• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; ಕೋವಿಡ್ ಸೋಂಕಿತರ ಕೈಗೆ ಸೀಲ್

|
Google Oneindia Kannada News

ಬೆಂಗಳೂರು, ಏಪ್ರಿಲ್ 17; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೋಂಕು ಹರಡುವಿಕೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೊರೊನಾ ಸೋಂಕು ದೃಢಪಟ್ಟವರ ಕೈಗೆ ಮೊದಲಿನಂತೆ ಸೀಲ್ ಹಾಕಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ

"ಈ ಮೂಲಕ ಸೋಂಕಿತರಿಂದ ಹರಡುವಿಕೆಯನ್ನು ತಡೆಯುವುದು ನಮ್ಮ ಉದ್ದೇಶ. ನಿನ್ನೆ ಪಾಲಿಕೆಯ 8 ವಲಯಗಳ ಮಟ್ಟದಲ್ಲಿ ಕೋವಿಡ್‌ ಸೋಂಕು ನಿಯಂತ್ರಣದ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಚರ್ಚಿಸಿದೆವು" ಎಂದು ಆಯುಕ್ತರು ಹೇಳಿದ್ದಾರೆ.

ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಹಾರಿಬಿದ್ದು ಓಡಿದ ಜನಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಹಾರಿಬಿದ್ದು ಓಡಿದ ಜನ

ಬೆಂಗಳೂರು ನಗರದಲ್ಲಿ ಶುಕ್ರವಾರ 9917 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 5,22,438ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 79,616.

ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಈಗಾಗಲೇ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5ರ ತನಕ ಇದು ಜಾರಿಯಲ್ಲಿರುತ್ತದೆ.

   ಸರ್ವಪಕ್ಷ ಸಭೆ ಮುಂದೂಡಿಕೆ ಬೆನ್ನಲ್ಲೇ ಹಿರಿಯ ಸಚಿವರ ಸಭೆ | Oneindia Kannada

   English summary
   In a tweet BBMP commissioner Gaurav Gupta said that BBMP has decided to hand-stamp the Covid infected in order to manage the process in an organised way.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X