ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಯಿಂದ ಮಕ್ಕಳಿಗೆ ವಿಶೇಷ ಕೋವಿಡ್ ಕೇಂದ್ರ ಸ್ಥಾಪನೆ

|
Google Oneindia Kannada News

ಬೆಂಗಳೂರು, ಜುಲೈ 16: ಸಂಭಾವ್ಯ ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗುಲುವ ಸಾಧ್ಯತೆ ವ್ಯಕ್ತಗೊಂಡಿರುವ ಹಿನ್ನೆಲೆಯಲ್ಲಿ ಹಲವು ಸಿದ್ಧತೆಗಳನ್ನು ಕೈಗೊಂಡಿದ್ದು, ಪದ್ಮನಾಭನಗರದಲ್ಲಿ ಮಕ್ಕಳಿಗಾಗಿ ವಿಶೇಷ ಕೊರೊನಾ ಆರೈಕೆ ಕೇಂದ್ರ ತೆರೆದಿರುವುದಾಗಿ ಬಿಬಿಎಂಪಿ ತಿಳಿಸಿದೆ.

"ಮಕ್ಕಳಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆಯನ್ನು ಕೆಲವು ತಜ್ಞರು ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಚಿಕಿತ್ಸೆಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸೋಂಕಿತ ಮಕ್ಕಳೊಂದಿಗೆ ಇರಲು ತಾಯಂದಿರಿಗೂ ಅವಕಾಶ ಕಲ್ಪಿಸಲಾಗುವುದು" ಎಂದು ಬೆಂಗಳೂರು ದಕ್ಷಿಣ ವಲಯದ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ತಿಳಿಸಿದ್ದಾರೆ.

ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಿ; ರಾಜ್ಯಗಳಿಗೆ ಕೇಂದ್ರದ ಸೂಚನೆಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಿ; ರಾಜ್ಯಗಳಿಗೆ ಕೇಂದ್ರದ ಸೂಚನೆ

"ಸದ್ಯಕ್ಕೆ ಪದ್ಮನಾಭನಗರದ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್ಮೆಂಟ್‌ನಲ್ಲಿ 42 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಮೂಲಸೌಕರ್ಯ ಹಾಗೂ ಆಮ್ಲಜನಕ ಸೌಲಭ್ಯವನ್ನು ಈ ಆಸ್ಪತ್ರೆ ಹೊಂದಿದ್ದು, ಕೇವಲ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ ಮಕ್ಕಳ ಚಿಕಿತ್ಸೆಗೆ ಸಹಕಾರಿಯಾಗಲಿದೆ" ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

BBMP Set Up Covid Centre For Children In Padmanabhanagar

"ಮಕ್ಕಳನ್ನು ಆಸ್ಪತ್ರೆಯಲ್ಲಿರಿಸುವುದು ಕಷ್ಟ. ಹೀಗಾಗಿ ಅವರಿಗಿಷ್ಟವಾಗುವಂತೆ ಪ್ರಾಣಿ, ಪಕ್ಷಿ ಹಾಗೂ ಕಲಾಕೃತಿಗಳನ್ನು ಗೋಡೆ ಮೇಲೆ ಬಿಡಿಸಿ ವಿಶೇಷವಾಗಿ ಅಲಂಕರಿಸಲಾಗಿದೆ" ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯನ್ನು ಗರ್ಭಿಣಿಯರ ಚಿಕಿತ್ಸೆಗೆ ಮೀಸಲಿರಿಸಲಾಗಿದೆ.

Recommended Video

ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ | Oneindia Kannada

English summary
BBMP set up covid care centre for children in padmanabhnagar over probability of corona third wave,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X