ಜಾಲಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಿದೆ ಬಿಬಿಎಂಪಿ

ಬೆಂಗಳೂರು, ಜನವರಿ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಲಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಒಟ್ಟು 47 ಕೋಟಿ ರೂ.ಗಳಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಬೆಂಗಳೂರು-ತುಮಕೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಜಾಲಹಳ್ಳಿಯಲ್ಲಿ ಕೆಳ ಸೇತುವೆ ನಿರ್ಮಾಣವಾಗುತ್ತಿದೆ. ಸುಬ್ರತೊ ಮುಖರ್ಜಿ ರಸ್ತೆ ಮತ್ತು ಪೀಣ್ಯ ಇಂಡಸ್ಟ್ರಿಯಲ್ ರಿಂಗ್ ನಡುವೆ ಕೆಳ ಸೇತುವೆ ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ.

ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಜಾಲಹಳ್ಳಿ ಜಂಕ್ಷನ್ ಅಂಡರ್ ಪಾಸ್ ನಿರ್ಮಾಣದ ಬಳಿಕ ಸಿಗ್ನಲ್ ರಹಿತ ಜಂಕ್ಷನ್ ಆಗ ಬದಲಾಗಲಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, 2023ರ ಮೇ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

BBMP To Construct Underpass At Jalahalli Cross

ಸದಾ ವಾಹನ ದಟ್ಟಣೆಯಿಂದ ಕೂಡಿರುವ ಜಾಲಹಳ್ಳಿಯಲ್ಲಿ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡೆಬೇಕು. ಅಂಡರ್ ಪಾಸ್ ನಿರ್ಮಾಣವಾದರೆ ಪಾದಚಾರಿಗಳ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರನ್ನುಇತರ ಜಿಲ್ಲೆಗಳ ಜೊತೆ ಜೋಡಿಸುವ ಪ್ರಮುಖ ರಸ್ತೆ ಇದಾಗಿದೆ. ಆದ್ದರಿಂದ, ಅಂಡರ್ ಪಾಸ್ ನಿರ್ಮಾಣಕ್ಕಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ನಮ್ಮ ಮೆಟ್ರೋ ಸುರಂಗ ಮಾರ್ಗ ಕೊರೆಯುವ ಮಾದರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಕಾರ್ಯ ನಡೆಯಲಿದೆ.

ಅಂಡರ್ ಪಾಸ್ ನಿರ್ಮಾಣದ ವರ್ಕ್ ಆರ್ಡರ್ ಪಾಸ್ ಮಾಡಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭವಾಗಲಿದೆ. ನಮ್ಮ ಮೆಟ್ರೋ ನಿಲ್ದಾಣದ ಸಮೀಪದಲ್ಲೇ ಅಂಡರ್ ಪಾಸ್ ನಿರ್ಮಾಣವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+