ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರಿಗೆ ಮತ್ತೆ ತೆರಿಗೆ ಭಾರ ಹಾಕಿದ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಜನವರಿ 28: ಬೆಲೆ ಏರಿಕೆಯಿಂದ ಜನ ಬಳಲಿ ಬೆಂಡಾಗಿದ್ದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರು ನಾಗರಿಕರ ಮೇಲೆ ಮತ್ತೊಂದು ಬರೆ ಎಳೆಯಲು ಸಜ್ಜಾಗಿದೆ.

Recommended Video

ಅವರ ದುಡ್ಡಲ್ಲಿ ಫ್ರೀ ಊಟ ಮಾಡೊ ನಮ್ಮದು ಒಂದು ಜನ್ಮಾನ..? | SWIGGY | ZOMATO | UBEREATS | DUNZO | DELIVERY BOY

ಇನ್ಮುಂದೆ ಆಸ್ತಿ ತೆರಿಗೆಯ ಜೊತೆ ಹೆಚ್ಚುವರಿಯಾಗಿ ರಸ್ತೆ ತೆರಿಗೆಯನ್ನೂ ಬೆಂಗಳೂರಿಗರು ಪಾವತಿಸಬೇಕು ಎಂದು ಬಿಬಿಎಂಪಿ ಹೇಳಿದೆ. ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯಕ್ಕೆ ವಿರೋಧ ಪಕ್ಷಗಳಿಂದ ವಿರೋಧ ವ್ಯಕ್ತವಾಯಿತು.

ದುಪ್ಪಟ್ಟು ತೆರಿಗೆಯಿಂದ ಮೂಲ ಆದಾಯ ವೃದ್ಧಿಗೆ ಬಿಬಿಎಂಪಿ ತಂತ್ರಗಾರಿಕೆದುಪ್ಪಟ್ಟು ತೆರಿಗೆಯಿಂದ ಮೂಲ ಆದಾಯ ವೃದ್ಧಿಗೆ ಬಿಬಿಎಂಪಿ ತಂತ್ರಗಾರಿಕೆ

ಭೂ ಸಾರಿಗೆ ಕರ ಜಾರಿಗೆ ಬಂದರೆ ಇನ್ಮುಂದೆ ಬೆಂಗಳೂರು ನಾಗರಿಕರು ತಮ್ಮ ಆಸ್ತಿ ತೆರಿಗೆಯ ಜೊತೆ ಶೇ 2 ರಷ್ಟು ಭೂಸಾರಿಗೆ ಕರವನ್ನು ಪಾಲಿಕೆಗೆ ಪಾವತಿಸಬೇಕು ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಎಲ್ಲದಕ್ಕಿಂತ ಮುಖ್ಯ ಅಂಶವೆಂದರೆ, ಹೀಗೆ ಸಂಗ್ರಹವಾಗುವ ತೆರಿಗೆ ಹಣವನ್ನು ಭೂ ಸಾರಿಗೆ ಇಲಾಖೆಗೆ ಕಳುಹಿಸದೇ, ಪಾಲಿಕೆಯೇ ತನ್ನ ಬಳಿ ಇಟ್ಟುಕೊಂಡು ರಸ್ತೆ, ಚರಂಡಿ, ಬೀದಿ ದೀಪಗಳ ನಿರ್ಮಾಣ ಮತ್ತು ನಿರ್ವಹಣೆಗೆ ಬಳಸಿಕೊಳ್ಳಲಿದೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಮೇಯರ್ ಮುಂದಾಗಬೇಕು ಎಂದು ಕೌನ್ಸಿನಲ್ ಸಭೆ ನಿರ್ಣಯಿಸಿದೆ.

BBMP Tax Collection Eye On Road Tax

ಒಂದು ವೇಳೆ ಬಿಬಿಎಂಪಿಯ ಈ ನಿರ್ಣಯಕ್ಕೆ ಸರ್ಕಾರ ಅನುಮತಿ ನೀಡಿದರೆ, ಶೇ 2 ರಷ್ಟು ಭೂ ಸಾರಿಗೆ ಕರವನ್ನು ವಸೂಲಿ ಮಾಡುವುದರಿಂದ ಬಿಬಿಎಂಪಿಗೆ ವಾರ್ಷಿಕ 150 ಕೋಟಿ ರುಪಾಯಿ ದೊರೆಯಲಿದೆ. ಈ ಹಣವನ್ನು ರಸ್ತೆ ಅಭಿವೃದ್ದಿಗೆ ಬಳಸಿಕೊಳ್ಳಬಹುದು ಎಂಬ ವಾದ ಬಿಬಿಎಂಪಿದಾಗಿದೆ.

English summary
BBMP Tax Collection Eye On Road Tax. 2% raod tax will collection by bbmp. Bringing 2 per road tax will fetch BBMP Rs 150 crore per annum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X