Breaking: ಬಿಬಿಎಂಪಿಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆ ಅಂಗಡಿಗಳ ಮೇಲೆ ದಾಳಿ

ಬೆಂಗಳೂರು, ಜೂನ್ 11: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

ಅದರಂತೆ, ದಿನಾಂಕ: 01-07-2022 ರಿಂದ 10-07-2022 ರವರೆಗೆ 990 ಕಡೆ ಒಟ್ಟು 1,380.8 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 5,97,800 ರೂ. ದಂಡ ವಿಧಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅದರಂತೆ ಪಾಲಿಕೆಯ ಪಾಲಿಕೆ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುವ ಜೊತೆಗೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುತ್ತಿದೆ.

BBMP Raid against single-use plastic user shops And manufacturing units collected Rs 5 Lakh Fine

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್ ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಪಾಲಿಕೆ ವತಿಯಿಂದ ಮಾರಾಟಗಾರರು ಹಾಗೂ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಬಿಬಿಎಂಪಿ

ಬಿಬಿಎಂಪಿ ಪೂರ್ವವಯದದಲ್ಲಿ 203, ಪಶ್ಚಿಮ ವಲಯದಲ್ಲಿ 255, ದಕ್ಷಿಣವಲಯದಲ್ಲಿ 67, ಮಹದೇವಪುರ ವಲಯದಲ್ಲಿ 193, ಆರ್ ಆರ್ ನಗರದಲ್ಲಿ 146, ಯಲಹಂಕದಲ್ಲಿ 51, ದಾಸರಹಳ್ಳಿ 21, ಬೊಮ್ಮನಹಳ್ಳಿ 53 ಸೇರಿಂದಂತೆ ಒಟ್ಟು 990 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ 1,380.8 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 5,97,800ಲಕ್ಷ ದಂಡವನ್ನು ವಿಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+