ಬಕ್ರೀದ್ ವೇಳೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ: ಬಿಬಿಎಂಪಿ
ಬೆಂಗಳೂರು, ಜುಲೈ 06: ಜುಲೈ 10ರಂದು ಮುಸ್ಲಿಂ ಸಮುದಾಯದವರು ಬಕ್ರೀದ್ ಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹತ್ವದ ಆದೇಶ ಹೊರಡಿಸಿದ್ದು, ರಸ್ತೆಗಳಲ್ಲಿ, ಮಸೀದಿಯ ಹೊರಗಡೆ, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶವಿಲ್ಲ ಎಂದು ಹೇಳಿದೆ.
ಬಕ್ರೀದ್ ಜಗತ್ತಿನಾದ್ಯಂತ ಮುಸ್ಲಿಮರಿಗೆ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಚಂದ್ರವರ್ಷದ ಕೊನೆಯ ತಿಂಗಳಾಗಿರುವ ದಹು ಅಲ್ ಹಿಜ್ಜಾಹದ ಹತ್ತನೇ ದಿನದಂದು ಬಕ್ರೀದ್ ಆಚರಣೆ ಮಾಡಲಾಗುತ್ತದೆ. ಈ ಸಮಸಯದಲ್ಲಿ ಹಜ್‌ಗೆ ಮುಸ್ಲಿಮರು ಯಾತ್ರೆ ಕೈಗೊಳ್ಳುವರು. ಪವಿತ್ರ ಹಜ್‌ಗೆ ಜೀವಮಾನದಲ್ಲಿ ಒಂದು ಸಲವಾದರೂ ಭೇಟಿ ನೀಡಬೇಕು ಎನ್ನುವ ನಂಬಿಕೆ ಮುಸ್ಲಿಮ್ ಸಮುದಾಯದವರಲ್ಲಿದೆ.
ಬಕ್ರೀದ್ ಹಬ್ಬವು ತ್ಯಾಗದ ಸಂದೇಶವನ್ನು ನೀಡುತ್ತದೆ. ಅಂದರೆ ದೇವರು ತೋರಿಸಿದ ದಾರಿಯಲ್ಲಿ ನಡೆಯಬೇಕು. ಬಕ್ರೀದ್ ಆಚರಣೆ ದಿನಾಂಕವನ್ನು ಚಂದ್ರನ ದರ್ಶನದಿಂದ ನಿರ್ಧರಿಸಲಾಗುತ್ತದೆ. ಪವಿತ್ರ ರಂಜಾನ್ ತಿಂಗಳ ಸುಮಾರು 70 ದಿನಗಳ ನಂತರ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತದೆ.

ಕಳೆದ ಬಾರಿ ಶೇಕಡ 50 ಜನರಿಗಷ್ಟೇ ಮೀಸಲಾಗಿದ್ದ ಪ್ರಾರ್ಥನೆ
2021ರ ಬಕ್ರೀದ್ ಆಚರಣೆ ವೇಳೆ ಕೊರೊನಾ ಸೋಂಕು ಹರಡುವಿಕೆ ಕಾರಣ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಶೇಕಡಾ 50 ಜನರಿಗಷ್ಟೆ ಅವಕಾಶ ನೀಡಲಾಗಿತ್ತು. ಮಸೀದಿಯ ಸಾಮರ್ಥ್ಯದ ಅರ್ಧದಷ್ಟು ಮಂದಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಹೇಳಿದ್ದರು.
ಆದರೆ ಈ ಬಾರಿ ಆ ರೀತಿಯ ಯಾವುದೇ ನಿರ್ಬಂಧ ವಿಧಿಸಿಲ್ಲ, ಆದರೂ ಕೋವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ. ಆದರೆ ಪ್ರತಿ ಬಾರಿ ಹಬ್ಬದ ಸಂದರ್ಭದಲ್ಲಿ ಮಸೀದಿ, ಪ್ರಾರ್ಥನಾ ಮಂದಿರಗಳಲ್ಲಿ ಜಾಗದ ಕೊರತೆಯಿಂದ ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದರಿಂದ ಸಾರ್ವಜನಿಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಬಾರಿ ಅದೇ ರೀತಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿ ಈ ಆದೇಶ ಹೊರಡಿಸಿದೆ. ರಸ್ತೆಗಳಲ್ಲಿ, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪ್ರಾರ್ಥನೆ ಮಾಡಿ, ಸಾಮಾನ್ಯ ಜನರಿಗೆ ತೊಂದರೆ ಉಂಟು ಮಾಡದಂತೆ ಸೂಚನೆ ನೀಡಿದೆ.
ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಜುಲೈ 10ರಂದು ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲು ಚಿಂತನೆ ನಡೆಸಲಾಗಿದೆ. ಪ್ರಾರ್ಥನೆಯಿಂದ ವಾಹನ ಸವಾರರಿಗೆ ತೊಂದರೆಯಾಗದಂತೆ ತಡೆಯಲು ಈಗಲೆ ಆದೇಶ ಹೊರಡಿಸಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications