ರಿಯಾಯಿತಿ ದರದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಅವಧಿ ವಿಸ್ತರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿ ಅವಧಿ ಮತ್ತೊಮ್ಮೆ ವಿಸ್ತರಿಸಲಾಗಿದೆ.ಜೂನ್ 15ರ ತನಕ ಶೇ 5ರಷ್ಟು ರಿಯಾಯಿತಿ ಜತೆಗೆ ತೆರಿಗೆ ಪಾವತಿಸಬಹುದು.
ಬೆಂಗಳೂರು, ಮೇ 31: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿ ಅವಧಿ ಮತ್ತೊಮ್ಮೆ ವಿಸ್ತರಿಸಲಾಗಿದೆ. ಆನ್ ಲೈನ್ ಪಾವತಿ ವ್ಯವಸ್ಥೆಯಲ್ಲಿನ ಲೋಪ, ವಲಯವಾರು ಪಾವತಿ ಗೊಂದಲದಿಂದಾಗಿ ತೆರಿಗೆ ಪಾವತಿಸದ ನಾಗರಿಕರು ಚಿಂತಿಸಬೇಕಾಗಿಲ್ಲ. ಜೂನ್ 15ರ ತನಕ ಶೇ 5ರಷ್ಟು ವಿನಾಯಿತಿ ಜತೆಗೆ ತೆರಿಗೆ ಪಾವತಿಸಬಹುದು.
ಸಾಮಾನ್ಯವಾಗಿ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲೇ ಪಾವತಿ ಮಾಡಿದರೆ ಶೇ 5ರಷ್ಟು ರಿಯಾಯಿತಿ ದೊರೆಯುತ್ತದೆ. ಈ ಅವಧಿಯನ್ನು ಮೇ ತಿಂಗಳ ಅಂತ್ಯದ ತನಕ ಈ ಬಾರಿ ವಿಸ್ತರಿಸಲಾಯಿತು. ಈಗ ಜೂನ್ ತಿಂಗಳ ಅಂತ್ಯದ ತನಕ ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. ಆನಂತರ ತೆರಿಗೆ ಪಾವತಿಸಿದರೆ ಶೇ 2ರಷ್ಟು ಬಡ್ಡಿ ಕಟ್ಟಬೇಕು ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಪ್ರಕಟಿಸಿದೆ.[ಆನ್ಲೈನ್ ನಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಹೇಗೆ?]

ಪಾವತಿ ಮಾಡುವುದು ಹೇಗೆ? : ಬಿಬಿಎಂಪಿ 2 ರೀತಿಯ ಸೌಲಭ್ಯಗಳನ್ನು ನೀಡಿದೆ. ಆನ್ಲೈನ್ ಮೂಲಕ ತೆರಿಗೆ ಪಾವತಿ ಮಾಡಬಹುದು. ಅಥವಾ ಕೆನರಾ ಬ್ಯಾಂಕ್ ಶಾಖೆಗಳಲ್ಲಿಯೂ ತೆರಿಗೆ ಪಾವತಿ ಮಾಡಬಹುದಾಗಿದೆ.
ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದವರು ಶೀಘ್ರದಲ್ಲೇ ಸಮಸ್ಯೆಗೆ(ಆನ್ ಲೈನ್ ಮೂಲಕ ಪಾವತಿ) ಪರಿಹಾರ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಡಾ. ರಾಜ್ ಕುಮಾರ್ ರಸ್ತೆಯ ಕೆಳ ಸೇತುವೆ ಉದ್ಘಾಟನೆ ನಂತರ ಹೇಳಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications