• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ

|

ಬೆಂಗಳೂರು, ಸೆಪ್ಟೆಂಬರ್ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮತ್ತೊಂದು ಕಡೆ ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸುತ್ತಿದೆ.

ಚುನಾವಣೆ ಘೋಷಣೆಯಾಗದಿದ್ದರೂ ಬಿಬಿಎಂಪಿಯ 198 ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಸೋಮವಾರ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದೆ.

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಗೌರವ್‌ ಗುಪ್ತ

ಬಿಬಿಎಂಪಿಯ ಕೌನ್ಸಿಲ್ ಅವಧಿ ಸೆಪ್ಟೆಂಬರ್ 10ಕ್ಕೆ ಅಂತ್ಯಗೊಂಡಿದೆ. ಸರ್ಕಾರ 1990ನೇ ಬ್ಯಾಚ್ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ. ಶುಕ್ರವಾರ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಹೆಚ್ಚಳ

ಬಿಬಿಎಂಪಿ ಚುನಾವಣೆ ನಡೆದು ಹೊಸ ಮೇಯರ್, ಉಪ ಮೇಯರ್ ಆಯ್ಕೆಯಾಗುವ ತನಕ ಆಡಳಿತಾಧಿಕಾರಿಯೇ ಪಾಲಿಕೆಯ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಬಿಬಿಎಂಪಿ ಚುನಾವಣೆ ಫಿಕ್ಸ್: ರಾಜ್ಯ ಸರ್ಕಾರದ ತೀರ್ಮಾನ

ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿದೆ. ಪಾಲಿಕೆಯ ಈಗಿರುವ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಿಸಲು ಮುಂದಾಗಿದೆ. ಬಿಬಿಎಂಪಿ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ಸರ್ಕಾರ ಬಯಸಿದೆ.

ಬಿಬಿಎಂಪಿ ಕಾಯ್ದೆಗೆ ತಿದ್ದುಪಡಿ ತಂದರೆ ಈಗಿರುವ ವಲಯಗಳ ಸಂಖ್ಯೆ 8 ರಿಂದ 12ಕ್ಕೆ ಏರಿಕೆಯಾಗಲಿದೆ. ಮೇಯರ್ ಮತ್ತು ಉಪ ಮೇಯರ್ ಅವಧಿ 12 ರಿಂದ 30 ತಿಂಗಳಿಗೆ ಏರಿಕೆಯಾಗಲಿದೆ.

   European Guide Vision ಸಂಸ್ಥೆ Infosys ತೆಕ್ಕೆಗೆ | Oneindia Kannada

   ಈಗ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ 225 ವಾರ್ಡ್‌ಗಳು ಆದರೆ ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಗೆ ಯಾವುದೇ ಬೆಲೆ ಇಲ್ಲವಾಗುತ್ತದೆ. ಆಗ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸಬೇಕಾಗುತ್ತದೆ.

   English summary
   The Urban Development Department (UDD) has announced the reservation list for all 198 BBMP wards. BBMP council ends on September 10, 2020 and Government appointed 1990 batch IAS officer Gaurav Gupta as administrator.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X