆಲ್ ಕೊರೊನಾ ವೈರಸ್ ಸೋಂಕು ಯಾವಾಗ ಯಾರಿಗೆ ಹೇಗೆ ಅಂಟಿಕೊಳ್ಳುತ್ತೆ ಎನ್ನುವುದನ್ನು ಊಹಿಸುವುದಕ್ಕೂ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಅಂಥದ್ದೇ ಮತ್ತೊಂದು ಘಟನೆ ಸೋಮವಾರ ಬೆಳಕಿಗೆ ಬಂದಿದೆ.

Recommended Video

ಚೈನ್ ಕದಿಯಲು ಮಹಿಳೆಯ ಕುತ್ತಿಗೆಗೆ ಕೈ ಹಾಕಿದ ಕಳ್ಳರು.... ನಂತರ ನಡೆದಿದ್ದೇನು? | Oneindia Kannada

ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗೆ ಮಹಾಮಾರಿ ಅಂಟಿಕೊಂಡಿದ್ದು ಮತ್ತಷ್ಟು ಆಂತಕವನ್ನು ಹೆಚ್ಚಿಸಿದೆ.

ಬೆಂಗಳೂರಿನಲ್ಲಿ ಆತಂಕ, ಕಂಟೇನ್ಮೆಂಟ್ ಪ್ರದೇಶಗಳು ಏರಿಕೆಬೆಂಗಳೂರಿನಲ್ಲಿ ಆತಂಕ, ಕಂಟೇನ್ಮೆಂಟ್ ಪ್ರದೇಶಗಳು ಏರಿಕೆ

ಬಿಬಿಎಂಪಿ ಕೇಂದ್ರ ಕಚೇರಿಯ ನೆಲ ಮಹಡಿ ಮತ್ತು ಮೊದಲ ಮಹಡಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಕಚೇರಿಯನ್ನು ಬಂದ್ ಮಾಡಲು ತೀರ್ಮಾನಿಸಿದ್ದು, ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

BBMP official Tests Positive for Coronavirus

ಕ್ವಾರೆಂಟೈನ್ ಆಗಿದ್ದವರ ಜೊತೆಗೆ ಸಂಪರ್ಕ:

ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗೆ ಕೊರೊನಾ ವೈರಸ್ ಸೋಂಕು ಯಾವ ಮೂಲದಿಂದ ಅಂಟಿಕೊಂಡಿದೆ ಎನ್ನುವುದು ಇದುವರೆಗೂ ಸ್ಪಷ್ಟವಾಗಿಲ್ಲ. ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಜೊತೆಗಿನ ಪ್ರಾಥಮಿಕ ಸಂಪರ್ಕದಿಂದ ಸೋಂಕು ಅಂಟಿಕೊಂಡಿತಾ. ಅಥವಾ ಕ್ವಾರೆಂಟೈನ್ ಕೇಂದ್ರಗಳ ಜೊತೆಗೆ ಅಧಿಕಾರಿಯು ಇಟ್ಟುಕೊಂಡಿದ್ದ ಸಂಪರ್ಕದಿಂದ ಕೊರೊನಾ ವೈರಸ್ ತಗಲಿತಾ ಎನ್ನುವುದು ಇದುವರೆಗೂ ಸ್ಪಷ್ಟವಾಗಿಲ್ಲ.

English summary
BBMP official Tests Positive for Coronavirus. Ground Floor And First Floor Of Office Are Sanitised.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X