ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ನೀತಿ ಸಂಹಿತೆ: ಬೆಂಗಳೂರಲ್ಲಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ತೆರವು

|
Google Oneindia Kannada News

ಬೆಂಗಳೂರು, ಮಾರ್ಚ್ 28: ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್ ಹಾಗೂ ಅನಧಿಕೃತ ಜಾಹಿರಾತು ಫ್ಲೆಕ್ಸ್ ಗಳ ಕಾರ್ಯಾಚರಣೆ ನಡೆದಿದೆ.

ಮಲ್ಲೇಶ್ವರದ ಐಪಿಪಿ ಬಳಿ ಬ್ಯಾನರ್ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಚಾಲನೆ ನೀಡಿದರು. ರಾಜಕೀಯ ಮುಖಂಡರು ಈಗಾಗಲೆ ನಗರದಾದ್ಯಂತ ಪ್ರಚಾರಕ್ಕಾಗಿ ಕಟೌಟ್ ಮತ್ತು ಬ್ಯಾನರ್‌ಗಳನ್ನು ಹಾಕಿಸಿದ್ದರು.

2018ರ ಚುನಾವಣೆಯ ಪ್ರಮುಖ ಸಂಗತಿಗಳು ಇವು2018ರ ಚುನಾವಣೆಯ ಪ್ರಮುಖ ಸಂಗತಿಗಳು ಇವು

ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಟಿಕೆಟ್ ಆಕಾಂಕ್ಷಿಗಳ ಬ್ಯಾನರ್‌ಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಹೀಗಾಗಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ತಾಲ್ಲೂಕು ಆಡಳಿತ ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿದೆ.

BBMP removing politicians flex and banners

ಇಂದಿರಾ ಕ್ಯಾಂಟೀನ್ ನಲ್ಲಿ ಇಂದಿರಾ ಗಾಂಧಿ ಭಾವಚಿತ್ರ ಬಿಟ್ಟು ಬೇರೆಲ್ಲಾ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ. ಅಪ್ಪಾಜಿ ಕ್ಯಾಂಟೀನ್ ನಲ್ಲಿರುವ ಪೋಸ್ಟರ್, ಬ್ಯಾನರ್ ಕೂಡ ತೆರವುಗೊಳಿಸಲಾಗಿದೆ. ನಗರದ ಹಲವೆಡೆ 20ಕ್ಕೂ ಹೆಚ್ಚು ಪ್ರಹರಿ ವಾಹನಗಳೊಂದಿಗೆ ಅಪರ ಜಿಲ್ಲಾ ಚುನಾವಣಾಧಿಕಾರಿ ದಯಾನಂದ್ ಮತ್ತು ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮುಂದುವರೆದಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಮುಖ್ಯಾಂಶಗಳುಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಮುಖ್ಯಾಂಶಗಳು

ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 12ರಂದು ನಡೆಯಲಿದೆ. ಮತ ಎಣಿಕೆ ಮೇ 15ರಂದು ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಬೇರೆ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸಂಬಂಧಿಸಿದಂತೆ ಪ್ರಚಾರವನ್ನು ಮಾಡುವಂತಿಲ್ಲ.

English summary
Following the model code of conduct during State assembly poll. BBMP is removing all flex and banners installed by leaders of various political parties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X