Property: ಆಸ್ತಿಯ ಈ ವಿಷಯದಲ್ಲಿ ಬಿಬಿಎಂಪಿಯಿಂದ ಹೊಸ ದಾಖಲೆ!
Property Tax: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿಯ ವಿಚಾರದಲ್ಲಿ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲಿ ಇ ಖಾತಾ ನೀಡುವುದರೊಂದಿಗೆ ಹೊಸ ದಾಖಲೆ ಸೃಷ್ಟಿಯಾಗಿದೆ. ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದಿರುವ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲಾಗುತ್ತಿದ್ದು. ಇದರಿಂದ ಬಿಬಿಎಂಪಿಗೆ ಭರ್ಜರಿ ಲಾಭವಾಗುತ್ತಿದೆ. ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಮೊದಲು ಇ ಖಾತಾವನ್ನು ಜಾರಿ ಮಾಡಿದ್ದೇ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವುದಕ್ಕೆ. ಇದೀಗ ಈ ಯೋಜನೆ ಸಕ್ಸಸ್ ಆಗಿದೆ.
ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ದಾಖಲೆ ಮಾಡುವಲ್ಲಿ ಬಿಬಿಎಂಪಿಯು ಯಶಸ್ವಿಯಾಗಿದೆ. ಅಷ್ಟೇ ಅಲ್ಲ ಇತಿಹಾಸದಲ್ಲೇ ಮೊದಲ ಎನ್ನುವಂತೆ ದಾಖಲೆಯೊಂದನ್ನು ಮಾಡಿದೆ. ಪ್ರಸಕ್ತ ಆರ್ಥಿಕ ಮುಕ್ತಾಯವಾಗುವುದಕ್ಕೆ ಇನ್ನು 15 ದಿನಗಳು ಬಾಕಿ ಉಳಿದಿವೆ. ಇಷ್ಟು ದಿನಗಳು ಬಾಕಿ ಉಳಿದಿರುವಾಗಲೇ ಆಸ್ತಿ ತೆರಿಗೆ ಸಂಗ್ರಹ ಗುರಿಯಲ್ಲಿ ಶೇ 88ರಷ್ಟು ಆಸ್ತಿ ತೆರಿಗೆಯನ್ನು ಸಂಗ್ರಹ ಮಾಡಲಾಗಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 4,604 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. ಈ ಬಾರಿ ಬರೋಬ್ಬರಿ 5,210 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡಬೇಕು ಎನ್ನುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ ಇದೀಗ ಶೇ. 88 ಪ್ರತಿಶತದಷ್ಟು ಆಸ್ತಿ ತೆರಿಗೆ ಸಂಗ್ರಹಿಸಿರುವುದಾಗಿ ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಲಹಂಕದಲ್ಲಿ ಉತ್ತಮ ಸಾಧನೆ: ಇನ್ನು ಬೆಂಗಳೂರಿನ ಎಂಟು ವಲಯಗಳಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಉತ್ತಮ ಸಾಧನೆ ಆಗಿದೆ. ಆದರೆ, ಆಸ್ತಿ ತೆರಿಗೆ ಸಂಗ್ರಹಕ್ಕೆ ನೀಡಲಾಗಿರುವ ಗುರಿಯಲ್ಲಿ ಯಲಹಂಕ ವಲಯವು ಮುನ್ನಡೆ ಸಾಧಿಸಿದೆ. ಈ ಬಾರಿಯ ಆರ್ಥಿಕ ವರ್ಷದಲ್ಲಿ 455.24 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಗುರಿ ನೀಡಲಾಗಿತ್ತು. ಅಂದರೆ ಗುರಿಯಲ್ಲಿ ಶೇ 99.97 ಗುರಿ ಮುಟ್ಟಿದ್ದು 445.15 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹವಾಗಿದೆ.
ಯಾವ ವಲಯದಲ್ಲಿ ಎಷ್ಟು ತೆರಿಗೆ ಸಂಗ್ರಹ: 2024 ಹಾಗೂ 2025ನೇ ಆರ್ಥಿಕ ವರ್ಷದಲ್ಲಿ 5,210 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಅದರಲ್ಲಿ ಇದೀಗ 4604 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಮೂಲಕ ಶೇ 88.36ರಷ್ಟು ಪ್ರಗತಿ ಸಾಧಿಸಿದಂತೆ ಆಗಿದೆ.
ಗುರಿ ಮುಟ್ಟಲು ಸೂಚನೆ: ಇನ್ನು ಈ ಬಾರಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಮುಟ್ಟಬೇಕು ಎಂದು ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಹೇಳಿದ್ದಾರೆ. ಇನ್ನು 15 ದಿನಗಳು ಬಾಕಿ ಉಳಿಸಿದ್ದು. ಇಷ್ಟರ ಒಳಗಾಗಿ ಎಲ್ಲಾ ಬಾಕಿ ಆಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. 2024-25ನೇ ಸಾಲಿನ ಆರ್ಥಿಕ ವರ್ಷ ಮುಕ್ತಾಯವಾಗುವುದಕ್ಕಿಂತ ಮುಂಚೆ ಬಾಕಿ ಇರುವ ಆಸ್ತಿ ತೆರಿಗೆ ಮೊತ್ತವನ್ನು ಸಂಗ್ರಹಿಸಲು ಕ್ರಮ ತೆಗೆದುಕೊಳ್ಳಿ ಅಂತ ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇನ್ನು ದೊಡ್ಡ ಮಟ್ಟದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಸಂಸ್ಥೆಗಳು ಮತ್ತು ವಾಣಿಜ್ಯ ಆಸ್ತಿಗಳಿಗೆ ಭೇಟಿ ನೀಡಿ ಬಾಕಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಿಂಗಳಾಂತ್ಯದ ಒಳಗಾಗಿ ಬಿಬಿಎಂಪಿ ನಿಗದಿ ಮಾಡಿರುವ ಗುರಿಯನ್ನು ಮುಟ್ಟಬೇಕು/ ಎಲ್ಲಾ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications