Property Tax: ಬಿಬಿಎಂಪಿ to ಗ್ರೇಟರ್ ಬೆಂಗಳೂರು: ಆಸ್ತಿ ತೆರಿಗೆ ಬದಲಾವಣೆ ಆಗಲಿದೆಯೇ ?
ಬೆಂಗಳೂರಿನಲ್ಲಿ ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗುತ್ತಿದೆ. ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಿನ ದಿನಗಳಲ್ಲಿ ತನ್ನ ಅಸ್ತಿತ್ವವನ್ನು ಸಂಪೂರ್ಣವಾಗಿ ಕಳೆದುಕೊಳ್ಳಲಿದೆ. ಮೇ 15ರಿಂದಲೇ ಬಿಬಿಎಂಪಿಯ ಯುಗಾಂತ್ಯ ಶುರುವಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮೂರು ಪಾಲಿಕೆ ಅಥವಾ ಐದು ಪಾಲಿಕೆಗಳು ಸೃಷ್ಟಿಸುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು. ಬೆಂಗಳೂರಿನಲ್ಲಿ ಆಸ್ತಿ ತೆರಿಗೆಯಲ್ಲಿ ಏನಾದರೂ ಬದಲಾವಣೆ ಆಗಲಿದೆಯೇ. ಬಿಬಿಎಂಪಿಯು ಗ್ರೇಟರ್ ಬೆಂಗಳೂರು ಆಗಿ ಬದಲಾವಣೆ ಆಗುವುದರಿಂದ ಏನೆಲ್ಲಾ ಬದಲಾಣೆಗಳು ಬೆಂಗಳೂರಿನಲ್ಲಿ ಆಗಲಿದೆ ಎನ್ನುವ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ನಗರದ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬದಲಾವಣೆ ಮಾಡಲಾಗುತ್ತಿದೆ. ಅಂದರೆ ಇನ್ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆಡಳಿತವಾಗಿ ಬದಲಾಗಲಿದೆ. ಸುದೀರ್ಘ 17 ವರ್ಷಗಳ ಬಿಬಿಎಂಪಿ ಯುಗಾಂತ್ಯದ ನಡುವೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಎನೆಲ್ಲಾ ಬದಲಾವಣೆಗಳು ಆಗಲಿವೆ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಯಾವುದೇ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಅಥವಾ ಹಾಲಿ ಬಿಬಿಎಂಪಿಯಿಂದ ನಿಖರ ಮಾಹಿತಿ ಜನರಿಗೆ ಲಭ್ಯವಾಗದೆ ಇರುವುದು ಸಹ ಕೆಲವೊಂದು ಗೊಂದಲಗಳಿಗೆ ಕಾರಣವಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ಬಂದಿದೆ. ಅದೇನು ಎನ್ನುವ ವಿವರ ನೋಡೋಣ.

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರದಿಂದ ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತಕ್ಕೆ ಬರುತ್ತಿದೆ. ಮುಂದುವರಿದು ಗ್ರೇಟರ್ ಬೆಂಗಳೂರು ಆಡಳಿತ ವಹಿಸಿಕೊಳ್ಳುವವರೆಗೂ ತಾತ್ಕಾಲಿಕವಾಗಿ ಬಿಬಿಎಂಪಿ ಮುಂದುವರಿಯಲಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಬಿಬಿಎಂಪಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗಳು ಆಗಲಿವೆ. ಇದರಲ್ಲಿ ಬಿಬಿಎಂಪಿಯ ವಿಭಜನೆಯೂ ಸೇರಿದೆ. ಹೊಸ ಗಡಿಗಳು ನಿಗದಿಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಬೆಂಗಳೂರಿಗೆ ಸೇರ್ಪಡೆಯಾಗುವ ಸಾಧ್ಯತೆಯೂ ಇದೆ.
ಆಸ್ತಿ ತೆರಿಗೆ ವಿಚಾರದಲ್ಲಿ ಈಗ ಬದಲಾವಣೆ ಇಲ್ಲ: ಇನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹೊಸ ಮಾದರಿಯ ಆಸ್ತಿ ತೆರಿಗೆ ನೀತಿ ಜಾರಿಯಾಗುವ ಸಾಧ್ಯತೆ ಇದೆ. ಸದ್ಯದ ಮಟ್ಟಿಗೆ ಬೆಂಗಳೂರಿನಲ್ಲಿ ಆಸ್ತಿದಾರರಿಂದ ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆ ವಿಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಬಿಬಿಎಂಪಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಒಂದೊಂದೆ ಯೋಜನೆಗಳು ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಆಗಲಿದ್ದು. ಆಗ ಬದಲಾವಣೆಗಳು ಆಗುವ ಸಾಧ್ಯತೆ ಇದೆ.
ಜೆಡಿಎಸ್ ಟ್ವೀಟ್: ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿಯ ಯುಗಾಂತ್ಯ ಹಾಗೂ ಗ್ರೇಟರ್ ಬೆಂಗಳೂರಿನ ಬಗ್ಗೆ ಪರ - ವಿರೋಧ ಚರ್ಚೆಗಳು ನಡೆದಿವೆ. ಅಲ್ಲದೇ ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸಹ ವಿರೋಧ ವ್ಯಕ್ತಪಡಿಸಿವೆ. ಅಯೋಗ್ಯರು ಹೆಸರನ್ನಷ್ಟೇ ಬದಲಿಸಬಲ್ಲರು, ಮೇರು ನಾಯಕರು ಇತಿಹಾಸವನ್ನು ಸೃಷ್ಟಿಸಿರುತ್ತಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಅಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಮಾಡಿದ್ದು ಎಚ್.ಡಿ ಕುಮಾರಸ್ವಾಮಿ ಅವರು. ರಾಮನಗರ ಜಿಲ್ಲೆ ಮಾಡಿದ್ದು - ಹೆಚ್.ಡಿ. ಕುಮಾರಸ್ವಾಮಿ ಆದರೆ, ದ್ವೇಷ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ಡಿ.ಕೆ ಶಿವಕುಮಾರ್ ಅವರು ಅಭಿವೃದ್ಧಿ ಬಿಟ್ಟು ಮಾಡುತ್ತಿರುವುದು ಬರೀ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಅಭಿವೃದ್ಧಿಯಲ್ಲಿ ಹಿಂದೆ ಹಿಂದೆ, ಹೆಸರು ಬದಲಿಸುವುದರಲ್ಲಿ ಮುಂದೆ ಮುಂದೆ ಇದ್ದಾರೆ ಡಿಕೆಶಿ. "ಬೆಂಗಳೂರು" ಹೆಸರನ್ನೇ ಬಂಡವಾಳ ಮಾಡಿಕೊಂಡಿರುವ ಡಿಕೆಶಿ ತನ್ನ ಆಸ್ತಿಯನ್ನು ದಿನೇ ದಿನೇ ದುಪ್ಪಟ್ಟು ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದೆ.












Click it and Unblock the Notifications