India
  • search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಧಾನಿ ಸಂಚರಿಸಿದ ರಸ್ತೆಯೇ ಕಳಪೆ: ಟ್ವೀಟ್ ಮೂಲಕ ಎಚ್‌ಡಿಕೆ ಲೇವಡಿ

|
Google Oneindia Kannada News

ಬೆಂಗಳೂರು, ಜೂ. 25: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಪ್ರಧಾನಿ ಸಂಚಾರ ನಡೆಸುವ ರಸ್ತೆಗಳನ್ನು ಸುಮಾರು 23 ಕೋಟಿ ಖರ್ಚು ಮಾಡಿ ದುರಸ್ತಿ ಮಾಡಲಾಗಿತ್ತು. ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಪ್ರಧಾನಿ ದೆಹಲಿಗೆ ಹೋಗ ಬಳಿಕ ಡಾಂಬರು ಕಿತ್ತು ಹೋಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ್ದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ ಮತ್ತು ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ. ಬಿಜೆಪಿ ಅಭಿವೃದ್ಧಿ ಮಾದರಿ ಇದೇನಾ?. ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಟೀಕೆ ಮಾಡಿದ್ದಾರೆ.

ಮೋದಿ ನಿರ್ಗಮನದ ಬಳಿಕ ಕಿತ್ತುಹೋದ ರಸ್ತೆ; ವರದಿ ಕೇಳಿದ ಪ್ರಧಾನಿ ಕಚೇರಿ ಮೋದಿ ನಿರ್ಗಮನದ ಬಳಿಕ ಕಿತ್ತುಹೋದ ರಸ್ತೆ; ವರದಿ ಕೇಳಿದ ಪ್ರಧಾನಿ ಕಚೇರಿ

ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರವ ರಸ್ತೆಗಳನ್ನು ಸರಿಪಡಿಸಬಹುದು ಎಂದು ಕೋರ್ಟ್‌ ಚಾಟಿ ಬೀಸಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು ಎಂದು ಹೈಕೊರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 4 ಮೇಲ್ಸೇತುವೆ ನಿರ್ಮಿಸಲು ಸರ್ಕಾರ 400 ಕೋಟಿ ಮೀಸಲುಬೆಂಗಳೂರಿನಲ್ಲಿ 4 ಮೇಲ್ಸೇತುವೆ ನಿರ್ಮಿಸಲು ಸರ್ಕಾರ 400 ಕೋಟಿ ಮೀಸಲು

ಗುಂಡಿ ಮುಚ್ಚುವ ಮೊದಲೇ ಅಲ್ಲಿ ಸಮಸ್ಯೆ

ಗುಂಡಿ ಮುಚ್ಚುವ ಮೊದಲೇ ಅಲ್ಲಿ ಸಮಸ್ಯೆ

ರಸ್ತೆ ಕಿತ್ತು ಹೋದ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ರಸ್ತೆ ದುರಸ್ತಿಗೆ ಖರ್ಚು ಮಾಡಿದ ಹಣಕ್ಕೂ ಮತ್ತು ಡಾಂಬರು ಕಿತ್ತು ಬಂದಿರುವುದಕ್ಕೆ ಸಂಬಂಧವಿಲ್ಲ. ಗುಂಡಿ ಮುಚ್ಚುವ ಮೊದಲೇ ಅಲ್ಲಿ ಕೊಳಚೆ ನೀರಿನ ಸಮಸ್ಯೆ ಇತ್ತು. ಅದನ್ನು ಸರಿಯಾಗಿ ಮುಚ್ಚದ ಹಿನ್ನೆಲೆ ಡಾಂಬರು ಕಿತ್ತು ಬಂದಿದೆ. ರಸ್ತೆ ಕಿತ್ತುಹೋಗಿದೆ ಎಂಬ ವಿಚಾರ ಬಂದ ಮೇಲೆ ಮರಿಯಪ್ಪನಪಾಳ್ಯ ಸೇರಿದಂತೆ ಎಲ್ಲೆಲ್ಲಿ ರಸ್ತೆ ದುರಸ್ಥಿ ಮಾಡಲಾಗಿತ್ತೋ ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಕಳಪೆ ಕಾಮಗಾರಿ ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದರು.

ಒಡೆಯರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ

ಒಡೆಯರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ

ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೆ. ವಾರ್ಡ್‌ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಅಧಿಕಾರದ ವಿಕೃತಿ

ಬಿಜೆಪಿಯ ಅಧಿಕಾರದ ವಿಕೃತಿ

ಕೋರ್ಟ್‌ ಹೇಳಿದರಷ್ಟೇ ಕೆಲಸ ಎನ್ನುವ ಚಾಳಿ ಬಿಜೆಪಿ ಸರ್ಕಾರದ್ದು, ನ್ಯಾಯಾಲಯದ ಆದೇಶವನ್ನೇ ಧಿಕ್ಕರಿಸಿ ನಡೆದ ಈ ನಿರ್ಲಜ್ಜ ಸರ್ಕಾರಕ್ಕೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ, ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ ಅಧಿಕಾರದ ವಿಕೃತಿ ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ. ಬಿಜೆಪಿ ಅಧಿಕಾರ ಪಿಪಾಸು ಆಗಿದೆ. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್‌ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರ್ಕಾರ. ಈಗ ವಾರ್ಡ್‌ ವಿಂಗಡೆಯ ನಾಟಕ ಆಡಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಅತ್ಯುತ್ತಮ ಆಡಳಿತ, ಸೇವೆಗಳು ಲಭ್ಯವಾಗಲಿ

ಪಾಳಿಕೆಯಾಗಿದ್ದನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು, ನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಆಡಳಿತ, ಸೇವೆಗಳು ಲಭ್ಯವಾಗಲಿ ಎಂದು. ಆದರೆ ಬಿಜೆಪಿ ಸರಕಾರವು ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

English summary
Prime Minister Modi visited Karnataka. Roads that had been repaired in the cost of Rs 23 crore now in news. Former chief minister H. D. Kumaraswamy tweet about BBMP poor work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X