ಓಡ್ರೋ.. ಓಡ್ರೋ ಇದು ಡಿ.ಕೆ ಶಿವಕುಮಾರ್‌ ಆರ್ಡರ್‌!

ಕರ್ನಾಟಕದಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಬೇಸಿಗೆ ಶುರುವಾಗಿಲ್ಲ. ಈ ರೀತಿ ಇರುವಾಗಲೇ ಬೆಂಗಳೂರಿನಲ್ಲಿ ಈ ಬಾರಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಅಲ್ಲದೆ ಬೆಂಗಳೂರಿನಲ್ಲಿ ಹಲವು ಸಮಸ್ಯೆಗಳಿವೆ. ಭಾನುವಾರ ನಗರ ಪ್ರದಕ್ಷಿಣೆ ಮಾಡಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಖಡಕ್‌ ಸೂಚನೆ ಕೊಟ್ಟಿದ್ದು. ಓಡ್ರೋ.. ಓಡ್ರೋ ಇದು ಡಿ.ಕೆ ಶಿವಕುಮಾರ್‌ ಆರ್ಡರ್‌ ಅಂತ ಬಿಬಿಎಂಪಿಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಪರಿಶೀಲಿಸುವಂತೆ ಡಿ.ಕೆ ಶಿವಕುಮಾರ್‌ ಅವರು ಭಾನುವಾರ ಸೂಚನೆ ನೀಡಿದ್ದರು.

ಡಿ.ಕೆ ಶಿವಕುಮಾರ್‌ ಅವರು ಆರ್ಡರ್‌ ಮೇಲೆ ಬಿಬಿಎಂಪಿಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

BBMP Officials Running on Orders From DK Shivakumar

ಬೆಂಗಳೂರಿನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಇದೆಲ್ಲವೂ ಡಿ.ಕೆ ಶಿವಕುಮಾರ್‌ ಆರ್ಡರ್‌ ಪ್ರಭಾವ. ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಿ ಅಂತ ತುಷಾರ್‌ ಗಿರಿನಾಥ್ ಅವರು ಸೂಚನೆ ಕೊಟ್ಟಿದ್ದಾರೆ.

ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂತೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಹೊರ ಗುತ್ತಿಗೆದಾರರನ್ನು ನಿಯೋಜಿಸಿದೆ. ಅವರ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚನೆ ಕೊಡಲಾಗಿದೆ.

ನಗರದಲ್ಲಿ‌ ಜಲಮಂಡಳಿವತಿಯಿಂದ ಕಾವೇರಿ 5 ಹಂತಕ್ಕೆ ಚಾಲನೆ ನೀಡಿರುವುದರಿಂದ 2025ರ ಏಪ್ರಿಲ್ 1ರಿಂದ ಕುಡಿಯುವ ನೀರಿನ ವಿಚಾರವಾಗಿ ಜಲಮಂಡಳಿ ಇಲಾಖೆಯದ್ದು ಮಾತ್ರ ಜವಾಬ್ದಾರಿ ಇರುತ್ತದೆ. ಈ ಸಂಬಂಧ ಪಾಲಿಕೆಯ ಒಡೆತನದಲ್ಲಿದ್ದ ಬೋರ್ ವೆಲ್‌ಗಳನ್ನು ಹಸ್ತಾಂತರಿಸುವ ಸಂಬಂಧ ಈಗಾಗಲೇ ಪತ್ರ ಬರೆಯಲಾಗಿದೆ. ಅದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಹ ಜಲಮಂಡಿಳಿಗೆ ಹಸ್ತಾಂತರಿಸಲಾಗುವು ಎಂದು ಅವರು ಹೇಳಿದ್ದಾರೆ.

ಕುಡಿಯುವ ನೀರಿನ ವಿಚಾರವನ್ನು ಇನ್ನು ಮುಂದೆ ಸಂಪೂರ್ಣವಾಗಿ ಜಲಮಂಡಳಿಯೇ ನಿರ್ವಹಣೆ ಮಾಡಲಿದೆ. ಕುಡಿಯುವ ನೀರಿನ ವಿಚಾರವಾಗಿ ಹಣಕಾಸು ಇಲಾಖೆಯಿಂದ ಪಾಲಿಕೆಗೆ ಬರುವ ಅನುದಾನವನ್ನು ಜಲಮಂಡಳಿಗೆ ವರ್ಗಾಯಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಡಿ.ಕೆ ಶಿವಕುಮಾರ್‌ ನಗರ ಸುತ್ತಾಟ ಪ್ರಭಾವ: ಡಿ.ಕೆ ಶಿವಕುಮಾರ್‌ ಅವರು ಭಾನುವಾರ ಬೆಂಗಳೂರಿನಲ್ಲಿ ವೈಟ್‌ಟಾಪಿಂಗ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದರು. ಈ ಸಂದರ್ಭದಲ್ಲಿ ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲಸ ಮಾಡುತ್ತಿಲ್ಲ ಎನ್ನುವ ಬಗ್ಗೆ ದೂರುಗಳು ಕೇಳಿ ಬಂದಿದ್ದವು.

ಅಲರ್ಟ್‌ ಆಗಿರುವ ಬಿಬಿಎಂಪಿ ಅಧಿಕಾರಿಗಳು: ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸೂಚನೆಗೆ ಬಿಬಿಎಂಪಿಯ ಅಧಿಕಾರಿಗಳು ಅಲರ್ಟ್‌ ಆಗಿದ್ದು, ಭರ್ಜರಿಯಾಗಿ ಕೆಲಸ ಮಾಡಲು ಶುರು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+