BBMP: ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ನ್ಯೂಸ್ ಕೊಟ್ಟ ಪಾಲಿಕೆ
ಬೆಂಗಳೂರು, ಮಾರ್ಚ್ 03: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಈಗಾಗಲೇ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಗುರುತಿಸಲಾಗಿದೆ. ಈ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ವಹೀವಾಟಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಗುರುತಿನ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಿರ್ದೇಶಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಸೋಮವಾರ (ಮಾರ್ಚ್ 03) ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಸುಮಾರು 27,000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಎಲ್ಲರಿಗೂ ಆದಷ್ಟು ಶೀಘ್ರವೇ ಗುರುತಿನ ಚೀಟಿ ವಿತರಣೆ ಮಾಡಬೇಕು ಎಂದು ಅವರು ಸೂಚಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕು ಎಂಬುದನ್ನು ಅಂತಿಮಗೊಳಿಸಿ, ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು. ಆ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು ಸೂಚಿಸಿದರು.
ಶಾಲೆಗಳಿಂದ ಹೊರಗುಳಿದ ಮಕ್ಕಳು: ಸಮೀಕ್ಷೆ ನಡೆಸಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಲಯವಾರು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಈ ಪೈಕಿ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ತ್ವರಿತಗತಿಯಲ್ಲಿ ಗುರುತಿಸುವ ಕಾರ್ಯವನ್ನು ನಡೆಸಲು ನಿರ್ದೇಶಿಸಿದರು.

ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ
ಕಲ್ಯಾಣ ವಿಭಾಗದಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ ಯಾವ ಯಾವ ಕಾರ್ಯಕ್ರಮಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ವಲಯವಾರು ಪರಿಶೀಲಿಸಬೇಕು. ಆ ಬಳಿಕ ಅರ್ಹ ಫಲಾನುಭವಿಗಳಿಗೆ ಕಾರ್ಯಕ್ರಮಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಯ ವಿಷಯಗಳ ಕುರಿತು ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ರಮ್ಯಾ, ಕರೀಗೌಡ, ಸ್ನೇಹಲ್ ಹಾಗೂ ಅಭಿಯಂತರರ ಜೊತೆಗೆ ಚರ್ಚಿಸಿ ಸೂಕ್ತ ತಿರ್ಮಾನ ಕೈಗೊಳ್ಳಲಾಯಿತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications