Pothole: ರಸ್ತೆಗುಂಡಿ ಸಮಸ್ಯೆಗೆ ಮುಕ್ತಿ ಹಾಡಲು ಬಿಬಿಎಂಪಿಯಿಂದ ಮಹತ್ವದ ನಿರ್ಧಾರ
ಬೆಂಗಳೂರು, ಮೇ 27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ರಸ್ತೆಗುಂಡಿ ಮುಚ್ಚುವ, ಮೇಲ್ವಿಚಾರಣೆಗಾಗಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ವಲಯ ಮಟ್ಟದಲ್ಲಿ 'ಟಾಸ್ಕ್ ಫೋರ್ಸ್" ಸಮಿತಿ ರಚಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಆದೇಶಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ.ಮೀ ರಸ್ತೆ ಜಾಲ ಇದೆ. ಈ ರಸ್ತೆಗಳ ಪೈಕಿ 1344.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11533.16 ಕಿ.ಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.
ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ "ವಲಯವಾರು ಟಾಸ್ಕ್ ಫೋರ್ಸ್" ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಸದರಿ ಟಾಸ್ಕ್ ಫೋರ್ಸ್ ಅನ್ನು ವಲಯ ಮಟ್ಟದ ವಲಯ ಆಯುಕ್ತರು ರವರ ನೇತೃತ್ವದಲ್ಲಿ ರಚನೆ ಆಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಹೇಗಿರಲಿದೆ ಟಾಸ್ಕ್ ಫೋರ್ಸ್ ಸಮಿತಿ? ವಿವರ
1. ವಲಯ ಆಯುಕ್ತರು - ಅಧ್ಯಕ್ಷರು.
2. ವಲಯ ಜಂಟಿ ಆಯುಕ್ತರು - ಸದಸ್ಯರು.
3. ವಲಯ ಮುಖ್ಯ ಅಭಿಯಂತರರು - ಸದಸ್ಯರು.
4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು - ಸದಸ್ಯರು.
5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು - ಸದಸ್ಯರು.
6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು - ಸದಸ್ಯರು.
7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) - ಸದಸ್ಯರ ಕಾರ್ಯದರ್ಶಿ.
ಆಯಾ ವಲಯ ವ್ಯಾಪ್ತಿಯಲ್ಲಿ ವಲಯ ಆಯುಕ್ತರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ರಾಜಕಾಲುವೆ ಸ್ವಚ್ಛತೆ ಕಾರ್ಯಕ್ಕೆ ಚುರುಕು
ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ನಗರದ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕೆ ಮತ್ತಷ್ಟು ಚುರುಕು ನೀಡಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಬೇಕು. ಎಲ್ಲಾ ಕಡೆ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications