• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎರಡನೇ ಹಂತದ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

|

ಬೆಂಗಳೂರು,ಜನವರಿ 22: ನಗರದಲ್ಲಿ ಎರಡನೇ ಹಂತದಲ್ಲಿ ಕೊರೊನಾ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಮೊದಲ ಹಂತದಲ್ಲಿ ಲಸಿಕೆಯನ್ನು ಕೊರೊನಾ ವಾರಿಯರ್ಸ್‌ಗಳಿಗೆ ನೀಡಲಾಗಿದೆ. ಎರಡನೇ ಹಂತದಲ್ಲಿ ಶಿಕ್ಷಕರು, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ.

12000 ಜನರಿಗೆ ಲಸಿಕೆ ಹಾಕಿಸಿಕೊಂಡ ಮೇಲೂ ಕೊರೊನಾ ಪಾಸಿಟಿವ್!

ಕಳೆದ ಆರು ದಿನಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳ ಸಿಬ್ಬಂದಿಗೆ ಕೊರೊನಾ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ.

ಈವರೆಗೆ 1.82 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದರು.

ಇನ್ನುಳಿದಂತೆ ಮೊದಲ ಹಂತದ ಕೊರೊನಾ ಲಸಿಕೆ ಹಾಕುವ ಕಾರ್ಯ ಮುಂದುವರೆಯುತ್ತಿದೆ. ಈ ನಡುವೆ ಬಿಬಿಎಂಪಿ ಕೇಂದ್ರ ಸರ್ಕಾರದ ಸೂಚನೆಯಂತೆ ಎರಡನೇ ಹಂತದಲ್ಲಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡ ಪೊಲೀಸ್, ಅಬಕಾರಿ, ಸಾರಿಗೆ ಇಲಾಖೆ, ಶಿಕ್ಷಕರು,ಅಂಗನವಾಡಿ ಕಾರ್ಯಕರ್ತರು,ಬಿಬಿಎಂಪಿ ಅಧಿಕಾರಿಗಳೂ ಸೇರಿ ಇನ್ನಿತರೆ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುತ್ತದೆ.

ನಗರದಲ್ಲಿ ಗುರುವಾರ 23 ಸರ್ಕಾರಿ ಹಾಗೂ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 92 ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರದಲ್ಲಿ 5410 ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆ ಪಡೆದಿದ್ದರು.

   ಕರ್ನಾಟಕ: ಶಿವಮೊಗ್ಗ ದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ | Oneindia Kannada

   ಗುರುವಾರ ಸರ್ಕಾರಿ ಮತ್ತು ಬಿಬಿಎಂಪಿಯು 2328 ಮಂದಿ ಹಾಗೂ ಖಾಸಗಿ ಆಸ್ಪತ್ರೆಯ 8141 ಮಂದಿ ಸೇರಿದಂತೆ ಒಟ್ಟು 10469 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

   English summary
   BBMP is preparing to second corona vaccine drive in the city.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X