ಬೆಂಗಳೂರು ಮತದಾರರ 2025ರ ಪರಿಷ್ಕರಣೆ ಪಟ್ಟಿ ಬಿಡುಗಡೆ: 1 ಕೋಟಿಗೂ ಅಧಿಕ ಮತದಾರರು..
ಬೆಂಗಳೂರು, ಜನವರಿ 06: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. 2025ರ ಸಾಲಿನ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ಒಟ್ಟು 1,02,64,714 ಮತದಾರರು ನಗರ ಜಿಲ್ಲೆಯಲ್ಲಿದ್ದಾರೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದರು.
ಸೋಮವಾರ ಪಾಲಿಕೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2025ರ ಸಾಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯನ್ನು ಪ್ರಕಟಿಸಿ ಅವರು ಮಾತನಾಡಿದರು. ಸದರಿ ಮತದಾರರ ಅಂತಿಮ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ. ಇದರಲ್ಲಿ 52,80,287 ಪುರುಷರು ಮತ್ತು ಮಹಿಳೆಯರು 49,82,589 ಇದ್ದಾರೆ. ತೃತೀಯ ಲಿಂಕಿಗಳ ಸಂಖ್ಯೆ 1,838 ರಷ್ಟಿದೆ ಎಂದು ಅವರು ವಿವರಿಸಿದರು.

ಮತದಾರರ ಅಂತಿಮ ಪ್ರತಿಯನ್ನು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದೆ. ಮತದಾರರು ಪರಿಶೀಲಿಸುವಂತೆ ಸೂಚಿಸಿದರು.
ಯುವ ಮತದಾರರ ಸಂಖ್ಯೆ?
ಬೆಂಗಳೂರಿನಲ್ಲಿ 1.02 ಕೋಟಿ ಮತದಾರರ ಪೈಕಿ 95,391 ಮತದಾರರು ಯುವ ಮತದಾರರಿದ್ದಾರೆ. 2294 ಅನಿವಾಸಿ ಭಾರತೀಯ ಮತದಾರರು, 1712 ಸೇವಾ ಮತದಾರರು ಹಾಗೂ 32,505 ವಿಶೇಷ ಚೇತನ ಮತದಾರರಿದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ರವರ ವೆಬ್‌ಸೈಟ್ www.ceokarnataka.kar.nic.inಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪರಿಶೀಲಿಸಲು ಅವಕಾಶ ನೀಡಲಾಗಿದೆ.
ಸಾರ್ವಜನಿಕರು/ಮತದಾರರು ತಮ್ಮ ಮೊಬೈಲ್‌ನಲ್ಲಿ ವಿ.ಹೆಚ್.ಎ(Voter Helpline App) ಅಥವಾ ವೆಬ್ ಪೋರ್ಟಲ್ ಆದ Voters.eci.gov.in ನಲ್ಲಿ ಖುದ್ದಾಗಿ ಮತದಾರರ ಮಾಹಿತಿಯನ್ನು ಖಾತರಿಪಡಿಸಿಕೊಳ್ಳಬಹುದು. ಜೊತೆಗೆ e-EPIC ಡೌನ್ಲೋಡ್ ಮಾಡಿಕೊಳ್ಳಬಹುದು.
ಆನ್ ಲೈನ್ ನಲ್ಲಿ ಮತದಾರರ ಪಟ್ಟಿ ಪರಿಶೀಲಿಸಿ
ಸಾರ್ವಜನಿಕರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಕಾರ್ಯ ಚಟುವಟಿಕೆಗಳ ಉಪಯೋಗ ಪಡೆದುಕೊಳ್ಳಬೇಕು. ಅದಕ್ಕಾಗಿ ನೀವು ಯಾವ ಕಚೇರಿಗೆ ಹೋಗದೇ ನೀವಿರುವ ಸ್ಥಳದಿಂದಲೇ Web Portal-Voters.eci.gov.in ಅಥವಾ Voter Helpline Mobile App ಮೂಲಕ ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ, ವಾಡ್, ಇತರ ಮಾಹಿತಿ ಪರಿಶೀಲಿಸಿಕೊಳ್ಳಬೇಕು. ಏನಾದರು ಆಕ್ಷೇಪಣೆ ಇದ್ದಲ್ಲಿ ನಮೂನೆ 6, 7 ಮತ್ತು 8 ಇತ್ಯಾದಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿದ್ದೇವೆ ಎಂದರು.
ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ಸದರಿ ಪರಿಷ್ಕೃತ ಮತದಾರರ ಪಟ್ಟಿ-2025 ಬಗ್ಗೆ ಚರ್ಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಮತದಾರರ ಹೆಚ್ಚಳ, ಬದಲಾವಣೆ ಕುರಿತ ತಿಳಿಸಲಾಗಿದೆ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications