ಕಸ ಸಂಗ್ರಹಣೆ ದಿನಕ್ಕೆರಡು ಬಾರಿ ಮಾಡಿದರೆ ಹೇಗೆ: ಬಿಬಿಎಂಪಿ ಚಿಂತನೆ
ಬೆಂಗಳೂರು, ನವೆಂಬರ್ 8: ಬೆಂಗಳೂರಲ್ಲಿ ತ್ಯಾಜ್ಯ ವಿಲೇವಾರಿಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ತ್ಯಾಜ್ಯ ಸಂಸ್ಕರಣಾ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಿದೆ ಇರುವುದು ಮತ್ತು ನಿಗದಿತ ಪ್ರದೇಶದಲ್ಲಿ ಸಾರ್ವಜನಿಕರು ತ್ಯಾಜ್ಯದ ಹಾಕದ ಪರಿಣಾಮ ತ್ಯಾಜ್ಯ ವಿಲೇವಾರಿಯ ಸಂಕಷ್ಟ ಎದುರಾಗಿದೆ.
ಹಾಗಾಗಿ ದಿನಕ್ಕೆರಡು ಬಾರಿ ತ್ಯಾಜ್ಯವನ್ನು ಸಂಗ್ರಹಿಸದರೆ ಹೇಗೆ ಎನ್ನುವ ಚಿಂತನೆಯನ್ನು ಬಿಬಿಎಂಪಿ ಮಾಡಿದೆ. ಬೆಳಗ್ಗೆ ತ್ಯಾಜ್ಯ ಸಂಗ್ರಹಿಸಿದ ಬಳಿಕ ಮಧ್ಯಾಹ್ನವಾಗುವುದರೊಳಗೆ ಅಷ್ಟೇ ಪ್ರಮಾಣದ ತ್ಯಾಜ್ಯ ರಸ್ತೆ ಬದಿ ಹಾಗೂ ಬ್ಲಾಕ್‌ಸ್ಪಾಟ್‌ಗಳಲ್ಲಿ ಬಂದು ಬೀಳುತ್ತವೆ ಹಾಗಾಗಿ ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಬಾರಿ ತ್ಯಾಜ್ಯ ಸಂಗ್ರಹಣೆ ಮಾಡಲು ಚಿಂತಿಸಲಾಗುತ್ತಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕಳೆದೆರೆಡು ದಿನಗಳಿಂದ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದ ಕಾರಣ ಕಸದ ರಾಶಿ ಹೆಚ್ಚಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳಿಗಿಂತಲೂ ಶೇ.40ರಷ್ಟು ಹೆಚ್ಚುವರಿ ತ್ಯಾಜ್ಯ ಸೃಷ್ಟಿಯಾಗುತ್ತದೆ.

ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಮಡಿವಾಳ, ಕೆಆರ್ ಪುರ ಸೇರಿ ಪ್ರಮುಖ ಮಾರುಕಟ್ಟೆಯಲ್ಲಿ ಟನ್ ಗಟ್ಟಲೆ ತ್ಯಾಜ್ಯ ಶೇಖರಣೆಗೊಂಡಿದೆ.












Click it and Unblock the Notifications