ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ಕಣ್ಣೀರಿಟ್ಟ ಮಹಿಳಾ ಕಾರ್ಪೊರೇಟರ್

|
Google Oneindia Kannada News

ಬೆಂಗಳೂರು, ಜನವರಿ 18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ನೀಡದಿದ್ದಕ್ಕೆ ಕಾರ್ಪೊರೇಟರ್ ಮಹಾಲಕ್ಷ್ಮೀ ಕಣ್ಣೀರಿಟ್ಟಿದ್ದಾರೆ.

'ನನಗೆ ನಿರಾಸೆಯಾಗಿದೆ. ಅಧ್ಯಕ್ಷ ಸ್ಥಾನ ಕೊಡುತ್ತೇನೆ ಎಂದು ಹೇಳಿ ಕೊಡಲಿಲ್ಲ. ಈಗ ಸದಸ್ಯತ್ವ ಕೊಡುವುದಾಗಿ ಇದ್ದಾರೆ. ಆದರೆ ಇದರಿಂದ ನನಗೆ ನೋವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದರು.

ಜೀವ ವೈವಿಧ್ಯತೆ ರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಬಿಬಿಎಂಪಿಜೀವ ವೈವಿಧ್ಯತೆ ರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಬಿಬಿಎಂಪಿ

ಬಿಬಿಎಂಪಿ 12 ಸ್ಥಾಯಿ ಸಮಿತಿಯ ಸ್ಥಾನಗಳಿಗೆ ಬಿಬಿಎಂಪಿ ಕೇಂದ್ರ ಕಚೇರಿ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯುತ್ತಿದೆ. ಬೆಳ್ಳಗ್ಗೆ 8 ಗಂಟೆಯಿಂದ 9.30 ರ ವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿತ್ತು.

BBMP Standing Commitee Election

ಅಧಿಕಾರಕ್ಕೋಸ್ಕರ ಏನು ಮಾಡಬೇಕು ಅಂತ ನಿಮಗೆ ಗೊತ್ತಿದೆ. ನಾನು ಇದೇ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಕೊಡಿ ಅಂತ ಬೇಡಿಕೆ ಇಟ್ಟಿರಲಿಲ್ಲ. ಅವರಾಗಿಯೇ ಕೊಡುವುದಾಗಿ ಹೇಳಿ ಈಗ ನೀಡಿಲ್ಲ ಎಂದರು.

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ನಿಷೇಧಾಜ್ಞೆ ಹೊರಡಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಚುನಾವಣೆ ಆರಂಭ ಮಾಡಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್. ವಿ ಪ್ರಸಾದ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಇದುವರೆಗೂ ನಿಗದಿಯಾಗಿ ಮೂರು ಬಾರಿಚುನಾವಣೆ ಮುಂದೂಡಲಾಗಿತ್ತು.

English summary
BBMP Standing Commitee Election Today For 12 Posts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X