Tax Pending: ಮೊದಲ ಭಾರಿಗೆ ಕಾರು, ಶಾಲಾ ಬಸ್ ವಶಕ್ಕೆ ಪಡೆದ ಬಿಬಿಎಂಪಿ
ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಸ್ತಿ ತೆರಿಗೆ ಪಾವತಿಸದ ಕಾರಣಕ್ಕಾಗಿ ಕಾರುಗಳು ಮತ್ತು ಶಾಲಾ ಬಸ್‌ಗಳಂತಹ ಚರ ಆಸ್ತಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಜಪ್ತಿ ಮಾಡಿದೆ. ಈ ಮೂಲಕ ತೆರಿಗೆ ಬಾಕಿದಾರರಿಗೆ ಬಿಸಿ ಮುಟ್ಟಿಸಿದೆ.
ತೆರಿಗೆ ಬಾಕಿದಾರರಿಂದ ವಸೂಲಿಗಾಗಿ ಹಲವು ಭಾರಿ ನೋಟೀಸ್ ನೀಲಾಗಿತ್ತು. ಆದರೆ ಸ್ಪಂದಿಸದ ಕಾರಣ ತೆರಿಗೆ ಮರುಪಡೆಯುವಿಕೆ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ಎಲ್ಲಾ ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ಬಾಕಿದಾರರ ವಾಹನ ಜಪ್ತಿ ಬಳಿಕ ಅವರು ಕೆಲವೇ ಗಂಟೆಗಳ ನಂತರ ಶೇಕಡಾ 50% ಪಾವತಿಸಲು ಮತ್ತು ನಮ್ಮ ನೋಟೀಸ್ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾಗಿ ತಿಳಿದು ಬಂದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.
ಆರು ತಿಂಗಳಿಂದ ಕಾರ್ಯಾಚರಣೆ
ಬಿಬಿಎಂಪಿ ತನ್ನ ತರಿಗೆ ವಸೂಲಿ ಡ್ರೈವ್ ಭಾಗವಾಗಿ ಕಳೆದ ಆರು ತಿಂಗಳಲ್ಲಿ 10,603 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆ ಸೀಲ್ ಮಾಡಿತ್ತು. ಸದ್ಯ ವಶಪಡಿಸಿಕೊಂಡ ವಾಹನಗಳನ್ನು ಇಡಲು ಮೀಸಲಾದ ಸ್ಥಳವನ್ನು ಹೊಂದಿಲ್ಲದ ಕಾರಣ ನಾಗರಿಕ ಸಂಸ್ಥೆ ಚಲಿಸಬಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ ಎಂದು ತಿಳಿದು ಬಂದಿದೆ.
2023ರ ನವೆಂಬರ್ ನಿಂದ ಫೆಬ್ರವರಿ ಮಧ್ಯದಲ್ಲಿ 46,318 ಆಸ್ತಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಇದೇ ಅವಧಿಯಲ್ಲಿ ಕಂದಾಯ ಇಲಾಖೆ ವತಿಯಿಂದ ತಮ್ಮ ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ 7,203 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಬಿಬಿಎಂಪಿಗೆ ಬರಬೇಕಾದ ಬಾಕಿ ಎಷ್ಟು?
ಬಿಬಿಎಂಪಿಗೆ ಒಟ್ಟು 500 ಕೋಟಿ ರೂ.ಗೂ ಹೆಚ್ಚು ಬಾಕಿ ಹಣ ಪಾವತಿಯಾಗಬೇಕಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಹಣ ಬಾಕಿ ಉಳಿಸಿಕೊಂಡ ತೆರಿಗೆ ಸುಸ್ತಿದಾರರ ವಿರುದ್ಧ ಇಂಥದ್ದೊಂದು ಜಪ್ತಿ ಕ್ರಮ ಕೈಗೊಂಡಿದ್ದು ಇದೇ ಮೊದಲು ಎಂದು ಬಿಬಿಎಂಪಿ ತಿಳಿಸಿದೆ.
ಇನ್ನೂ ಸ್ವ-ಮೌಲ್ಯಮಾಪನ ಯೋಜನೆ (ಎಸ್‌ಎಎಸ್) ಅಡಿಯಲ್ಲಿ ಸಲ್ಲಿಸಿದ ದಾಖಲೆಗಳು ಮತ್ತು ಆಸ್ತಿಯನ್ನು ಮರು ಪರಿಶೀಲಿಸಲು ಬಿಬಿಎಂಪಿ ಆಸ್ತಿಗಳನ್ನು ಮರು ಪರಿಶೀಲಿಸಲು ಆರಂಭಿಸಿದೆ. ಈ ಉಪಕ್ರಮವು ಬಿಬಿಎಂಪಿಯ ಆದಾಯವನ್ನು 550 ಕೋಟಿ ರೂ.ಗಳಷ್ಟು ಹೆಚ್ಚಿಸಲು ನೆರವಾಗಲಿದೆ ಎಂದು ಬಿಬಿಎಂಪಿ ಅಂದಾಜಿಸಿದೆ.
ಬಿಬಿಎಂಪಿಯ ತೆರಿಗೆ ವಸೂಲಾತಿ ಅಭಿಯಾನವನ್ನು ವಿರೋಧಿಸಿದ ಪ್ರಮುಖ ನಾಯಕರಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸೇರಿದ್ದಾರೆ. ಸೋಮವಾರ, ಬಿಜೆಪಿ ನಾಯಕರ ನಿಯೋಗ ಬಿಬಿಎಂಪಿಯ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಇದು "ಸುಲಿಗೆ" ಮತ್ತು "ನಾಗರಿಕರ ಕಿರುಕುಳ" ಎಂದು ದೂರಿದೆ.
85 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ
ನಗರದ ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಾಲಿಕೆ ವಶಪಡಿಸಿಕೊಂಡಿದೆ.
ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದಲ್ಲಿ ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications