ಬಿಬಿಎಂಪಿಯ 198 ವಾರ್ಡ್‌ಗಳಲ್ಲೂ ಶೀಘ್ರ ಜಿಮ್ ಸೆಂಟರ್‌

ಬೆಂಗಳೂರು, ಜು.25: ಬಿಬಿಎಂಪಿಯ ಒಟ್ಟು 28 ವಾರ್ಡ್‌ಗಳಲ್ಲೂ ಶೀಘ್ರ ಜಿಮ್‌ಗಳನ್ನು ಆರಂಭಿಸಲಾಗುತ್ತದೆ ಎಂದು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿಸಮಿತಿ ಅಧ್ಯಕ್ಷ ಇಮ್ರಾನ್‌ ಪಾಷ ತಿಳಿಸಿದ್ದಾರೆ.

ಗಾಂಧಿನಗರ ವಿಧಾನಸಭಾ ಕ್ಷೇತ್ರಲ್ಲಿರುವ ಸ್ವತಂತ್ರಪಾಳ್ಯದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಜಿಮ್‌ ಕಟ್ಟಡಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಯುವ ಜನಾಂಗದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚುತ್ತಿದೆ. ಅತಿ ಹೆಚ್ಚು ಶುಲ್ಕ ಕೊಟ್ಟು ಜಿಮ್‌ಗೆ ಹೋಗುತ್ತಿದ್ದಾರೆ, ಆದರೆ ಬಡ ಯುವಕರು ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ವಾರ್ಡ್‌ನಲ್ಲಿ ಜಿಮ್‌ ಸ್ಥಾಪಿಸಲಾಗುವುದು.

ಬಿಬಿಎಂಪಿಯಿಂದ ಪ್ರತಿ ವಾರ್ಡ್‌ನಲ್ಲಿ ಹೆಲ್ತ್‌ ಕ್ಲಬ್‌ ನಿರ್ಮಿಸಲು ಸಮಿತಿಯಿಂದ ನಿರ್ಣಯ ಕೈಗೊಂಡು ಈ ಪ್ರಸ್ತುತ ವರ್ಷದಲ್ಲಿಯೇ ಜಿಮ್‌ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಆಯುಕ್ತರ ಬಳಿ ಚರ್ಚೆ ನಡೆಸಲಾಗುತ್ತದೆ.ಹೆಲ್ತ್‌ ಕ್ಲಬ್‌ಗಳಲ್ಲಿ ಅತ್ಯಾಧುನಿಕ ಜಿಮ್ ಉಪಕರಣಗಳನ್ನು ಅಳವಡಿಸುವ ಮೂಲಕ ಬಡಬಗ್ಗರು ಜಿಮ್ ಮಾಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

Bbmp standing committee recommended to start Gym in all 198 ward

ಎಸ್‌ಎಫ್‌ಎಸ್‌ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾದ ಕೆಲ ಕಾಮಗಾರಿಗಳನ್ನು ತಾಂತ್ರಿಕ ಕಾರಣಗಳಿಂದ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ, ಶೀಘ್ರ ಟೆಂಡರ್ ಕರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+