ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸಿನಿಮಾ ಶೂಟಿಂಗ್ ಮಾಡಂಗಿಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 10: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಇನ್ನು ಯಾವುದೇ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೊಡಬಾರದು ಎನ್ನುವ ಕುರಿತು ಬಿಬಿಎಂಪಿಯಲ್ಲಿ ಚರ್ಚೆ ನಡೆದಿದೆ.

ಈಗಾಗಲೇ ಬಿಡುಗಡೆಗೊಂಡಿರುವ ತಮಿಳಿ ನ ಇಮೈಕಾ ನೋಡಿಗಳ್ ಸಿನಿಮಾ ಶೂಟಿಂಗ್ ಗೆ ಅವಕಾಶ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಬಿಬಿಎಂಪಿ ಕಚೇರಿ ಆವರಣದಲ್ಲಿ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ.

ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ

ಈ ವಿಚಾರವನ್ನು ಶಾಸಕ ಸುರೇಶ್ ಕುಮಾರ್‌ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ಚಲನಚಿತ್ರರಂಗದ ಬೆಳವಣಿಗೆ ದೃಷ್ಟಿಯಿಂದ ಅನುಮತಿ ನೀಡಿಯೇ ಶೂಟಿಂಗ್‌ಗೆ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರಮುಖ ರಸ್ತೆಗಳು, ಅಂಡರ್ ಪಾಸ್, ಮೇಲ್ಸೇತುವೆ, ಪುರಭವನ, ಸ್ಮಶಾನ, ಪಾಲಿಕೆ ಕಟ್ಟಡಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ.

BBMP to ban film shooting in its head office premises

ಕನ್ನಡ ದಶರಥ ಚಿತ್ರಕ್ಕೆ ಪಶ್ಚಿಮ ವಲಯ ಕಚೇರಿಯಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು, ಯುಟರ್ನ್ ಚಿತ್ರವೂ ಅನುಮತಿ ಪಡೆದಿತ್ತು, ಕಿರುಚಿತ್ರ, ಡಾಕ್ಯುಮೆಂಟರಿ, ಧಾರವಾಹಿಗಳಿಗೂ ವಲಯ ಮಟ್ಟದಲ್ಲಿ ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ

ಆದರೆ ತಮಿಳು ಚಿತ್ರಕ್ಕೆ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು ಎನ್ನುವ ಕುರಿತು ಆಲೋಚನೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

English summary
After controversy sparked over Tamil film shooting at BBMP head office premises, authority is thinking of abandon any shooting in the premises in future for safety cause.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X