Vehicle Parking: ಬೆಂಗಳೂರಿನ ಈ 14 ರಸ್ತೆಗಳಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ
ದುಬಾರಿ ದುನಿಯಾದಲ್ಲಿ ಬೇಸತ್ತಿರುವ ಬೆಂಗಳೂರಿಗರಿಗೆ ಶೀಘ್ರದಲ್ಲೇ ಮತ್ತೊಂದು ಜೇಬಿಗೆ ಕತ್ತರಿ ಬೀಳುವ ವಿಚಾರ ಹೊರಬಿದ್ದಿದೆ. ನಗರದ ಆಯ್ದ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕವನ್ನು ಪರಿಚಯಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ವರದಿಗಳ ಪ್ರಕಾರ ದ್ವಿಚಕ್ರ ವಾಹನಗಳಿಗೆ ಗಂಟೆಗೆ 15 ರೂಪಾಯಿ ಹಾಗೂ ಕಾರುಗಳಿಗೆ 30 ರೂಪಾಯಿ ಶುಲ್ಕ ಸಂಗ್ರಹಿಸಲು ನಿರ್ಧರಿಸಿದೆ. ಈ ಕ್ರಮವು ಮೊದಲ ಹಂತದಲ್ಲಿ ವಾರ್ಷಿಕವಾಗಿ 7 ಕೋಟಿ ರೂಪಾಯಿಗಳನ್ನು ಗಳಿಸುವ ನಿರೀಕ್ಷೆಯಿದೆ. ಯಾವ ರಸ್ತೆಗಳಲ್ಲಿ ಈ ಪಾರ್ಕಿಂಗ್ ವ್ಯವಸ್ಥೆ ಬರಲಿದೆ ಎಂಬ ಮಾಹಿತಿ ಇಲ್ಲಿದೆ..
ನಗರದ ವಾಣಿಜ್ಯ ಪ್ರದೇಶಗಳಲ್ಲಿ ಪೇ ಆಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೆ ತರಲು ಬಿಬಿಎಂಪಿ ಯೋಜಿಸುತ್ತಿದೆ. ಮೊದಲ ಹಂತದಲ್ಲಿ ನಗರದ ಪ್ರಮುಖ ರಸ್ತೆಗಳಾದ ಎಂ.ಜಿ ರಸ್ತೆ, ಬ್ರಿಗೇಡ್ ರೋಡ್ ಮತ್ತು ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ 14 ರಸ್ತೆಗಳಲ್ಲಿ ಈ ಪಾರ್ಕಿಂಗ್ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

ಇನ್ನು ಮುಂದೆ ಈ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಹಣ ಪಾವತಿ ಮಾಡಬೇಕಾಗುತ್ತೆ. ಪಾರ್ಕಿಂಗ್ ಶುಲ್ಕವನ್ನು ವಿಧಿಸುವುದು ಹಾಗೂ ಅದರ ನಿರ್ವಹಣೆಯನ್ನು ಗುತ್ತಿಗೆದಾರರು ನಿರ್ವಹಿಸಲಿದ್ದಾರೆ. ವಾಹನ ಮಾಲೀಕರು ತಮ್ಮ ವಾಹನಗಳನ್ನು ಈ ರಸ್ತೆಗಳಲ್ಲಿ ನಿಲ್ಲಿಸಬೇಕಾದರೆ ಶುಲ್ಕ ಪಾವತಿಸಲೇಬೇಕು. ಇದು ಪಾರ್ಕಿಂಗ್ ನೀತಿ 2.0ನ ಭಾಗ ಎನ್ನಲಾಗಿದೆ. ಇದನ್ನು ನಗರ ಭೂ ಸಾರಿಗೆ ನಿರ್ದೇಶನಾಲಯ (ಡಲ್ಟ್) ಅಭಿವೃದ್ಧಿಪಡಿಸಿದ್ದು, ಎಲ್ಲ ನಗರ ಪ್ರದೇಶಗಳಲ್ಲಿ ಪಾವತಿಸಿ ಪಾರ್ಕಿಂಗ್ ಮಾಡುವ ವ್ಯವಸ್ಥೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದೆ.
ಬಿಬಿಎಂಪಿ ಮೊದಲ ಹಂತದಲ್ಲಿ ಬರಲಿರುವ ಪೇ-ಅಂಡ್-ಪಾರ್ಕ್ ವ್ಯವಸ್ಥೆಯಿಂದ ವಾರ್ಷಿಕ 7 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ. ಈ ಯೋಜನೆಯನ್ನು 14 ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಜಾರಿಗೆ ತರಲಾಗುತ್ತಿದ್ದು, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಚರ್ಚ್ ಸ್ಟ್ರೀಟ್, ಲ್ಯಾವೆಲ್ಲೆ ರಸ್ತೆ ಮತ್ತು ಕಸ್ತೂರಬಾ ರಸ್ತೆಯಂತಹ ಪ್ರಮುಖ ಜಾಗಗಳಲ್ಲಿ ಜಾರಿಯಾಗಲಿದೆ. ಖಾಸಗಿ ಗುತ್ತಿಗೆದಾರರೇ ಇದನ್ನು ನಿರ್ವಹಿಸಲಿದ್ದಾರೆ.

ಈ ಹೊಸ ವ್ಯವಸ್ಥೆಯಡಿ ಬೈಕ್‌ಗಳಿಗೆ ಪ್ರತಿ ಗಂಟೆಗೆ 15 ರೂಪಾಯಿ ಹಾಗೂ ಕಾರುಗಳಿಗೆ ಗಂಟೆಗೆ 30 ರೂಪಾಯಿ ಪಾರ್ಕಿಂಗ್ ಶುಲ್ಕ ಇರಲಿದೆ. ಆದರೆ ಇದು ಕೂಡ ತುಂಬಾ ದುಬಾರಿ ಎಂದು ಆಗಲೇ ವಿರೋಧ ವ್ಯಕ್ತವಾಗುತ್ತಿದೆ. ಒಂದು ಗಂಟೆಗಿಂತ ಹೆಚ್ಚು ಕಾಲ ನಿಲ್ಲಿಸಿದ ವಾಹನಗಳಿಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯೂ ಇಲ್ಲ ಎನ್ನಲಾಗುತ್ತಿದೆ.
ಬೆಂಗಳೂರಿನ ಶೇ 50ರಷ್ಟು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸುಮಾರು 13,000 ಎಕರೆ ಭೂಮಿಯ ಅಗತ್ಯವಿದೆ ಎಂದು ಡಲ್ಟ್ ಅಂದಾಜಿಸಿದ್ದು, ಪ್ರಸ್ತುತ ವಾಹನಗಳ ಸಂಖ್ಯೆ ಕೂಡ ಏರುತ್ತಲೇ ಇದೆ. ಮುಂದಿನ ದಶಕದಲ್ಲಿ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ನಗರದ ಮೂಲಸೌಕರ್ಯಕ್ಕೆ ಮತ್ತಷ್ಟು ತೊಂದರೆಯಾಗಲಿದೆ ಎಂದು ಕಳವಳವೂ ವ್ಯಕ್ತವಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications