• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಾಣಿಜ್ಯ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ ಕೊರೊನಾ ಲಸಿಕೆ ಕಡ್ಡಾಯಗೊಳಿಸಲು ಬಿಬಿಎಂಪಿ ಯೋಜನೆ

|
Google Oneindia Kannada News

ಬೆಂಗಳೂರು, ಆಗಸ್ಟ್‌ 26: ಕೊರೊನಾ ಸೋಂಕಿನ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತೊಂದು ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿದುಬಂದಿದೆ. ವಾಣಿಜ್ಯ ಸ್ಥಳಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸುವ ಸಾಧ್ಯತೆಯಿದೆ.

ಆದೇಶ ಜಾರಿಗೊಳಿಸಲು ಬಿಬಿಎಂಪಿ ಉನ್ನತಾಧಿಕಾರಿಗಳು ಅನುಮತಿಗೆ ಕಾಯುತ್ತಿರುವುದಾಗಿ ತಿಳಿದುಬಂದಿದೆ.

ವಾಣಿಜ್ಯ ಸ್ಥಳಗಳಲ್ಲಿ ಕೆಲಸ ಮಾಡುವ, ಲಸಿಕೆ ಪಡೆಯದ ಸಿಬ್ಬಂದಿ ಕೊರೊನಾ ಸೋಂಕು ಹರಡುವಿಕೆಯ 'ಸೂಪರ್ ಸ್ಪ್ರೆಡರ್' ಆಗಬಹುದಾದ ಸಾಧ್ಯತೆ ಹೆಚ್ಚಿದೆ. ಅವರು ಲಸಿಕೆ ಪಡೆಯುವುದು ಇತರೆ ಸಿಬ್ಬಂದಿ ಸುರಕ್ಷತೆಯನ್ನು ಖಾತ್ರಿಪಡಿಸುವುದಲ್ಲದೇ ಗ್ರಾಹಕರಿಗೆ ಹಾಗೂ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರಿಗೂ ಅವರಿಂದ ಸೋಂಕು ಹರಡುವ ಸಾಧ್ಯತೆಯನ್ನು ತಡೆದಂತಾಗುತ್ತದೆ' ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ರಣದೀಪ್ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ವಲಯದ ಆಯುಕ್ತ ಶಂಕರ್ ರೆಡ್ಡಿ ಮಂಗಳವಾರ ಅಲ್ಲಿನ ಮಳಿಗೆಗಳು, ಸಾರ್ವಜನಿಕ ಸ್ಥಳಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆ ವೇಳೆ, ಅಲ್ಲಿ ಕೆಲಸ ನಿರ್ವಹಿಸುವ ಪ್ರತಿ ಹತ್ತು ಮಂದಿಯಲ್ಲಿ ಎಂಟು ಮಂದಿ ಒಂದು ಡೋಸ್ ಕೊರೊನಾ ಲಸಿಕೆಯನ್ನೂ ಪಡೆಯದೇ ಇರುವ ಸಂಗತಿ ಬೆಳಕಿಗೆ ಬಂದಿದೆ. ಈ ಬೆಳವಣಿಗೆ ಬೆನ್ನಲ್ಲೇ ಆದೇಶ ಹೊರಡಿಸುವ ಸಿದ್ಧತೆ ನಡೆಸಲಾಗುತ್ತಿದೆ.

ರೆಡ್ಡಿ ಅಲ್ಲಿನ ಮಳಿಗೆಗಳಿಗೆ ಭೇಟಿ ಕೊಟ್ಟು ಅಲ್ಲಿ ಕೆಲಸ ಮಾಡುವವರು ಲಸಿಕೆ ಪಡೆದುಕೊಂಡಿದ್ದಾರೆಯೇ ಎಂದು ವಿಚಾರಿಸಿದ್ದಾರೆ. ಆಗ ಹಲವು ಮಂದಿ ಲಸಿಕೆ ಪಡೆಯದೇ ಇದ್ದದ್ದು ಬೆಳಕಿಗೆ ಬಂದಿದೆ. ಲಸಿಕೆಗಾಗಿ ಗಂಟೆಗಟ್ಟಲೆ ಕಾಯಬೇಕಾದ ಕಾರಣದಿಂದಾಗಿ ಹಿಂದೇಟು ಹಾಕಿರುವುದಾಗಿಯೂ ತಿಳಿಸಿದ್ದಾರೆ.

