ಬೆಂಗಳೂರಿನಲ್ಲಿ ಈ ರೀತಿ ಕಟ್ಟಡ ನಿರ್ಮಾಣ ಮಾಡಿದ್ದರೆ ಕೆಡವಲಿದ್ದೇವೆ ಎಂದ ಬಿಬಿಎಂಪಿ!, 12 ಕಟ್ಟಡಗಳ ಭಾಗ ತೆರವು!!
ಬೆಂಗಳೂರಿನ ನಿರ್ದಿಷ್ಟ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಅಕ್ರಮ ಆಸ್ತಿದಾರರ ಮೇಲೆ ಬಿಬಿಎಂಪಿಯು ಬೃಹತ್ ಅಭಿಯಾನವನ್ನೇ ಶುರು ಮಾಡಿದೆ. ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಬಿಬಿಎಂಪಿಯು ಮುಂದುವರಿಸಿದೆ. ಅನಧಿಕೃತ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವವರಿಗೆ ಶಾಕ್ ನೀಡಲು ಮುಂದಾಗಿದ್ದು. ಈಗಾಗಲೇ ದೊಡ್ಡ ಅಭಿಯಾನವನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಯಾವ ಆಸ್ತಿಯ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ವಿವರ ಇಲ್ಲಿದೆ.
ನಗರದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿಯು ಮುಂದಾಗಿದೆ. ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಕ್ರಮಗಳನ್ನು ಈಗಾಗಲೇ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ತೆಗೆದುಕೊಂಡಿದೆ. ಇದೀಗ ಕಟ್ಟಡ ನಿರ್ಮಾಣ ಮಾಡಲು ಕಟ್ಟಡ ನಕ್ಷೆ ಉಲ್ಲಂಘಿಸಿ ಕಾಮಗಾರಿ (ಮನೆ ಅಥವಾ ಕಟ್ಟಡ) ನಿರ್ಮಾಣ ಮಾಡುತ್ತಿರುವ ಮೇಲೆ ಕಣ್ಣಿರಿಸಿದೆ. ಅಲ್ಲದೇ ಈ ರೀತಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವ ಆಸ್ತಿದಾರರಿಗೆ ಬಿಸಿ ಮುಟ್ಟಿಸಲಾಗಿದೆ. ಈ ರೀತಿಯ ಕಟ್ಟಡಗಳನ್ನು ಹೊಡೆದುರುಳಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಈಗಾಗಲೇ ಪ್ರಮುಖ ವಲಯದಲ್ಲಿ ಈ ಅಭಿಯಾನವನ್ನು ಶುರು ಮಾಡಲಾಗಿದೆ.

ಬೆಂಗಳೂರಿನಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದೆ. ಇದೀಗ ಈ ರೀತಿಯ 12 ಕಟ್ಟಡಗಳ ವ್ಯತಿರಿಕ್ತ ಭಾಗ/ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸಲಾಗಿದೆ. ಈ ಅಭಿಯಾನವನ್ನು ಇದೀಗ ಯಲಹಂಕ ವಲಯ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದೆ. ಇನ್ಮುಂದೆ ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಪ್ರಾರಂಭವಾಗುವ ಸಾಧ್ಯತೆ ಇದೆ.
ಯಲಹಂಕ ಹಾಗೂ ಬ್ಯಾಟರಾನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಕ್ಷೆ ಮಂಜೂರಾತಿ ಪಡೆದಿರುವುದನ್ನು ಉಲ್ಲಂಘಿಸಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳ ವ್ಯತಿರಿಕ್ತ ಮತ್ತು ಹೆಚ್ಚುವರಿ ಮಹಡಿಗಳ ತೆರವು ಕಾರ್ಯಾಚರಣೆ ಶುರು ಮಾಡಿದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಪಡೆಯುವಂತಹ ಮಾಲೀಕರಿಗೆ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕಟ್ಟಡ ತೆರವುಗೊಳಿಸುವುದರ ಜೊತೆಗೆ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನು ಬಿಬಿಎಂಪಿ ನೀಡಿದೆ.

ನಕ್ಷೆ ಮಂಜೂರಾತಿ ಇಲ್ಲ: ಇನ್ನು ಬೆಂಗಳೂರಿನ ಯಲಹಂಕ ವಲಯದಲ್ಲಿ ನಕ್ಷೆ ಮಂಜೂರಾತಿ ಪಡೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುವವರ ಮೇಲೂ ಬಿಬಿಎಂಪಿ ಕಣ್ಣಿರಿಸಿದೆ. ಕೆಲವು ಸ್ವತ್ತುಗಳು ಬಿ ಖಾತಾ ವ್ಯಾಪ್ತಿಯಲ್ಲಿದ್ದು ಈ ರೀತಿ ಇರುವ ಆಸ್ತಿಗಳಿಗೆ ನಕ್ಷೆ ಮಂಜೂರಾತಿ ನೀಡಿರುವುದಿಲ್ಲ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯ ಸರ್ಕಾರವು ಬಿ ಖಾತಾಗೆ ಮೂರು ತಿಂಗಳು ಅವಧಿ ನೀಡಿದ್ದರೂ, ಬಿ ಖಾತಾ ಇರುವವರಿಗೆ ಸಂಕಷ್ಟ ತಪ್ಪಿದ್ದಲ್ಲ ಅಂತಲೇ ಹೇಳಲಾಗುತ್ತಿದೆ.
ಕಟ್ಟಡದ ಮಾಲೀಕರಿಗೆ ನೋಟಿಸ್ ಜಾರಿ: ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ನಕ್ಷೆ ಮಂಜೂರಾತಿ ಪಡೆದುಕೊಂಡು ನಕ್ಷೆ ಉಲ್ಲಂಘಿಸಿ ವ್ಯತಿಕ್ತವಾಗಿ ನಿರ್ಮಿಸುವ ಹಾಗೂ ಹೆಚ್ಚುವರಿ ಮಹಡಿಗಳನ್ನು ನಿರ್ಮಾಣ ಮಾಡುವವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಅದರಂತೆ ಕೆಲ ಕಟ್ಟಡ ಮಾಲೀಕರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುತ್ತಿದ್ದಾರೆ. ಇನ್ನು ಕೆಲವರು ತೆರವುಗೊಳಿಸಿರುವುದಿಲ್ಲ. ಅಂತಹ ಕಟ್ಟಡಗಳ ವ್ಯತಿರಿಕ್ತ ಭಾಗ ಹಾಗೂ ಹೆಚ್ಚುವರಿ ಮಹಡಿಗಳನ್ನು ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸಲಾಗುತ್ತಿದ್ದು, ತೆರವು ಕಾರ್ಯಚರಣೆ ವೇಳೆ ತಗಲುವ ವೆಚ್ಚವನ್ನು ಕಟ್ಟಡದ ಮಾಲೀಕರಿದಂಲೇ ವಸೂಲಿ ಮಾಡಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.












Click it and Unblock the Notifications