ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2019ರ ಅಂತ್ಯದೊಳಗೆ ನಮ್ಮ ಮೆಟ್ರೋ ಮಾರ್ಗದಲ್ಲಿ ಸೈಕಲ್ ಪಥ

|
Google Oneindia Kannada News

ಬೆಂಗಳೂರು, ಡಿಸೆಂಬರ್ 25: ಈ ವರ್ಷದ ಅಂತ್ಯದೊಳಗೆ ಮೆಟ್ರೋ ಮಾರ್ಗದಲ್ಲಿ ಸೈಕಲ್ ಪಥ ನಿರ್ಮಾಣವಾಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ನಮ್ಮ ಮೆಟ್ರೋ ಹಾದು ಹೋಗುವ ಮಾರ್ಗಗಳ ಕೆಳಗಿನ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲೆ ಸೈಕಲ್ ಪಥ ಆರಂಭವಾಗಲಿದೆ.

ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ

ಒಟ್ಟು 99 ಕೋಟಿ ವೆಚ್ಚದಲ್ಲಿ ಈ ಪಥ ನಿರ್ಮಿಸಲಾಗುತ್ತಿದೆ. ವೆಚ್ಚದ ಬಗ್ಗೆ ಮಾರ್ಚ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಕಬ್ಬನ್ ಪಾರ್ಕ್ ಬಳಿ 2 ಕಿ.ಮೀ ವ್ಯಾಪ್ತಿಯಲ್ಲಿ ಸೈಕಲ್ ಪಥ ನಿರ್ಮಿಸಲಾಗಿದೆ.

BBMP to construct bicycle tracks along metro stations

ಬಾಡಿಗೆ ಸೈಕಲ್ ಪಥವನ್ನು ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ನಿರ್ಮಿಸಲು ಸಿದ್ಧತೆ ಆರಂಭಿಸಲಾಗಿದೆ. ಅದಕ್ಕಾಗಿ 125 ಕಿ.ಮೀ ಉದ್ದದ ಸೈಕಲ್ ಪಥ ನಿರ್ಮಿಸಬೇಕಿದೆ. ಅದರಲ್ಲಿ ಬಿಬಿಎಂಪಿ 75 ಕಿ.ಮೀ ಉದ್ದದ ಸೈಕಲ್ ಪಥ ನಿರ್ಮಿಸಿಕೊಡಲಿದೆ.

ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ

ಡಲ್ಟ್ ರೂಪಿಸಿರುವ ಯೋಜನೆಯಂತೆ ಪ್ರತಿ 250ರಿಂದ 350 ಮೀಟರ್ ದೂರದಲ್ಲಿ ಒಂದು ಸೈಕಲ್ ನಿಲುಗಡೆ ತಾಣವನ್ನು ಸ್ಥಾಪಿಸಲಾಗುತ್ತಿದೆ. ಒಟ್ಟು 25 ಕಿ.ಮೀ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೊಳ್ಳುತ್ತಿದ್ದು, 345 ಸೈಕಲ್ ನಿಲುಗಡೆ ತಾಣವನ್ನು ನಿರ್ಮಾಣಗೊಳ್ಳುತ್ತಿದೆ. ಅದರಲ್ಲಿ ಆರು ಸಾವಿರ ಬಾಡಿಗೆ ಸೈಕಲ್ ದೊರೆಯುವಂತೆ ಮಾಡಲಾಗುತ್ತಿದೆ.

ನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ನಮ್ಮ ಮೆಟ್ರೋ ಮಾರ್ಗ ಬದಲು ನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ನಮ್ಮ ಮೆಟ್ರೋ ಮಾರ್ಗ ಬದಲು

ಬಾಡಿಗೆ ಸೈಕಲ್ ಪಡೆಯಬೇಕಿದ್ದರೆ ಸ್ವೈಪಿಂಗ್ ಕಾರ್ಡ್ ಮೂಲಕ ನಿಲುಗಡೆ ತಾಣದಲ್ಲಿ ಅಳವಡಿಸಲಾಗುವ ಯಂತ್ರದಲ್ಲಿ ಹಣ ಪಾವತಿಸಿ ತೆಗೆದುಕೊಂಡು ಹೋಗಬೇಕಿದೆ. ಹಾಗೆಯೇ, ಸೈಕಲ್‌ಗಳನ್ನು ಗಂಟೆ ಲೆಕ್ಕದಲ್ಲಿ ಬಾಡಿಗೆಗೆ ನೀಡಲು ನಿರ್ಧರಿಸಲಾಗಿದ್ದು, ಪ್ರತಿ ಗಂಟೆಗೆ 5 ರೂ ನಿಗದಿ ಮಾಡುವುದರ ಬಗ್ಗೆ ಚಿಂತನೆ ನಡೆದಿದೆ.

English summary
In a bid to provide last mile connectivity for Metro commuters, The BBMP will construct bicycle tracks alond metro reaches in the city by the end of this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X