ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಲಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಿದೆ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಜನವರಿ 19 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಲಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಒಟ್ಟು 47 ಕೋಟಿ ರೂ.ಗಳಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಬೆಂಗಳೂರು-ತುಮಕೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಜಾಲಹಳ್ಳಿಯಲ್ಲಿ ಕೆಳ ಸೇತುವೆ ನಿರ್ಮಾಣವಾಗುತ್ತಿದೆ. ಸುಬ್ರತೊ ಮುಖರ್ಜಿ ರಸ್ತೆ ಮತ್ತು ಪೀಣ್ಯ ಇಂಡಸ್ಟ್ರಿಯಲ್ ರಿಂಗ್ ನಡುವೆ ಕೆಳ ಸೇತುವೆ ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ.

ದಕ್ಷಿಣ ಭಾರತದಲ್ಲಿಯೇ ಕರ್ನಾಟಕದ ರಸ್ತೆ ಅಪಾಯಕಾರಿ! ದಕ್ಷಿಣ ಭಾರತದಲ್ಲಿಯೇ ಕರ್ನಾಟಕದ ರಸ್ತೆ ಅಪಾಯಕಾರಿ!

ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಜಾಲಹಳ್ಳಿ ಜಂಕ್ಷನ್ ಅಂಡರ್ ಪಾಸ್ ನಿರ್ಮಾಣದ ಬಳಿಕ ಸಿಗ್ನಲ್ ರಹಿತ ಜಂಕ್ಷನ್ ಆಗ ಬದಲಾಗಲಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, 2023ರ ಮೇ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಸಂಚಾರ ದಟ್ಟಣೆ : ಜಾಲಹಳ್ಳಿ ಜಂಕ್ಷನ್‌ನಲ್ಲಿ ಅಂಡರ್ ಪಾಸ್‌ ನಿರ್ಮಾಣ ಸಂಚಾರ ದಟ್ಟಣೆ : ಜಾಲಹಳ್ಳಿ ಜಂಕ್ಷನ್‌ನಲ್ಲಿ ಅಂಡರ್ ಪಾಸ್‌ ನಿರ್ಮಾಣ

BBMP To Construct Underpass At Jalahalli Cross

ಸದಾ ವಾಹನ ದಟ್ಟಣೆಯಿಂದ ಕೂಡಿರುವ ಜಾಲಹಳ್ಳಿಯಲ್ಲಿ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡೆಬೇಕು. ಅಂಡರ್ ಪಾಸ್ ನಿರ್ಮಾಣವಾದರೆ ಪಾದಚಾರಿಗಳ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ವೈಟ್ ಟಾಪಿಂಗ್: ಮರಿಗೌಡ ರಸ್ತೆ ಬಂದ್, ಬದಲಿ ಮಾರ್ಗದ ಮಾಹಿತಿ ವೈಟ್ ಟಾಪಿಂಗ್: ಮರಿಗೌಡ ರಸ್ತೆ ಬಂದ್, ಬದಲಿ ಮಾರ್ಗದ ಮಾಹಿತಿ

ಬೆಂಗಳೂರನ್ನುಇತರ ಜಿಲ್ಲೆಗಳ ಜೊತೆ ಜೋಡಿಸುವ ಪ್ರಮುಖ ರಸ್ತೆ ಇದಾಗಿದೆ. ಆದ್ದರಿಂದ, ಅಂಡರ್ ಪಾಸ್ ನಿರ್ಮಾಣಕ್ಕಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ನಮ್ಮ ಮೆಟ್ರೋ ಸುರಂಗ ಮಾರ್ಗ ಕೊರೆಯುವ ಮಾದರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಕಾರ್ಯ ನಡೆಯಲಿದೆ.

ಅಂಡರ್ ಪಾಸ್ ನಿರ್ಮಾಣದ ವರ್ಕ್ ಆರ್ಡರ್ ಪಾಸ್ ಮಾಡಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭವಾಗಲಿದೆ. ನಮ್ಮ ಮೆಟ್ರೋ ನಿಲ್ದಾಣದ ಸಮೀಪದಲ್ಲೇ ಅಂಡರ್ ಪಾಸ್ ನಿರ್ಮಾಣವಾಗುತ್ತಿದೆ.

English summary
Bruhat Bengaluru Mahanagara Palike (BBMP) has proposed to construct underpass at Jalahalli cross. The cost of the project is Rs 47 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X