ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಓದಿ ತಿಳಿಯಿರಿ: ಗಣೇಶ ಚತುರ್ಥಿ, ಮೊಹರಂ ಹಬ್ಬಕ್ಕೆ ಬಿಬಿಎಂಪಿಯ ಕೊವಿಡ್-19 ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಆಗಸ್ಟ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಹಬ್ಬಗಳ ಆಚರಣೆಗೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕೊವಿಡ್-19 ಭೀತಿ ಹೆಚ್ಚಾಗಿರುವ ಹಿನ್ನೆಲೆ ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬಗಳ ಆಚರಣೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

2021ರ ಆಗಸ್ಟ್ ತಿಂಗಳಿನಿಂದ ಅಕ್ಟೋಬರ್ ತಿಂಗಳ ಅವಧಿಯಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಠಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಹಲವು ಹಬ್ಬಗಳನ್ನು ಆಚರಿಸಲಾಗುತ್ತದೆ. ಈ ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಕ್ಕೆ ಕೊವಿಡ್-19 ಮಾರ್ಗಸೂಚಿಗಳನ್ನು ಹೊರಡಿಸಿದೆ.

3ನೇ ಅಲೆ ಭೀತಿ: ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ3ನೇ ಅಲೆ ಭೀತಿ: ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ

ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕೊವಿಡ್-19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಕತ್ತರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಹಿನ್ನೆಲೆ ಮುಂಬರುವ ಹಬ್ಬಗಳ ಆಚರಣೆ ವೇಳೆ ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದರ ಕುರಿತು ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ.

ಮೊಹರಂ ಹಬ್ಬ ಆಚರಣೆಗೆ ಬಿಬಿಎಂಪಿಯ ಮಾರ್ಗಸೂಚಿ

ಮೊಹರಂ ಹಬ್ಬ ಆಚರಣೆಗೆ ಬಿಬಿಎಂಪಿಯ ಮಾರ್ಗಸೂಚಿ

1. ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು/ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.

2. ಆಗಸ್ಟ್ 12 ರಿಂದ 20ರವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ.

3. ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾಧಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವುದು.

4. ಪಂಜ, ಅಲಂ ಮತ್ತು ತಾಜಿಯತ್ ಅನ್ನು ಸಾರ್ವಜನಿಕರು ಮುಟ್ಟದೇ ದೂರದಿಂದ ನೋಡತಕ್ಕದ್ದು.

5 ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗದಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ.

6. ಖಬರಸ್ಥಾನಗಳಲ್ಲಿ ಕೇವಲ ದಫನ ಮಾಡುವುದಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.

7 ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸತಕ್ಕದ್ದು.

8. 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವುದು

9. ಕೊವಿಡ್-19 ಮುನ್ನೆಚ್ಚರಿಕೆಗಳೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸತಕ್ಕದ್ದು, ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಸಂಖ್ಯೆಯ ಪಾಳೆಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸತಕ್ಕದ್ದು.

10 ಕೊರೊನಾವೈರಸ್ ಮುನ್ನಚ್ಚರಿಕೆಗೆ ಸಂಬಂಧಿಸಿದಂತೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.

11. ಆಗಾಗ ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳುವುದು. ಮಸೀದಿ ಪ್ರವೇಶಕ್ಕೂ ಮೊದಲು ದೇಹದ ತಾಪಮಾನ ಪರೀಕ್ಷಿಸುವುದು.

12. ಭಕ್ತಾಧಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಜನರು ಗುಂಪುಗೂಡುವುದನ್ನು ತಡೆಯುವುದು. ಆಡಳಿತ ಮಂಡಳಿ ಮುಖ್ಯದ್ವಾರದ ಬಳಿ ಭಕ್ತಾದಿಗಳು ಕುಳಿತುಕೊಳ್ಳುವ ವ್ಯವಸ್ಥೆ ಮಾಡತಕ್ಕದ್ದು.

13. ಮಸೀದಿಗಳಲ್ಲಿ ಪ್ರಾರ್ಥನೆಗಳಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದಲೇ ಕಡ್ಡಾಯವಾಗಿ ಮುಸಲ್ಲಾವನ್ನು ತರತಕ್ಕದ್ದು.

14. ಪರಸ್ಪರರು ಹಸ್ತಲಾಘವ ಮತ್ತು ಆಲಿಂಗನವನ್ನು ಮಾಡುವಂತಿಲ್ಲ.

15. ಮಸೀದಿ ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಸೇರಿದಂತೆ ಇತರೆ ಸ್ಥಳಗಳಲ್ಲಿ ಮೊಹರಂ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.

16. ಮೊಹರಂ ಪ್ರಯುಕ್ತ ಯಾವುದೇ ರೀತಿ ಮೆರವಣಿಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭಾಷಣಗಳನ್ನು ಆಯೋಜಿಸುವಂತಿಲ್ಲ.

17. ಭಕ್ತಾದಿಗಳು ಯಾವ ರೀತಿಯ ನಡೆದುಕೊಳ್ಳಬೇಕು, ಯಾವ ರೀತಿ ನಡೆದುಕೊಳ್ಳಬಾರದು ಎಂಬುದನ್ನು ಧ್ವನಿವರ್ಧಕದ ಮೂಲಕ ಸೂಚಿಸುವುದು.

Recommended Video

ಕಾಬೂಲ್ ನಲ್ಲಿ ಹಿಂದು ಅರ್ಚಕರ ದೇವಾಲಯ ಪ್ರೇಮ! | Oneindia Kannada
ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ

1. ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಪೂರ್ವಕವಾಗಿ ಸರಳ ರೀತಿಯಲ್ಲಿ ದೇವಸ್ಥಾನಗಳಲ್ಲಿ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು.

2. ದೇವಸ್ಥಾನ, ಮನೆ ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

3. ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜನೆ ಮಾಡುವ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

4. ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತಿ ಸಮೀಪದ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕ್ ಗಳಲ್ಲಿ ವಿಸರ್ಜಿಸತಕ್ಕದ್ದು.

5. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು.

6. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಅಥವಾ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸತಕ್ಕದ್ದು.

7. ಗಣೇಶ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಕೊವಿಡ್-19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕನಿಷ್ಠ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು ಮತ್ತು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

8. ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ ನಿರ್ದೇಶ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣಗಳ ಏರಿಳಿತ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣಗಳ ಏರಿಳಿತ

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 340 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1233512ಕ್ಕೆ ಏರಿಕೆಯಾಗಿದೆ. 10 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15951ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7913 ಸಕ್ರಿಯ ಪ್ರಕರಣಗಳಿವೆ. ಇದರ ಮಧ್ಯೆ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 433, ಕೆಸಿ ಜನರಲ್ 07 ಹಾಗೂ ಇಂದಿರಾಗಾಂಧಿ 3 ಪ್ರಕರಣ ವರದಿಯಾಗಿವೆ. ಬೆಂಗಳೂರು ನಗವೊಂದರಲ್ಲೇ 1,206 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 149 ಜನರು ಅದೇ ಬ್ಲಾಕ್ ಫಂಗಸ್ ರೋಗದಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆ

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆ

ರಾಜ್ಯದಲ್ಲಿ ಒಂದು ದಿನದಲ್ಲಿ 1298 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1833 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37039 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2931827ಕ್ಕೆ ಏರಿಕೆಯಾಗಿದೆ. ಒಟ್ಟು 2873281 ಸೋಂಕಿತರು ಗುಣಮುಖರಾಗಿದ್ದು. 21481 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
BBMP Released Guidelines for Celebrating Ganesh Chaturthi and Muharram in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X