ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬೆಂಗಳೂರಲ್ಲಿ ಮಾಸ್ಕ್‌ ಹಾಕದಿದ್ದರೆ ಮೇ 1 ರಿಂದ ದಂಡ

|
Google Oneindia Kannada News

ಬೆಂಗಳೂರು, ಏಪ್ರಿಲ್ 28; ಕರ್ನಾಟಕ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಬುಧವಾರ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 126 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ಸರ್ಕಾರ ಸಾರ್ವಜಿನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದರೂ ದಂಡ ಹಾಕುವ ಬಗ್ಗೆ ತೀರ್ಮಾನ ಪ್ರಕಟಿಸಿಲ್ಲ. ಸ್ಥಳೀಯ ಆಡಳಿತವೇ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದೆ.

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸದ್ಯಕ್ಕೆ ದಂಡ ವಿಧಿಸುವುದಿಲ್ಲ: ಡಾ. ಸುಧಾಕರ್ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸದ್ಯಕ್ಕೆ ದಂಡ ವಿಧಿಸುವುದಿಲ್ಲ: ಡಾ. ಸುಧಾಕರ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ನಿಯಮ ಮೀರಿದವರಿಗೆ ದಂಡ ಹಾಕಲು ತೀರ್ಮಾನಿಸಿದೆ.

Breaking: ಚಂಡೀಗಡದಲ್ಲಿ ಮಾಸ್ಕ್ ಕಡ್ಡಾಯ, ಉಲ್ಲಂಘಿಸಿದರೆ ದಂಡ Breaking: ಚಂಡೀಗಡದಲ್ಲಿ ಮಾಸ್ಕ್ ಕಡ್ಡಾಯ, ಉಲ್ಲಂಘಿಸಿದರೆ ದಂಡ

BBMP marshals

ಏಪ್ರಿಲ್ ಅಂತ್ಯದ ತನಕ ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಬಿಬಿಎಂಪಿ ಮಾರ್ಷಲ್‌ಗಳು ಮಾಸ್ಕ್ ಹಾಕುವಂತೆ ಜನರಿಗೆ ಅರಿವು ಮೂಡಿಲಿದ್ದಾರೆ. ಮೇ 1 ರಿಂದ 250 ರೂ. ದಂಡ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ.

Breaking; ಕೇರಳ, ಮಾಸ್ಕ್ ಕಡ್ಡಾಯಗೊಳಿಸಿ ಆದೇಶ Breaking; ಕೇರಳ, ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲಿ 114 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1648 ಆಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಎರಡು ಅಡಿಗಳ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮಾಸ್ಕ್ ಹಾಕದಿದ್ದರೆ ಎಷ್ಟು ದಂಡ ವಿಧಿಸಬೇಕು? ಎಂದು ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿದೆ.

ಕೋವಿಡ್ ಮೊದಲ, ಎರಡು ಮತ್ತು 3ನೇ ಅಲೆ ಸಂದರ್ಭದಲ್ಲಿ ಮಾಸ್ಕ್ ಹಾಕದಿದ್ದರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 500 ರೂ., ಪಟ್ಟಣ ಪ್ರದೇಶದಲ್ಲಿ 250 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡವನ್ನು ಹಾಕಲಾಗುತ್ತಿತ್ತು.

English summary
BBMP marshals will collect Rs 250 fine from people who not wearing mask in public place from May 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X