ಬಿಬಿಎಂಪಿ ವಿಭಜನೆ: ನಾಲ್ವರು ವಿಶೇಷ ಆಯುಕ್ತರ ನೇಮಕ
ಬೆಂಗಳೂರು, ಸೆಪ್ಟೆಂಬರ್ 09 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಲು ಕರ್ನಾಟಕ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ನಾಲ್ವರು ವಿಶೇಷ ಆಯುಕ್ತರನ್ನು ಇದಕ್ಕಾಗಿ ನೇಮಕ ಮಾಡಲಾಗುತ್ತದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಬಿಎಂಪಿಯಲ್ಲಿ 8 ವಲಯಗಳಿವೆ. ಈ ಪೈಕಿ 2 ವಲಯಕ್ಕೆ ಒಬ್ಬರು ವಿಶೇಷ ಆಯುಕ್ತರ ನೇಮಕವಾಗಲಿದೆ.
ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 198 ವಾರ್ಡ್‌ಗಳಿರುವ ಬಿಬಿಎಂಪಿ ವಿಭಜನೆ ಕುರಿತು ಚರ್ಚೆ ನಡೆದಿತ್ತು. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ. ಎಸ್. ಪಾಟೀಲ್ ನೇತೃತ್ವದ ಸಮಿತಿ ಪಾಲಿಕೆ ವಿಭಜನೆ ಕುರಿತು ವರದಿ ನೀಡಿತ್ತು.
198 ವಾರ್ಡ್‌ನ ಬಿಬಿಎಂಪಿ ವಿಭಜನೆಗೆ ಸರ್ಕಾರದ ಒಪ್ಪಿಗೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈಗ ಬಿಜೆಪಿ ಸರ್ಕಾರ ಪಾಲಿಕೆಯನ್ನು ವಾಸ್ತವಿಕ ರೂಪದಲ್ಲಿ ವಿಭಜನೆ ಮಾಡಲು ಮುಂದಾಗಿದೆ.
ಬಿಬಿಎಂಪಿ ವಿಭಜನೆ ಅನಿವಾರ್ಯ : ಸಮಿತಿ ವರದಿ
198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯನ್ನು ವಿಭಜನೆ ಮಾಡಿದರೆ ಸುಗಮ ಆಡಳಿತಕ್ಕೆ ಅನುಕೂಲವಾಗಲಿದೆ ಎಂಬುದು ಸರ್ಕಾರದ ಚಿಂತನೆ. ಆದ್ದರಿಂದ, ನಾಲ್ವರು ಐಎಎಸ್ ಅಧಿಕಾರಿಗಳನ್ನು ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗುತ್ತದೆ.
"ಬಿಬಿಎಂಪಿಯಲ್ಲಿ 8 ವಲಯಗಳಿವೆ. 2 ವಲಯಕ್ಕೆ ಒಬ್ಬರು ವಿಶೇಷ ಆಯುಕ್ತರನ್ನು ನೇಮಿಸಲಾಗುತ್ತದೆ. ಜನಸ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಲಾಗುತ್ತದೆ. 15 ದಿನದಲ್ಲಿ ಮತ್ತೊಂದು ಸುತಿನ ಸಭೆ ನಡೆಸಲಾಗುವುದು" ಎಂದು ಯಡಿಯೂರಪ್ಪ ಹೇಳಿದ್ದಾರೆ.
"ಬೆಂಗಳೂರು ನಗರದಲ್ಲಿ ದಿನದ 24 ಗಂಟೆಯೂ ಸ್ವಚ್ಛತೆಯ ಕೆಲಸ ಮಾಡಲು ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ರಸ್ತೆಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.