BBMP: ಫೆ.24 ರಿಂದ ಬೆಂಗಳೂರಲ್ಲಿ ಬಿಬಿಎಂಪಿಯಿಂದ ಹೊಸ ಸರ್ವೇ

ಬೆಂಗಳೂರು, ಫೆಬ್ರವರಿ 21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದೆ. ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಮಾಹಿತಿ ನೀಡಿದರು.

ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಶಾಲೆಯಿಂದ ಹೊರಗುಳಿದ ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ರನ್ವಯ ಸ್ಥಳೀಯ ಸಂಸ್ಥೆಗಳು ಶಿಕ್ಷಣ ರಿಜಿಸ್ಟನ್ನು ನಿರ್ವಹಿಸಬೇಕಾಗಿರುತ್ತದೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (ತಿದ್ದುಪಡಿ) ನಿಯಮಗಳು, 2014 ರನ್ವಯ ಮಕ್ಕಳ ಹಾಜರಾತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಲಾಗಿದೆ.

BBMP Survey for identify of Children do not attend school in Bengaluru on Feb 24th

ಶಾಲೆಗಳಿಂದ ಹೊರಗುಳಿದ ಮಕ್ಕಳ ಸರ್ವೇ ನಡೆಸುವ ಸಂಬಂಧ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಹೈಕೋರ್ಟ್ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆ ಗುರುತಿಸಲಾಗುತ್ತದೆ ಎಂದು ತಿಳಿಸಿದರು.

ಶಾಲಾಗೆ ಬಾರದ ಮಕ್ಕಳ ಸರ್ವೇ ಹೇಗೆ?

ಅದರಂತೆ, ಸದರಿ ಸಮೀಕ್ಷೆನ್ನು ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖಾ ವತಿಯಿಂದ Karnataka Government App Store ನಲ್ಲಿರುವ 'Karnataka H2H Children Survey App' ಎಂಬ ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಬೇಕಾಗಿರುತ್ತದೆ.

BBMP Survey for identify of Children do not attend school in Bengaluru on Feb 24th

ಉಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ 2024-25ನೇ ಸಾಲಿಗೆ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆ ಗುರುತಿಸುವ ಕಾರ್ಯವನ್ನು ಎಂಟು ವಲಗಳ ವಲಯವಾರು ನೋಡಲ್ ಅಧಿಕಾರಿಗಳ ಜವಾಬ್ದಾರಿ ಆಗಿದೆ.

ಫೆಬ್ರವರಿ 24 ರಿಂದ ಸಮೀಕ್ಷೆ ಆರಂಭ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವಂತಹ ಎಲ್ಲಾ ಮನೆಗಳನ್ನು ಉಚ್ಛ ನ್ಯಾಯಾಲಯದ ನಿರ್ದೇಶನದಂತೆ 24ನೇ ಫೆಬ್ರವರಿ 2025ರಿಂದ ಪಾಲಿಕೆಯ ಎಂಟು ವಲಯಗಳಲ್ಲಿ ಮನೆ ಮನೆ ಸಮೀಕ್ಷೆಯ ಮಾಡಬೇಕು. ಅದಕ್ಕಾಗಿ ಪ್ರತಿ ವಾರ್ಡ್‌ಗೆ ಸುಮಾರು 10 ಗಣತಿದಾರರನ್ನು ನೇಮಿಸಲಾಗಿದೆ. ಸದರಿ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ 6 ರಿಂದ 18 ವರ್ಷದ ವಯಸ್ಸಿನ ಎಲ್ಲರನ್ನೂ ಸಮೀಕ್ಷೆ ಕೈಗೊಳ್ಳಲಿದೆ. ಸಾರ್ವಜನಿಕರು ಸಹಕರುವಂತೆ ಬಿಬಿಎಂಪಿ ಪ್ರಕಟಣೆಯಲ್ಲಿ ಕೋರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+