ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯಕೀಯ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದಿಂದ 1 ಸಾವಿರ ಕೋಟಿ ರೂ. ಅನುದಾನ ಕೇಳಿದ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಜುಲೈ 20: ನಗರದಲ್ಲಿ ವೈದ್ಯಕೀಯ ಸೌಕರ್ಯಗಳನ್ನು ಹೆಚ್ಚಿಸಲು 1 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಬಿಬಿಎಂಪಿ ಸರ್ಕಾರದ ಬಳಿ ಮನವಿ ಮಾಡಿದೆ.

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದ್ದು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪುನರ್ ನವೀಕರಣ ಮಾಡುತ್ತಿರುವ ಕೆ.ಆರ್.ಮಾರ್ಕೆಟ್ ಪ್ರದೇಶಕ್ಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 6 ರೆಫರಲ್ ಆಸ್ಪತ್ರೆಗಳು ಮಾತ್ರ ಇವೆ. ಬಹುತೇಕ ಆಸ್ಪತ್ರೆಗಳಲ್ಲಿ ಪ್ರಸೂತಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.

 BBMP Seeks Rs 1 thousand Crore From Government For Better Medical Infrastructure

ಹೀಗಾಗಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಎಲ್ಲಾ ಆಸ್ಪತ್ರೆಗಳನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವುದರ ಜತೆಗೆ ಆಸ್ಪತ್ರೆ ಇಲ್ಲದ ಕಡೆ ಹೊಸದಾಗಿ ಆಸ್ಪತ್ರೆ ನಿರ್ಮಾಣ ಮಾಡುವ ಅವಶ್ಯಕತೆ ಇದೆ.

ನಗರದ ವೈದ್ಯಕೀಯ ಸೇವೆ ಹೆಚ್ಚಳ ಮಾಡುವ ಉದ್ದೇಶದಿಂದ 1 ಸಾವಿರ ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ. ಒಪ್ಪಿಗೆ ಸಿಕ್ಕರೆ ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು.

ನವೀಕೃತ ಕೆ.ಆರ್.ಮಾರ್ಕೆಟ್‍ಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯವಸ್ಥಿತವಾಗಿ ವ್ಯಾಪಾರ ಮಾಡಲು ಸಮ್ಮತಿಸಿದರೆ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗುವುದು. ಎಲ್ಲೆಂದರಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳು , ಕೆಲವು ತಾಂತ್ರಿಕ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿವೆ.

Recommended Video

Nalin Kumar audio leak ! ಹೊರಬಿತ್ತು ಸ್ಫೋಟಕ ಸತ್ಯ | Oneindia Kannada

ಈ ಕಾಮಗಾರಿಗಳಿಗೆ ವೇಗ ನೀಡಲು ತೀರ್ಮಾನಿಸಲಾಗುವುದು. ಅವಿನ್ಯೂ ರಸ್ತೆ ಹಾಗೂ ಕೆ.ಆರ್.ಮಾರ್ಕೆಟ್ ಪುನರ್ ನವೀಕರಣ ಕಾರ್ಯಗಳನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

English summary
BBMP has made a proposal before the state government seeking the sanction of around Rs 600-Rs 1,000 crore to improve the medical infrastructure in the city. BBMP Chief Commissioner Gaurav Gupta said the proposal has been made based on the recommendation and after a discussion with the medical task force.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X