ಕೊರೊನಾ; 15 ದಿನಗಳಲ್ಲಿ ಬೆಂಗಳೂರಿನ ಕಂಟೇನ್ಮೆಂಟ್‌ ವಲಯಗಳ ಸಂಖ್ಯೆ ಇಳಿಕೆಕೊರೊನಾ; 15 ದಿನಗಳಲ್ಲಿ ಬೆಂಗಳೂರಿನ ಕಂಟೇನ್ಮೆಂಟ್‌ ವಲಯಗಳ ಸಂಖ್ಯೆ ಇಳಿಕೆ

ಈ ಸಂಗತಿ ಚಿಂತೆಗೀಡುಮಾಡುವಂತಿದೆ ಎಂದು ರೆಡ್ಡಿ ಹೇಳಿದ್ದಾರೆ. ಮಳಿಗೆ ಇಟ್ಟುಕೊಂಡಿರುವ ಜನರು ಅಲ್ಲಿಗೆ ಬರುವ ಇನ್ನಷ್ಟು ಅಧಿಕ ಸಂಖ್ಯೆಯ ಜನರಿಗೆ ಸೋಂಕು ಹರಡಿಸುವ ಸಾಧ್ಯತೆ ಹೆಚ್ಚಿದೆ. ಇವರ ಬಳಿ ಬರುವ ಗ್ರಾಹಕರಿಗೂ ಇವರಿಂದ ಸೋಂಕು ಹರಡಬಹುದಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಲಸಿಕೆ ಸಂಬಂಧ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

'ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗೂ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ನೌಕರರು ಲಸಿಕೆ ಪಡೆದಿಲ್ಲವೆಂದರೆ ಅದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

BBMP Plans To Make Covid Vaccine Mandatory For Staff At Business Places

ಕೆ.ಆರ್. ಮಾರುಕಟ್ಟೆಯಲ್ಲಿ ಕೊರೊನಾ ಪರೀಕ್ಷೆ
ಇದೇ ಸೋಮವಾರದಿಂದ, ಕೆ.ಆರ್. ಮಾರುಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿನ ಜನರಿಗೆ ಕೊರೊನಾ ಪರೀಕ್ಷೆ (Random testing) ನಡೆಯುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಕೆ.ಆರ್. ಮಾರುಕಟ್ಟೆ ಕೊರೊನಾ ಕೇಂದ್ರವಾಗುವ ಎಲ್ಲಾ ಲಕ್ಷಣಗಳೂ ಇರುವ ಕಾರಣ ಇಲ್ಲಿ ಪರೀಕ್ಷೆಗಳನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ. ರೈಲು ನಿಲ್ದಾಣಗಳಲ್ಲಿ, ಬಸ್ ನಿಲ್ದಾಣಗಳಲ್ಲಿ, ಮಾರುಕಟ್ಟೆ, ವಾಣಿಜ್ಯ ಪ್ರದೇಶಗಳು, ಕೈಗಾರಿಕಾ ಪ್ರದೇಶಗಳು, ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳು ಹಾಗೂ ಜನಜಂಗುಳಿಯಿರುವ ಇತರೆ ಜಾಗಗಳಲ್ಲಿ ಕೊರೊನಾ ಪರೀಕ್ಷೆ ಚುರುಕುಗೊಳಿಸಲು ಬಿಬಿಎಂಪಿ ಆರೋಗ್ಯ ತಂಡಗಳನ್ನು ನಿಯೋಜಿಸಿದೆ.

ಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಕೊರೊನಾ ಪರೀಕ್ಷೆ ಚುರುಕುಗೊಳಿಸಲು ಬಿಬಿಎಂಪಿ ಸೂಚನೆಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಕೊರೊನಾ ಪರೀಕ್ಷೆ ಚುರುಕುಗೊಳಿಸಲು ಬಿಬಿಎಂಪಿ ಸೂಚನೆ

ಬೆಂಗಳೂರಿನಲ್ಲಿ ಎಷ್ಟು ಮಂದಿಗೆ ಲಸಿಕೆ ನೀಡಲಾಗಿದೆ?

   RCB ಗೆ ಎಂಟ್ರಿಕೊಟ್ಟ ಸ್ಪೋಟಕ ಆಲ್ ರೌಂಡರ್ | Oneindia Kannada

   ಇದೇ ಸಂದರ್ಭ, ದಿನನಿತ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ 712 ಲಸಿಕಾ ಕೇಂದ್ರಗಳು ಹಾಗೂ 400 ಸರ್ಕಾರಿ ಕೇಂದ್ರಗಳಿವೆ. ಇದುವರೆಗೂ 65.6 ಲಕ್ಷ ಮಂದಿ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ ಹಾಗೂ 21.9 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡದುಕೊಂಡಿದ್ದಾರೆ ಎಂದು ತಿಳಿಸಿದರು.

   English summary
   BBMP likely to issue an order making vaccine mandatory for employees working in all commercial establishment
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X