ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಗರದಲ್ಲಿ 'ರಾತ್ರಿ ಶಾಲೆ' ಯೋಜನೆ ಜಾರಿಗೆ ತರಲು ಬಿಬಿಎಂಪಿ ಚಿಂತನೆ

|
Google Oneindia Kannada News

ಬೆಂಗಳೂರು ಜೂ.13: ಸರ್ಕಾರಿ ಶಾಲೆಗಳ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯು ಬೆಂಗಳೂರಿನಲ್ಲಿ 'ರಾತ್ರಿ ಶಾಲೆ' ಆರಂಭಿಸುವ ಚಿಂತನೆಯಲ್ಲಿದೆ.

ಈಗಾಗಲೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲಾಗಿದ್ದ 'ರಾತ್ರಿ ಶಾಲೆ' ಕಾರ್ಯಕ್ರಮ ಯಶಸ್ವಿಯಾಗಿದೆ. ಇದು ಆ ಜಿಲ್ಲೆಯ ಮಕ್ಕಳಲ್ಲಿ ಉತ್ತಮ ಬದಲಾವಣೆ ತಂದಿದೆ. ಇದರಿಂದ ಉತ್ತೇಜಿತವಾಗಿರುವ ಬಿಬಿಎಂಪಿ ನಗರದಲ್ಲೂ ರಾತ್ರಿ ಶಾಲೆ ಆರಂಭಿಸಲು ಯೋಜನೆ ರೂಪಿಸುತ್ತಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ ಸಂಜೆ ಮನೆಗೆ ತೆರಳಿದ ನಂತರ ಕಲಿಯಲು ಸೂಕ್ತ ಸೌಕರ್ಯ, ಅವಕಾಶಗಳು ಇರುವುದಿಲ್ಲ. ಬೆಂಗಳೂರಿನಲ್ಲಿ ಇಂಥದ್ದೊಂದು ರಾತ್ರಿಶಾಲೆ ಕಾರ್ಯಕ್ರಮ ಆರಂಭಿಸಿದರೆ ಸ್ಲಂ ಮಕ್ಕಳಿಗೆ ಶಾಲಾ ನಂತರದ ಸಮಯದಲ್ಲೂ ಕಲಿಯಲು ಅನುಕೂಲವಾಗಲಿದೆ ಎಂಬುದು ಯೋಚನೆಯಾಗಿದೆ.

BBMP Planned Implementing night School Program

ಬಳ್ಳಾರಿಯಲ್ಲಿ 3 ವರ್ಷ ರಾತ್ರಿ ಶಾಲೆ ಯಶಸ್ವಿ

ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾರ್ಥಿ ಬೆಳಕು ಯೋಜನೆಯಡಿಯಲ್ಲಿ 2016-2019ರವರೆಗೆ ರಾತ್ರಿಶಾಲೆ ಆರಂಭಿಸಲಾಗಿತ್ತು. ಸಂಜೆ 6ರಿಂದ ರಾತ್ರಿ8 ಗಂಟೆವರೆಗೆ ತರಗತಿಗಳು ನಡೆದಿದ್ದು, ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ.ರಾಮ್ ಪ್ರಶಾಂತ್ ಮನೋಹರ್ ಅವರ ಪರಿಕಲ್ಪನೆಯ ರಾತ್ರಿಶಾಲೆ ಯಶಸ್ವಿಯಾಗಿದೆ.

ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ನಗರಾದ್ಯಂತ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 165 ಸರ್ಕಾರಿ ಶಾಲೆಗಳಿವೆ. ಅಲ್ಲಿಗೆ ಬರುವ ಮಕ್ಕಳಲ್ಲಿ ಅನೇಕ ವಿದ್ಯಾರ್ಥಿಗಳು ಸ್ಲಂ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆ ಎಲ್ಲ ಮಕ್ಕಳ ಕಲಿಕೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಲಿದೆ. ಈ ಸಂಬಂಧ ಪಾಲಿಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದಲ್ಲಿ ನಗರದಲ್ಲಿ ರಾತ್ರಿ ಶಾಲೆ ಯೋಜನೆ ಅಳವಡಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

BBMP Planned Implementing night School Program

ಶಿಕ್ಷಕರಿಗೆ ತರಬೇತಿ ಅಗತ್ಯ:

Recommended Video

Russia to India, Iran ಮೂಲಕ ಹೊಸ ಮಾರ್ಗ | Oneindia Kannada

ಸುದ್ದಿಗಾರರ ಸಂಪರ್ಕಕ್ಕೆ ಸಿಕ್ಕ ವಿ.ರಾಮ್ ಪ್ರಶಾಂತ್ ಮನೋಹರ್ ಅವರು, ರಾತ್ರಿಶಾಲೆಯ ತರಗತಿ ನಡೆಸುವ ಶಿಕ್ಷಕರಿಗೆ ಮಕ್ಕಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ತರಬೇತಿ ನೀಡುವುದು ಅವಶ್ಯಕವಾಗಿರುತ್ತದೆ. ಇದರಿಂದ ಅವರು ಶಾಲಾ ನಂತರದ ಸಮಯದಲ್ಲಿ ಸಂಜೆಯಿಂದ ರಾತ್ರಿವರೆಗೆ ಮಕ್ಕಳಿಗೆ ಸುಸುತ್ರವಾಗಿ ಶಿಕ್ಷಣ ಹೇಳಿಕೊಡಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸೂಕ್ತ ಕಾರ್ಯಯೋಜನೆ ಸಹಿತ ಆರಂಭಿಸಿದ ರಾತ್ರಿಶಾಲೆಯ ಫಲಿತಾಂಶಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಅಲ್ಲದೇ ಮಕ್ಕಳ ಶಿಕ್ಷಣ ಸುಧಾರಿಸಲು ಸರ್ಕಾರೇತರ ಸಂಸ್ಥೆಗಳಿಗೆ ಆಸಕ್ತಿ ಇದ್ದಲ್ಲಿ ಅವುಗಳೊಂದಿಗೆ ಯೋಜನೆ ಬಗೆಗಿನ ಮಾಹಿತಿ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

English summary
BBMP planned implementing a 'night school' scheme cooperation with department of public instruction underprivileged kids,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X