ಬೆಂಗಳೂರಿನ ಈ ಮಾರ್ಗದಲ್ಲಿ 7.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಸಿದ್ಧತೆ; ವೆಚ್ಚಗಳ ಬಗ್ಗೆ ತಿಳಿಯಿರಿ
ಬೆಂಗಳೂರು, ನವೆಂಬರ್, 22: ಹೆಬ್ಬಾಳ ಮತ್ತು ಹೆಣ್ಣೂರು ನಡುವೆ ಹರಿಯುವ ರಾಜಕಾಲುವೆಗಳ ಬಳಿಯಿರುರುವ ಖಾಲಿ ಜಾಗಗಳಲ್ಲಿ 7.5 ಕಿ.ಮೀ ರಸ್ತೆ ನಿರ್ಮಾಣ ಮಾಡಲು ಬಿಬಿಎಂಪಿ ಮುಂದಾಗಿದೆ. ಹಾಗಾದರೆ ಇದರಿಂದ ಏನೆಲ್ಲಾ ಉಪಯೋಗ ಆಗಲಿದೆ ಹಾಗೂ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಟಿಡಿಆರ್ ಯೋಜನೆಯಡಿ ಪರಿಹಾರವನ್ನು ನೀಡುವ ಮೂಲಕ ದ್ವಿಪಥದ ರಸ್ತೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗುವ ಸುಮಾರು 120 ಕಡೆ ಆಸ್ತಿಗಳ ಬಗ್ಗೆ ಈಗಾಗಲೇ ನಾಗರಿಕ ಸಂಸ್ಥೆ ಸಮೀಕ್ಷೆ ನಡೆಸಿದೆ. ಬಹುತೇಕ ಖಾಲಿ ನಿವೇಶನಗಳ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮಳೆನೀರು ಹರಯುವ ಚರಂಡಿಗಳ 50 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳಲು ಅನುಮತಿ ನೀಡಿಲ್ಲ. ಅದನ್ನು ಬಫರ್ ವಲಯವೆಂದು ಪರಿಗಣಿಸಲಾಗಿದೆ. ಆದ್ದರಿಂದ ಬಿಬಿಎಂಪಿಯು ಇದೇ ಖಾಲಿ ಜಾಗದಲ್ಲಿ ರಸ್ತೆಗಳನ್ನು ನಿರ್ಮಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಹೆಬ್ಬಾಳ ಮತ್ತು ಹೆಣ್ಣೂರು ನಡುವಿನ ರಸ್ತೆಯನ್ನು ಅಭಿವೃದ್ಧಿಪಡಿಸಲಿದ್ದು, ಅದನ್ನು ಸ್ವಲ್ಪ ಮಟ್ಟಿಗೆ ಎತ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಮಗಾರಿ ಪೂರ್ಣ ಯಾವಾಗ?: ಕರ್ನಾಟಕಕ್ಕೆ ಹೊರ ರಾಜ್ಯಗಳನ್ನು ಸಂಪರ್ಕಿಸುವ ಹೆದ್ದಾರಿಗಳಲ್ಲಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕೂಡ ಒಂದಾಗಿದೆ. ಈ ಎಕ್ಸ್‌ಪ್ರೆಸ್ ವೇ 2024ರ ಅಂತ್ಯದಲ್ಲಿ ಉದ್ಘಾಟನೆಯಾಗಲಿದ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದರು. ಆದರೆ, ಇದೀಗ ಉದ್ಘಾಟನೆ ಮತ್ತಷ್ಟು ತಡವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರಣ ಏನೆಂದು ಇಲ್ಲಿ ತಿಳಿಯಿರಿ.
2024ರ ಅಂತ್ಯ ಅಂದರೆ, ಡಿಸೆಂಬರ್‌ನಲ್ಲಿ ಆಗಬೇಕಿದ್ದ ಬಹುನಿರೀಕ್ಷಿತ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮತ್ತಷ್ಟು ತಡವಾಗಲಿದೆ ಎನ್ನುವ ಅಪ್ಡೇಟ್ ಮಾಹಿತಿ ಇದೀಗ ಲಭ್ಯವಾಗಿದೆ. ತಮಿಳುನಾಡು ವಿಭಾಗದಲ್ಲಿ ಕಾಮಗಾರಿ ಇನ್ನೂ ಪೂರ್ಣವಾಗದೆ ಬಾಕಿ ಇರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ಕಾಮಗಾರಿ ಸುಮಾರು 72 ಕಿಲೋ ಮೀಟರ್‌ನಷ್ಟು ಕರ್ನಾಟಕ ವಿಭಾಗ ಈಗಾಗಲೇ ಸಿದ್ಧವಾಗಿದೆ. ಆದರೆ 106 ಕಿಲೋ ಮೀಟರ್ ತಮಿಳುನಾಡು ವಿಭಾಗದಲ್ಲಿ ಇನ್ನೂ ಪೂರ್ಣ ಆಗಿಲ್ಲ. ಚೆನ್ನೈ ಬಳಿಯಿರುವ ಇರುಂಗಟ್ಟುಕೊಟ್ಟೈನಿಂದ ತಮಿಳುನಾಡು-ಆಂಧ್ರಪ್ರದೇಶದ ಗಡಿಯ ಸಮೀಪ ಇರುವ ಗುಡಿಪಾಲವರೆಗೆ ವಿಸ್ತರಲಿದೆ.
ಆದ್ದರಿಂದ ಈ ಕಾಮಾಗರಿ 2025ರ ಮಧ್ಯದಲ್ಲಿ ಅಂದರೆ ಜೂನ್ ಅಥವಾ ಜುಲೈ ತಿಂಗಳಲ್ಲಿ ಮುಕ್ತಾಯವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಈ ಎಕ್ಸ್‌ಪ್ರೆಸ್ ವೇ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕಾಮಕಾರಿ ಆರಂಭವಾಗಿದೆ. ಈ ಹೆದ್ದಾರಿ ಪೂರ್ಣಗೊಂಡರೆ, ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ. ಗಂಟೆಗೆ 120 ಕಿಮೀ ವೇಗದಲ್ಲಿ ಸಮಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
ಈವರೆಗೂ ಚೆನ್ನೈ-ಬೆಂಗಳೂರು ಎರಡೂ ನಗರಗಳ ನಡುವೆ ಸಂಚರಿಸಲು 6-7 ಗಂಟೆ ಸಮಯ ಬೇಕೇ ಬೇಕಾಗುತ್ತಿತ್ತು. ಆದರೆ, ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ, ಈ ಸಮಯ 2 ಗಂಟೆಗೆ ಇಳಿಕೆಯಾಗಲಿದೆ ಎನ್ನಲಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ಯಾವುದೇ ಅಡೆತಡೆಗಳಿರುವುದಿಲ್ಲ ಹಾಗೂ ಇಂಧನವೂ ಕೂಡ ಉಳಿತಾಯ ಆಗಲಿದೆ.












Click it and Unblock the Notifications