'ಕಾಟೇರ' ನಿರ್ಮಾಪಕರಿಗೆ ಬೆಳ್ಳಂಬೆಳಗ್ಗೆ ಶಾಕ್‌: ರಾಕ್ ಲೈನ್ ಮಾಲ್​ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು, ಫೆಬ್ರವರಿ 14: ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ ಮಾಲೀಕತ್ವದ ರಾಕ್ ಲೈನ್ ಮಾಲ್​ಗೆ ಬೀಗ ಜಡಿದಿದ್ದಾರೆ. ಸದ್ಯ ದಾಸರಹಳ್ಳಿಯಲ್ಲಿರುವ ರಾಕ್ ಲೈನ್ ಮಾಲ್​ಗೆ ಬೀಗ ಹಾಕಲಾಗಿದೆ.

ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿನ್ನೆ ತಡರಾತ್ರಿ ರಾಕ್ ಲೈನ್ ಮಾಲ್ ಬಳಿ ತೆರಳಿ ಪೊಲೀಸರು ಹಾಗೂ ಮಾರ್ಷಲ್ಸ್‌ ಸಮ್ಮುಖದಲ್ಲಿ ಸೀಜ್ ಮಾಡಿದ್ದಾರೆ. ರಾಕ್​ಲೈನ್ ಮಾಲ್​ 2011 ರಿಂದ 2022-23 ರವರೆಗೆ ಒಟ್ಟು 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

BBMP Officials Seize Rockline Mall Owned By Rockline Venkatesh

ಹಲವು ವರ್ಷದಿಂದ ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳು ಅನೇಕ ಬಾರಿ ನೋಟಿಸ್‌ ನೀಡಿದ್ದರು. ಆದರೆ ನೋಟಿಸ್ ನೀಡಿದರೂ ತೆರಿಗೆ ಹಣ ಪಾವತಿಸದ ಕಾರಣ ಸದ್ಯ ರಾಕ್ ಲೈನ್ ಮಾಲ್ ಸೀಜ್‌ ಮಾಡಲಾಗಿದೆ.

ದಾಸರಹಳ್ಳಿ ವಲಯದ ಬಿಬಿಎಂಪಿ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್, ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಮಾರ್ಷಲ್‌ಗಳ ಸಮ್ಮುಖದಲ್ಲಿ ರಾಕ್ ಲೈನ್ ಮಾಲ್‌ಗೆ ಬೀಗ ಜಡಿಯಲಾಗಿದೆ.

BBMP Officials Seize Rockline Mall Owned By Rockline Venkatesh

ಯಲಹಂಕದಲ್ಲಿ 85 ಕೋಟಿ ಮೌಲ್ಯದ ಆಸ್ತಿಯ ಅಕ್ರಮ ಒತ್ತುವರಿ ತೆರವುಗೊಳಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ ಯಲಹಂಕದಲ್ಲಿ 75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಒತ್ತುವರಿಯನ್ನು ತೆರವುಗೊಳಿಸಿದೆ. ಕಂದಾಯ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಬಿಬಿಎಂಪಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

BBMP Officials Seize Rockline Mall Owned By Rockline Venkatesh

ಬಿಬಿಎಂಪಿಯ ಯಲಹಂಕದಲ್ಲಿ 75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಅತಿಕ್ರಮಣಕಾರರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗಿತ್ತು. ಅಲ್ಲದೇ ಸಂಬಂಧ ಪಟ್ಟವರಿಗೆ ನೋಟಿಸ್‌ ಮೂಲಕ ತಿಳಿಸಲಾಗಿತ್ತು. ಅತಿಕ್ರಮಣಕಾರರು ಒತ್ತುವರಿ ಮಾಡಿಕೊಂಡ ಜಾಗದಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ಹಾಕಿಕೊಂಡು ವಾಣಿಜ್ಯ ಸಂಸ್ಥೆಗಳನ್ನು ನಡೆಸುತ್ತಿದ್ದರು. ನಿನ್ನೆ 140 ಪೊಲೀಸ್ ಸಿಬ್ಬಂದಿ ಮತ್ತು 70 ಕಾರ್ಮಿಕರು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಮುಂದೆ ಯಾವುದೇ ಒತ್ತುವರಿಯಾಗದಂತೆ ಚೈನ್ ಲಿಂಕ್ ಬೇಲಿ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+