Property Tax: ₹800 ಕೋಟಿ ಆಸ್ತಿ ತೆರಿಗೆ ಬಾಕಿ, ಲಕ್ಷಾಂತರ ಆಸ್ತಿ ಮಾಲೀಕರಿಗೆ ಬಿಗ್ ಶಾಕ್...BBMP

ಬೆಂಗಳೂರು, ಜುಲೈ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿ-ಖಾತಾ ಆಸ್ತಿ ಮಾಲೀಕರಿಗೆ ಎ ಖಾತಾ ಮಾನ್ಯತೆಯನ್ನು ನೀಡಲಾಗಿತ್ತುದೆ. ಮತ್ತೊಂದೆಡೆ ತೆರಿಗೆ ಕಟ್ಟದ ಲಕ್ಷಾಂತರ ಆಸ್ತಿ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಗೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಈ ಕುರಿತು ಪಾಲಿಕೆ ಮುಖ್ಯ ಆಯುಕ್ತರು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಸೋಮವರ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಮಾರ 3.75 ಲಕ್ಷ ಸುಸ್ತಿದಾರಿಗೆ ನೋಟಿಸ್ ಜಾರಿ ಮಾಡಿ ಬಾಕಿ ತೆರಿಗೆ ವಸೂಲಿ ಮಾಡಲಾಗುವುದೆಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

BBMP to Issue Notices to 3 75 Lakh Property Tax Defaulters in Bengaluru

800 ಕೋಟಿ ಆಸ್ತಿ ತೆರಿಗೆ ಬಾಕಿ!

ಬೆಂಗಳೂರಲ್ಲಿ ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು ಹೆಚ್ಚು ಆದ್ಯೆತೆ ನೀಡುತ್ತಿದ್ದೇವೆ. ಇನ್ನೂ ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ 3.75 ಲಕ್ಷ ಸುಸ್ತಿದಾರರು ಸುಮಾರು 700 ರಿಂದ 800 ಕೋಟಿ ರೂ. ಪಾಲಿಕೆಗೆ ಬಾಕಿ ಆಸ್ತಿ ತೆರಿಗೆ ಪಾವತಿಸಬೇಕಿದೆ. ಈ ನಿಟ್ಟಿನಲ್ಲಿ ಎಸ್.ಎಂ.ಎಸ್ ಹಾಗೂ ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಲಾಗುವುದು. ಈಗಾಗಲೇ ಪಾವತಿಸಿದ್ದಲ್ಲಿ ಯಾವುದೇ ಸಮಸ್ಯೆ ಇಲ್ಲ. ಪಾವತಿಸಬೇಕಿದ್ದಲ್ಲಿ ಕೂಡಲೇ ಬಾಕಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇ-ಖಾತೆ: 50,000 ಕ್ಕೂ ಅಧಿಕ ಅರ್ಜಿ ಸಲ್ಲಿಕೆ

ನಗರದಲ್ಲಿ ಹೊಸ ಖಾತಾಗಾಗಿ 50 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಪಾಲಿಕೆಗೆ ಸಲ್ಲಿಕೆಯಾಗಿವೆ. ಅವುಗಳನ್ನು ಆದ್ಯತೆ ಮೇರೆಗೆ ಮಾಡಬೇಕು. ಇದರಿಂದ ಪಾಲಿಕೆಗೆ ಹೆಚ್ಚು ಆಸ್ತಿ ತೆರಿಗೆ ಸಂಹ್ರಹಿಸಲು ಸಹಕಾರಿಯಾಗಲಿದ್ದು, ಅದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಎ-ಖಾತಾಗೆ ವಿತರಣೆಗೆ ಆನ್ ಲೈನ್ ವ್ಯವಸ್ಥೆ ಬಗ್ಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎ-ಖಾತಾಗಳನ್ನು ನೀಡುವ ಸಲುವಾಗಿ ಕರ್ನಾಟಕ ಸರ್ಕಾರವು ಆದೇಶದ ಹೊರಡಿಸಿದೆ. ಅದರಂತೆ, ನಾಗರಿಕರು ಎ-ಖಾತಾಗೆ ಅರ್ಜಿ ಸಲ್ಲಿಸುವ ಸಲುವಾಗಿ ಶೀಘ್ರ ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸುವಂತೆ ಹೇಳಿದರು.

BBMP to Issue Notices to 3 75 Lakh Property Tax Defaulters in Bengaluru

ರಸ್ತೆ ಗುಂಡಿಗಳ ಮುಕ್ತಿಗೆ ಸೂಚನೆ

ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಆದ್ಯತೆಯ ಮೇಲೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆಗಾಲದ ವೇಳೆ ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಅನ್ನು ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕು.

ಡೆಂಗ್ಯೂ 1,685 ಪ್ರಕರಣಗಳು ಪತ್ತೆ

ಮಳೆ ಬಂದರೆ ಸಾಕು ಯಾವುದೇ ರಸ್ತೆಗಳಲ್ಲಿ ಜಲಾವೃತವಾಗದಂತೆ ನೋಡಿಕೊಳ್ಳಬೇಕು. ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಗಳ ಮೂಲಕ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳು, ಗ್ರೇಟಿಂಗ್‌ಗಳ ಬಳಿ ಸ್ವಚ್ಛತೆ ಮಾಡಿ ರಸ್ತೆ ಮೇಲೆ ಬೀಳುವ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ಇದಷ್ಟೇ ಅಲ್ಲದೇ ನಗರದಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕು. ಕಳೆದ ಒಂದು ವಾರದಲ್ಲಿ 69 ಪ್ರಕರಣಗಳು ಪತ್ತೆಯಾಗಿವೆ. ಜುಲೈ ತಿಂಗಳಲ್ಲಿ 442 ಪ್ರಕರಣಗಳು ವರದಿ ಆಗಿವೆ. 2025ನೇ ಜನವರಿಯಿಂದ ಇಲ್ಲಿಯವರೆಗೆ 1,685 ಪ್ರಕರಣಗಳು ಪತ್ತೆಯಾಗಿವೆ. ಈ ಸಂಬಂಧ ಲಾರ್ವಾ ಉತ್ಪತ್ತಿ ಆಗುವ ತಾಣಗಳನ್ನು ಗುರುತಿಸಿ ಔಷಧಿ ಸಿಂಪರಣೆ ಮಾಡಿ ನಿರ್ಮೂಲನೆ ಮಾಡಬೇಕು. ಜಾಗೃತಿ ಮೂಡಿಸಬೇಕು.

ನಗರದಲ್ಲಿ ವಿವಿಧ ಸಮಸ್ಯೆಗಳ ಇತ್ಯರ್ಥಪಡಿಸುವ ಸಲುವಾಗಿ ಸಹಾಯ 2.0 ತಂತ್ರಾಂಶದಲ್ಲಿ ದೂರಗಳು ಬರುತ್ತವೆ. ಅವುಗಳನ್ನು ಕಾಲಮಿತಿಯೊಳಗಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳು ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+