ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ
ಬೆಂಗಳೂರು, ಸೆಪ್ಟೆಂಬರ್ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮತ್ತೊಂದು ಕಡೆ ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸುತ್ತಿದೆ.
ಚುನಾವಣೆ ಘೋಷಣೆಯಾಗದಿದ್ದರೂ ಬಿಬಿಎಂಪಿಯ 198 ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಸೋಮವಾರ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದೆ.

ಬಿಬಿಎಂಪಿಯ ಕೌನ್ಸಿಲ್ ಅವಧಿ ಸೆಪ್ಟೆಂಬರ್ 10ಕ್ಕೆ ಅಂತ್ಯಗೊಂಡಿದೆ. ಸರ್ಕಾರ 1990ನೇ ಬ್ಯಾಚ್ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ. ಶುಕ್ರವಾರ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಬಿಬಿಎಂಪಿ ಚುನಾವಣೆ ನಡೆದು ಹೊಸ ಮೇಯರ್, ಉಪ ಮೇಯರ್ ಆಯ್ಕೆಯಾಗುವ ತನಕ ಆಡಳಿತಾಧಿಕಾರಿಯೇ ಪಾಲಿಕೆಯ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿದೆ. ಪಾಲಿಕೆಯ ಈಗಿರುವ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಿಸಲು ಮುಂದಾಗಿದೆ. ಬಿಬಿಎಂಪಿ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ಸರ್ಕಾರ ಬಯಸಿದೆ.
View this post on Instagramಬಿಬಿಎಂಪಿ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ #Bengaluru #BBMP #Reservation
A post shared by Oneindia Kannada (@oneindiakannada) on
ಬಿಬಿಎಂಪಿ ಕಾಯ್ದೆಗೆ ತಿದ್ದುಪಡಿ ತಂದರೆ ಈಗಿರುವ ವಲಯಗಳ ಸಂಖ್ಯೆ 8 ರಿಂದ 12ಕ್ಕೆ ಏರಿಕೆಯಾಗಲಿದೆ. ಮೇಯರ್ ಮತ್ತು ಉಪ ಮೇಯರ್ ಅವಧಿ 12 ರಿಂದ 30 ತಿಂಗಳಿಗೆ ಏರಿಕೆಯಾಗಲಿದೆ.
ಈಗ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ 225 ವಾರ್ಡ್‌ಗಳು ಆದರೆ ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಗೆ ಯಾವುದೇ ಬೆಲೆ ಇಲ್ಲವಾಗುತ್ತದೆ. ಆಗ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸಬೇಕಾಗುತ್ತದೆ.












Click it and Unblock the Notifications