ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಹಗರಣದ ಕುರಿತು ಕಾಂಗ್ರೆಸ್‌ನಿಂದ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 5 : ಬಿಬಿಎಂಪಿ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಬಿಬಿಎಂಪಿಯಲ್ಲಿ ನಡೆದ ಹಗರಣಗಳ ಬಗ್ಗೆ ಚಾರ್ಜ್ ಶೀಟ್‌ ಬಿಡುಗಡೆ ಮಾಡಲು ಬುಧವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬಿಬಿಎಂಪಿ ಚುನಾವಣೆ ಕುರಿತು ಮಹತ್ವದ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಬೆಂಗಳೂರಿನ ಐವರು ಸಚಿವರು ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. [ಬಿಜೆಪಿ ಮೊದಲ ಪಟ್ಟಿ ಬಿಡುಗಡೆ]

congress

ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ ಅವರು, 'ಎರಡು ದಿನದಲ್ಲಿ ಬಿಬಿಎಂಪಿಯಲ್ಲಿ ಆಡಳಿತ ನಡೆಸಿದ ಬಿಜೆಪಿ ಮಾಡಿದ ಹಗರಣಗಳ ಬಗ್ಗೆ ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗುತ್ತದೆ' ಎಂದು ಹೇಳಿದರು. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ]

ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ದಿನೇಶ್ ಗುಂಡೂರಾವ್, ರೋಷನ್ ಬೇಗ್, ರಾಮಲಿಂಗಾ ರೆಡ್ಡಿ ಮುಂತಾದವರಿಗೆ ಸರ್ಕಾರದ ಎರಡು ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಂದು ಪಟ್ಟಿ ಬಿಡುಗಡೆ : ಬಿಬಿಎಂಪಿ ಚುನಾವಣೆಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಗುರುವಾರ ಅಥವ ಶುಕ್ರವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ನಾಮಪತ್ರಗಳನ್ನು ಸಲ್ಲಿಸಲು ಆ.10 ಕೊನೆಯ ದಿನವಾಗಿದೆ.

ಅತ್ತ ಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಆ.6ರಂದು ಎಲ್ಲಾ 198 ವಾರ್ಡ್‌ಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

English summary
Karnataka Congress to release charge sheet about scam in the Bruhat Bengaluru Mahanagara Palike (BBMP) in BJP administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X