ಬಿಬಿಎಂಪಿ 2025 -26ನೇ ಸಾಲಿನ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ: ನೀವೂ ಸಲಹೆ ಕೊಡಬಹುದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಇದೀಗ ಇನ್ನೊಂದು ಬಜೆಟ್ ಮಂಡಿಸುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯ ಚುನಾವಣೆ ನಡೆದು 4 ವರ್ಷಗಳೇ ಕಳೆದಿವೆ. ಕಳೆದ ನಾಲ್ಕು ವರ್ಷಗಳಿಂದಲೂ ಬಿಬಿಎಂಪಿಯ ಬಜೆಟ್ ಅನ್ನು ಅಧಿಕಾರಿಗಳೇ ಮಂಡಿಸುತ್ತಿದ್ದಾರೆ. ಇದೀಗ ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಹಾಗೂ ಸೂಚನೆಗಳನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಬಜೆಟ್ ತಯಾರಿಕೆಗೆ ಸಿದ್ಧತೆ ಕೆಲಸ ಪ್ರಗತಿಯಲ್ಲಿದೆ. ಇದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಸಾರ್ವಜನಿಕರಿಂದ ಆಹ್ವಾನಿಸಿದೆ.
ಬಿಬಿಎಂಪಿಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಾರ್ವಜನಿಕರು 10ನೇ ಫೆಬ್ರವರಿ 2025 ರವರೆಗೆ ಸಲಹೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್ ಅವರು ಹೇಳಿದ್ದಾರೆ. ಇದಕ್ಕೆ ಬೆಂಗಳೂರಿನ ಎಲ್ಲಾ ಜನ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(RWAs) ಹಾಗೂ ಸಂಘ-ಸಂಸ್ಥೆಗಳು ತಮ್ಮ ಸಲಹೆ ಹಾಗೂ ಸೂಚನೆಗಳನ್ನು ಪಾಲಿಕೆಗೆ ಕೊಡಬಹುದಾಗಿದೆ. ಸಾರ್ವಜನಿಕರು ಸಲಹೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಪಾಲಿಕೆ ಕೇಂದ್ರ ಕಚೇರಿಯ ಮುಖ್ಯ ದ್ವಾರದ ಬಳಿ ಸಲಹಾ ಪೆಟ್ಟಿಗೆ(ಬಾಕ್ಸ್) ಅನ್ನು ಇರಿಸಲಾಗಿದೆ. ಈ ಸಲಹಾ ಪಟ್ಟಿಗೆಯ ಮೂಲಕ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿಯು ಹೇಳಿದೆ.

ಮುಂದುವರಿದು 2025-26ನೇ ಸಾಲಿನ ಕರಡು ಬಜೆಟ್‌ಗಾಗಿ ನಗರದ ಎಲ್ಲಾ ಸಾರ್ವಜನಿರು, ಸಂಘ-ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ ಹಾಗೂ ಸೂಚನೆಗಳನ್ನು ಬಿಬಿಎಂಪಿಯ ಅಧಿಕೃತ ಇ -ಮೇಲ್ [email protected] ಮೂಲಕವೂ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಬಜೆಟ್ ಸಲಹೆಗಳನ್ನು ನೀಡಲು ಇಷ್ಟಪಡುವವರು ದಿನಾಂಕ: 10.02.2025ರ ಒಳಗಾಗಿ ಮಾಹಿತಿ ಅಥವಾ ಸಲಹೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರ ಉಪಯೋವನ್ನು ಪಡೆದುಕೊಂಡು ಸಾರ್ಜನಿಕರು, ಸಂಘ- ಸಂಸ್ಥೆಗಳು ತಮ್ಮ ಅತ್ಯಮೂಲ್ಯವಾದ ಸಲಹೆ ಹಾಗೂ ಸೂಚನೆಗಳನ್ನು ನೀಡಲು ತಿಳಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ: ಬೆಂಗಳೂರಿನ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಈ ಸಂಬಂಧ ವೆಂಡಿಂಗ್ ಜೋನ್ ಗುರುತಿಸುವವರೆಗೆ ಯಾವ್ಯಾವ ರಸ್ತೆಗಳಲ್ಲಿ ವ್ಯಾಪಾರ ಮಾಡಬಹುದು ಎಂಬುದನ್ನು ಪರಿಶೀಲಿಸಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇನ್ನು ಬೆಂಗಳೂರಿನ ಈ ಭಾಗದ ಯಾವ್ಯಾವ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಬಹುದು ಎಂಬುದನ್ನು ಗುರುತಿಸಬೇಕು. ಅನಂತರ ಪಾದಚಾರಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ಮಾರ್ಕಿಂಗ್ ಮಾಡಿ(ಗಡಿ ಗುರುತಿಸಿ) ಅವರಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲು ಸೂಚನೆ ನೀಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications