ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಶುರುವಾಗಿದ್ದು, ಅದರಲ್ಲಿಯೂ ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನಕ್ಕೆ ನೂರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಇಂದು (ಶುಕ್ರವಾರ) 133 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ ಇಂದು 127 ಪ್ರಕರಣಗಳು ಪತ್ತೆಯಾಗಿವೆ.

ಈ ಮಧ್ಯ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಕೋವಿಡ್-19 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮುಖ್ಯವಾಗಿ ಆಯಕಟ್ಟಿನ ಸ್ಥಳಗಳಾದ ಆಸ್ಪತ್ರೆ, ಥಿಯೇಟರ್ ಹಾಗೂ ಹೋಟೆಲ್, ಮಾಲ್ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಕೋವಿಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

BBMP Released New Covid-19 Guidelines For Bengaluru

ಆಸ್ಪತ್ರೆಗಳಿಗೆ ಬಿಬಿಎಂಪಿ ಮಾರ್ಗಸೂಚಿ ಏನಿದೆ?
* ಒಪಿಡಿಗಳಲ್ಲಿ ಎಲ್ಲಾ ILI/ SARI ಪ್ರಕರಣ ಪರೀಕ್ಷಿಸಬೇಕು. ಒಳರೋಗಿಗಳಿಗೆ ಕೊವಿಡ್- 19 ಪರೀಕ್ಷೆ ಮಾಡಬೇಕು.
* ಐಸಿಎಂಆರ್ ಪೋರ್ಟಲ್‌ನಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಎಲ್ಲಾ ಪರೀಕ್ಷಾ ವಿವರಗಳನ್ನು ಅಪ್ಲೋಡ್ ಮಾಡಬೇಕು.
* CT ವ್ಯಾಲ್ಕು 30ಕ್ಕಿಂತ ಕಡಿಮೆ ಇರುವ ಎಲ್ಲಾ ಪಾಸಿಟಿವ್ ಪ್ರಕರಣಗಳನ್ನು ಜೀನೋಮಿಕ್ ಸಿಕ್ವೆನ್ಸಿಂಗ್‌ಗೆ ಕಳುಹಿಸಲು ಸೂಚಿಸಬೇಕು.
* ಖಾಸಗಿ ಆಸ್ಪತ್ರೆಯ ಹಾಸಿಗೆ ಗಳನ್ನು ಶೇ.10 ಮೀಸಲಿಡಬೇಕು.
* ಖಾಸಗಿ ಆಸ್ಪತ್ರೆಯ ಹಾಸಿಗೆಗಳಿಗಾಗಿ ರಿಯಲ್ ಟೈಮ್ ಬೆಡ್ ಲಭ್ಯತೆ ಪೋರ್ಟಲ್ ಅನ್ನು ತಕ್ಷಣವೇ ಸಕ್ರಿಯಗೊಳಿಸಬೇಕು.

ಸಿನಿಮಾ ಹಾಲ್, ಮಾಲ್, ಹೋಟೆಲ್ ಮತ್ತು ಇತರೆ ವಾಣಿಜ್ಯ ಸಂಸ್ಥೆಗಳಿಗೂ ಮಾರ್ಗಸೂಚಿ
* ಬೆಂಗಳೂರಿನ ಹೋಟೆಲ್‌ಗಳು, ಮಾಲ್‌ಗಳು, ಅಂಗಡಿಗಳು, ಚಿತ್ರಮಂದಿರಗಳು ಇತ್ಯಾದಿ ವಾಣಿಜ್ಯ ಸ್ಥಳಗಳಲ್ಲಿ ಕೋವಿಡ್ ಸಮುಚಿತ ನಡವಳಿಕೆ ಖಚಿತತೆ.

* ಸಿನಿಮಾ ಹಾಲ್‌ಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳ ಪ್ರವೇಶಕ್ಕಾಗಿ ಎರಡು ಕೋವಿಡ್ ಲಸಿಕೆ ಕಡ್ಡಾಯ.

BBMP Released New Covid-19 Guidelines For Bengaluru

* ಮಾಸ್ಕ್, ಸಾಮಾಜಿಕ ಅಂತರ, ಸ್ಕ್ರೀನಿಂಗ್ ಟೆಸ್ಟಿಂಗ್ ಕಡ್ಡಾಯ.

* ವಾಣಿಜ್ಯ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳು ಲಸಿಕೆ ಪಡೆದಿರುವುದು ಕಡ್ಡಾಯವಾಗಿರಬೇಕು.

* ಹೆಚ್ಚಿನ ಪ್ರಕರಣಗಳಿರುವ ಪ್ರದೇಶಗಳಿಂದ ಬರುವವರ, ಅದರಲ್ಲೂ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡಬೇಕು.

* ಹೆಚ್ಚು ಜನರು ಸೇರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್‌ಗಳ ನೇಮಕ

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಸೂಚನೆಗಳು
* ಹೆಚ್ಚಿನ ಕಣ್ಗಾವಲು ಚಟುವಟಿಕೆಗಳಿಗೆ ಸಹಕಾರ ನೀಡಬೇಕು.

* ಮುನ್ನೆಚ್ಚರಿಕೆ ಡೋಸ್ ಕವರೇಜ್ ಮತ್ತು ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ RWA ಮಟ್ಟದಲ್ಲಿ ಜಾಗೃತಿ ಉಪಕ್ರಮಗಳನ್ನು ಕೈಗೊಳ್ಳಬೇಕು.

* ಎಲ್ಲಾ ವಯೋಮಾನದವರೂ ಶೇ.100 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು RWA ಗಳಲ್ಲಿ ಶಿಬಿರಗಳನ್ನು ಆಯೋಜಿಸಬೇಕು.

BBMP Released New Covid-19 Guidelines For Bengaluru

* ದೊಡ್ಡ ಅಪಾರ್ಟ್‌ಮೆಂಟ್ ಸಂಕೀರ್ಣಗಳಿಂದ ಜಿನೋಮಿಕ್ ಕಣ್ಗಾವಲಿಗಾಗಿ ಸೀವೇಜ್ ಮಾದರಿಗಳನ್ನು ಸಂಗ್ರಹಿಸಬೇಕು.

* ಚಾಲ್ಕಿಯಲ್ಲಿರುವ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಪ್ರಕಾರ RWA ಪರಿಷ್ಕೃತ ಸಲಹೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಅದನ್ನು ಹಂಚಿಕೊಳ್ಳಬೇಕು.

* ಉಗುಳುವಿಕೆ ವಿರುದ್ಧ ಆಂದೋಲನ ಮತ್ತು ಮಾಸ್ಕ್ ಧಾರಣೆ ಅಭಿಯಾನ ಪುನರಾರಂಭ ಮಾಡಬೇಕು.

* ಎಲ್ಲಾ ಪ್ರಾಥಮಿಕ ಸಂಪರ್ಕಗಳನ್ನು ಪರೀಕ್ಷಿಸಬೇಕು.

ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,737 ಇದೆ. ಬೆಂಗಳೂರಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
More than one hundred cases of Coronavirus Cases are reported per day in the BBMP range. Against this backdrop, the BBMP has released a new Covid-19 Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X