ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ, ಉಪಹಾರಕ್ಕೆ ಆಗ್ರಹ

|
Google Oneindia Kannada News

ಬೆಂಗಳೂರು, ಮಾರ್ಚ್ 12: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹಾಗೂ ಕೆಲವು ಶಂಕಿತ ಕಾಲರಾ ಕಾಯಿಲೆಯ ಪ್ರಕಾರಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಬೀದಿ ಬದಿ ತೆರದಿಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದಕ್ಕೆ ಬಿಬಿಎಂಪಿ ನಿಷೇಧ ಹೇರಿದೆ.

ಬೀದಿ ಬದಿ ಆಹಾರ ಮಾರಾಟ ಮಾಡುವುದಕ್ಕೆ ನಿಷೇಧ ಹೇರಿದ್ದರಿಂದ ದಿನಗೂಲಿ ಕೆಲಸ ಮಾಡುವವರು ಹಾಗೂ ಕಾರ್ಮಿಕರಿಗೆ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡು ಬಿಬಿಎಂಪಿ ಒಂದು ತಿಂಗಳು ಪಾಲಿಕೆ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ತಿಂಡಿ ಹಾಗೂ ಊಟ ಒದಗಿಸಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿ

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಬೀದಿ ಬದಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದನ್ನು ನಿಷೇಧ ಮಾಡಿರುವುದು ಒಳ್ಳೆಯ ಕ್ರಮವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಮಿಕರು ಸೇರಿದಂತೆ ಯಾರೇ ಸಾರ್ವಜನಿಕರು ಬಂದರೂ ಒಂದು ತಿಂಗಳು ಅಂದರೆ ಏಪ್ರೀಲ್ 15 ರವರೆಗೆ ಉಚಿತ ಊಟ ಹಾಗೂ ಉಪಹಾರವನ್ನು ಒದಗಿಸಲು ಆದೇಶಿಸಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

BBMP Oppostion Leader Request To Provide Free Lunch And Breakfast At Indira Canteen

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹಾಗೂ ಕೆಲವು ಶಂಕಿತ ಕಾಲರಾ ಕಾಯಿಲೆಯ ಪ್ರಕಾರಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಬೀದಿ ಬದಿಗಳ ತೆರದಿಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ನಡೆಸಲಾಗಿತ್ತು.

English summary
Coronavirus Fear: BBMP Oppostion Leader Abdul Wajid Request To Provide Free Lunch And Breakfast At Indira Canteen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X