• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಸಭಾ ಚುನಾವಣೆ, ಬಿಬಿಎಂಪಿಯಿಂದ ಜಾಹೀರಾತು ಫಲಕ ತೆರವು ಕಾರ್ಯ ಆರಂಭ

|

ಬೆಂಗಳೂರು, ಮಾರ್ಚ್ 11: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಾಹೀರಾತು ಫಲಕಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ.

ಹೋಟೆಲ್‌, ಮಾಲ್‌ಗಳಲ್ಲೂ ಫ್ಲೆಕ್ಸ್‌ ನಿಷೇಧ: ಬಿಬಿಎಂಪಿ ಖಡಕ್‌ ನಿರ್ಧಾರ

ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಾಹೀರಾತು ಮತ್ತು ಇತರೆ ಪ್ರಚಾರ ಸಾಮಗ್ರಿಗಳ ತೆರವು ಜವಾಬ್ದಾರಿಯನ್ನು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ವಹಿಸಿದೆ.

ಮರ-ಗೋಡೆ ಮೇಲೆ ಭಿತ್ತಿಪತ್ರ ಅಂಟಿಸಿದ್ರೆ ಬೀಳುತ್ತೆ ಲಕ್ಷ ದಂಡ

ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸುತ್ತಿದ್ದಂತೆ, ಬಿಬಿಎಂಪಿ ಆಯಕ್ತ ಮಂಜುನಾಥ್ ಪ್ರಸಾದ್, ನಗರಾದ್ಯಂತ ಇರುವ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಎಲ್ಲ ರೀತಿಯ ಜಾಹೀರಾತುಗಳು, ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಿ ಬೆಳಗ್ಗೆ ವರದಿ ನೀಡುವಂತೆ ಪಾಲಿಕೆಯ ಎಲ್ಲಾ ವಲಯಗಳ ಮುಖ್ಯ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸೂಚನೆ ಹಿನ್ನೆಲೆಯಲ್ಲೇ ಎಲ್ಲಾ ಎಂಟೂ ವಲಯಗಳಲ್ಲಿ ಭಾನುವಾರ ರಾತ್ರಿಯಿಂದಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

English summary
With dates for the Lok sabha election code of conduct came into force on Sunday. Employees of BBMP will work through sunday night to bring down all government advertisement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X