ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 15: ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪಿಜಿಯಲ್ಲಿರಲು ಅವಕಾಶವಿಲ್ಲ, ಈಗಾಗಲೇ ಹಾಸ್ಟೆಲ್‌ಗಳನ್ನು ಕೂಡ ಮುಚ್ಚಲಾಗಿದೆ, ಕೂಡಲೇ ಊರಿಗೆ ತೆರಳುವಂತೆ ತಿಳಿಸಲಾಗಿದೆ.

Karnataka Unlock 2.0: ಜೂನ್ 21ರಿಂದ 2ನೇ ಹಂತದ ಲಾಕ್‌ಡೌನ್ ಸಡಿಲಿಕೆ: ಏನಿರುತ್ತೆ?, ಏನಿರಲ್ಲ?Karnataka Unlock 2.0: ಜೂನ್ 21ರಿಂದ 2ನೇ ಹಂತದ ಲಾಕ್‌ಡೌನ್ ಸಡಿಲಿಕೆ: ಏನಿರುತ್ತೆ?, ಏನಿರಲ್ಲ?

ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. 110 ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಪಿಜಿಯ ಸ್ವಚ್ಛತೆಯ ಹೊಣೆಯನ್ನು ಪಿಜಿ ಮಾಲೀಕರೇ ಹೊರಬೇಕು.

 BBMP Officials Warns So PG Owners, Hostel Snd Students, Tells Students To Leave Bengaluru If Holidays Declared

ಪಿಜಿ ವಾಸಿಗಳನ್ನು ಯಾವುದೇ ಮುನ್ಸೂಚನೆ ಇಲ್ಲದ ದಿಢೀರ್ ಎಂದು ಹೊರ ಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೋವಿಡ್ ಹರಡುವಿಕೆ ಕಂಡಲ್ಲಿ ಕಠಿಣ ಕ್ರಮ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನಾ ಪತ್ರ ಹೊರಡಿಸಿದ್ದು, ಕಾಲೇಜುಗಳು ರಜೆ ಇರುವ ವಿದ್ಯಾರ್ಥಿಗಳು ಪಿಜಿಯಲ್ಲಿ ಇರಲು ಅವಕಾಶ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಈಗಾಗಲೇ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಇದೀಗ ಜೂನ್ 21ರಂದು ಎರಡನೇ ಹಂತದ ಲಾಕ್‌ಡೌನ್ ಸಡಿಲ ಪ್ರಕ್ರಿಯೆ ಶುರುವಾಗಲಿದ್ದು, ಯಾವುದಕ್ಕೆಲ್ಲಾ ಅನುಮತಿ ಇದೆ, ಯಾವುದಕ್ಕೆ ಇರುವುದಿಲ್ಲ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಅನ್‌ಲಾಕ್ ಮಾಡುವುದರ ಜತೆಗೆ ಕೊರೊನಾ ಸೋಂಕಿನಿಂದ ಜನರಿಗೆ ರಕ್ಷಣೆ ನೀಡುವುದು ಕೂಡ ಸರ್ಕಾರದ ಆದ್ಯತೆಯಾಗಿದ್ದು, ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗುತ್ತಿದೆ.

ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಒಪ್ಪಿಗೆ ನೀಡಿದೆ. ಜೂನ್ 21 ರಿಂದ ಮಾಲ್, ಹೇರ್​ ಕಟ್​ ಶಾಪ್, ಹೋಟೆಲ್, ಚಿಕ್ಕ‌ಚಿಕ್ಕ ಮಾರುಕಟ್ಟೆ, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು. ಕರ್ನಾಟಕದಲ್ಲಿ ಎರಡನೇ ಹಂತದ ಅನ್​ಲಾಕ್​ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಬರುತ್ತದೆ.

English summary
BBMP Commissioner Warns So PG Owners, Hostel and Students, Tells Students To Leave Bengaluru If Holidays Declared.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X